ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ʼಉಪೇಂದ್ರʼ ಚಿತ್ರದ 25 ವರ್ಷದ ಸಂಭ್ರಮಾಚರಣೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್‌ರನ್ನು ಕರೆತರುವ ಬಗ್ಗೆ ಚರ್ಚೆ ಶುರುವಾಗಿದೆ.
ಸ್ವತಃ ಉಪೇಂದ್ರ ಅವರೇ ನಿರ್ದೇಶಿಸಿ ನಟಿಸಿದ್ದ ಉಪೇಂದ್ರ ಸಿನಿಮಾ ಭಾರೀ ದಾಖಲೆ ನಿರ್ಮಿಸಿತ್ತು. ಈ ಚಿತ್ರವನ್ನು ಶೀಘ್ರದಲ್ಲೇ ರಿ ರಿಲೀಸ್ ಮಾಡುವ ಪ್ರಯತ್ನ ನಡೆಯುತ್ತಿದ್ದು, ಅಕ್ಟೋಬರ್.22ಕ್ಕೆ ಸಿನಿಮಾ 25 ವರ್ಷ ಪೂರೈಸಲಿದೆ.
ಉಪೇಂದ್ರ ಸಿನಿಮಾದ 25 ವರ್ಷಗಳ ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದ್ದು, ಬಹಳ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಲೆಕ್ಕಾಚಾರ ಶುರುವಾಗಿದೆ.
ಇಡೀ ಕನ್ನಡ ಚಿತ್ರರಂಗದ ಕಲಾವಿದರು, ತಂತ್ರಜ್ಞರನ್ನು ಆಹ್ವಾನಿಸಿ ಅದ್ಧೂರಿಯಾಗಿ ಕಾರ್ಯಕ್ರಮ ಮಾಡುವ ಆಲೋಚನೆಯಲ್ಲಿದ್ದು, ದರ್ಶನ್ ಅವರನ್ನು ಸಹ ಕರೆತರುವ ಪ್ರಯತ್ನ ನಡೆಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪೆರೋಲ್ ಮೇಲೆ ಎರಡು ಗಂಟೆ ಜೈಲಿನಿಂದ ಹೊರಬರಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಕೋರ್ಟ್ ಹಾಗೂ ಪೊಲೀಸರು ಇದಕ್ಕೆ ಅನುಮತಿ ನೀಡುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…