ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಡಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ನಟ ಧ್ರುವ ಸರ್ಜಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ಜೈಲು ಪಾಲಾಗಿರುವ ದರ್ಶನ್ ಬಗ್ಗೆ ಹಲವು ನಟ, ನಟಿಯರು ಪ್ರತಿಕ್ರಿಯೆ ನೀಡಿದ್ದರು. ಇದೀಗ ನಟ ಧ್ರುವ ಸರ್ಜಾ ಅವರು ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ್ದು, ಕಾನೂನಿಗಿಂತ ಯಾರು ದೊಡ್ಡವರಲ್ಲ ಎಂದಿದ್ದಾರೆ.
ಈ ಕೊಲೆ ಪ್ರಕರಣ ಸದ್ಯ ಕೋರ್ಟ್‌ನಲ್ಲಿದೆ. ಇದರ ಬಗ್ಗೆ ನಾನು ಜಾಸ್ತಿ ಮಾತನಾಡಲು ಹೋಗಲ್ಲ. ಈ ಕೇಸ್ ಮುಂದೆ ಏನಾಗುತ್ತದೆ ಎಂದು ನೋಡೋಣ ಎಂದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ನಾನು ಯಾರ ಬಗ್ಗೆಐೂ ತಲೆಕೆಡಿಸಿಕೊಳ್ಳಲ್ಲ. ನಾನು ನನ್ನ ಸಿನಿಮಾ ರಿಲೀಸ್ ಬಗ್ಗೆ ಚರ್ಚೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.