ಮನರಂಜನೆ

ರಿಷಬ್‌ ಶೆಟ್ಟಿ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲಂಸ್‍ ಉಡುಗೊರೆ

ನಟ-ನಿರ್ದೇಶಕ ರಿಷಬ್ ಶೆಟ್ಟಿ‌ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲಂಸ್‌ ಉಡುಗೊರೆ ನೀಡಿದೆ. ‘ಕಾಂತಾರ ಚಾಪ್ಟರ್‌ 1’ ಚಿತ್ರವು ಅಕ್ಟೋಬರ್‌.2ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ. ಅದಕ್ಕೂ ಮೊದಲು ರಿಷಬ್‌ ಶೆಟ್ಟಿ ಜನ್ಮದಿನದ ಪ್ರಯುಕ್ತ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ ಮಾಡಲಾಗಿದೆ.

‘ದಂತಕಥೆಯ ಮುನ್ನುಡಿ … ಆ ನುಡಿಗೊಂದು ಪರಿಚಯ … ಮನದಾಳದ ಕಥೆಗೆ ಮತ್ತೊಮ್ಮೆ ಸ್ವಾಗತ’ ಎಂಬ ಕ್ಯಾಪ್ಷನ್‌ ಮೂಲಕ ‘ಕಾಂತಾರ ಚಾಪ್ಟರ್‌ 1’ ಚಿತ್ರದ ಹೊಸ ಲುಕ್‌ ಬಿಡುಗಡೆ ಮಾಡಿದೆ ಹೊಂಬಾಳೆ ಫಿಲಂಸ್‌. ಈ ಹೊಸ ಪೋಸ್ಟರ್‌ನಲ್ಲಿ ರಿಷಬ್‌ ಶೆಟ್ಟಿ ಹಿಂದೆಂದೂ ಕಾಣದ ಲುಕ್‌ನಲ್ಲಿ ಕಂಡಿದ್ದಾರೆ.

ಎಸ್‍.ಎಸ್‍. ರಾಜಮೌಳಿ ನಿರ್ದೇಶನನದ ‘RRR’ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದವರು ಟೊಡರ್ ಲ್ಯಾಜರೋವ್. ಇದೀಗ ‘ಕಾಂತಾರ’ ಚಿತ್ರಕ್ಕೂ ಸಾಹಸ ನಿರ್ದೇಶನ ಮಾಡಿದ್ದಾರೆ. ಆ ನಿಮಿತ್ತ ಬಲ್ಗೇರಿಯಾದಿಂದ ಕುಂದಾಪುರಕ್ಕೆ ಆಗಮಿಸಿದ್ದ ಅವರು ಈ ಚಿತ್ರಕ್ಕೆ ಎರಡು ಫೈಟ್‍ಗಳನ್ನು ನಿರ್ದೇಶಿಸಿದ್ದಾರಂತೆ.

‘ಕಾಂತಾರ: ಅಧ್ಯಾಯ 1’ ಚಿತ್ರವು ಆಧ್ಯಾತ್ಮ ಮತ್ತು ಸಾಹಸಗಾಥೆಯ ಸಮ್ಮಿಶ್ರಣದ ಸಿನಿಮಾ ಎಂದು ಹೇಳಲಾಗುತ್ತಿದೆ. ಈ ಚಿತ್ರಕ್ಕಾಗಿ ಕುಂದಾಪುರದಲ್ಲಿ ಬರೋಬ್ಬರಿ 25 ಎಕರೆ ಪ್ರದೇಶದಲ್ಲಿ ಬೃಹತ್‌ ಸೆಟ್‌ ಹಾಕಿ ಚಿತ್ರೀಕರಣ ಮಾಡಲಾಗಿದೆಯಂತೆ. ಕಾಲ್ಪನಿಕ ಊರೊಂದನ್ನು ನಿರ್ಮಿಸಿ, ಅಲ್ಲಿ ನೂರಾರು ದಿನಗಳ ಚಿತ್ರೀಕರಣ ಮಾಡಲಾಗಿದೆ. ಭಾರತೀಯ ಹಾಗೂ ಅಂತರರಾಷ್ಟ್ರೀಯ ತಂತ್ರಜ್ಞರೂ ಈ ಸಿನಿಮಾಕ್ಕೆ ಕೈ ಜೋಡಿಸಿದ್ದಾರೆ. 45 ರಿಂದ 50 ದಿನಗಳ ಕಾಲ ಸುಮಾರು 500 ತರಬೇತಿದಾರರು, 3000ಕ್ಕೂ ಹೆಚ್ಚು ಜೂನಿಯರ್‌ ಕಲಾವಿದರು ಈ ಸಿನಿಮಾದ ಶೂಟಿಂಗ್‌ನಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.

‘ಕಾಂತಾರ – ಅಧ್ಯಾಯ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ನ ವಿಜಯ್‍ ಕಿರಗಂದೂರು ನಿರ್ಮಿಸುತ್ತಿದ್ದು, ಚಿತ್ರದ ಚಿತ್ರೀಕರಣ ಕಳೆದ ವರ್ಷದಿಂದ ಸತತವಾಗಿ ಕುಂದಾಪುರದ ಸುತ್ತಮುತ್ತ ಭರದಿಂದಸಾಗುತ್ತಿದೆ. ಇದೊಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು ಕನ್ನಡದಲ್ಲಿ ನಿರ್ಮಾಣವಾಗಿ, ನಂತರ ತೆಲುಗು, ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಬೇರೆ ಭಾಷೆಗಳಿಗೆ ಡಬ್‍ ಆಗಿ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

7 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

32 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

58 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

1 hour ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago