ನರೇಂದ್ರ ಮೋದಿ ಅವರು ಭಾನುವಾರ (ಜೂನ್.9) ಸತತ ಮೂರನೇ ಬಾರಿಗೆ ಭಾರತ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರಿಗೆ ಕೋಟ್ಯಾಂತರ ಅಭಿಮಾನಿಗಳು ಶುಭ ಕೋರಿದ್ದಾರೆ. ಅದರಲ್ಲಿ ಕನ್ನಡದ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ ಅವರು ತಮ್ಮದೇ ಶೈಲಿಯಲ್ಲಿ ವಿಶಿಷ್ಟವಾಗಿ ಪ್ರಧಾನ ಮಂತ್ರಿಯಾದ ನರೇಂದ್ರ ಮೋದಿ ಅವರಿಗೆ ಶುಭಾಷಯ ತಿಳಿಸಿದ್ದಾರೆ.
ಇನ್ನು ಇವರ ಟ್ವೀಟ್‌ಗೆ ಸಾವಿರಾರು ಮಂದು ರೀ-ಟ್ವೀಟ್ ಮಾಡಿದ್ದು, ಶೆಟ್ರು ಟ್ವೀಟ್ ಸದ್ಯ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ರಿಷಭ್ ಶೆಟ್ಟಿ ಟ್ವೀಟ್: “ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಅಭಿವೃದ್ಧಿ, ಶಿಕ್ಷಣ ಮತ್ತು ರಾಷ್ಟ್ರೀಯ ಸುರಕ್ಷತೆಯ ಬಗೆಗಿನ ನಿಮ್ಮ ಸಮರ್ಪಣೆಯನ್ನು ನಾವು ಗೌರವಿಸುತ್ತೇವೆ” ಎಂದು ಬರೆದುಕೊಂಡಿದ್ದಾರೆ.
ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಜತೆಯಲ್ಲಿ ಕರ್ನಾಟಕದ ಐದು ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಈ ಕಾರ್ಯಕ್ರಮಕ್ಕೆ ದೇಶ-ವಿದೇಶ ಸೇರಿದಂತೆ ಒಟ್ಟು 8 ಸಾವಿರಕ್ಕೂ ಅಧಿಕ ಮಂದಿಗೆ ಆಹ್ವಾನ ನೀಡಲಾಗಿತ್ತು. ಇದರಲ್ಲಿ ಅನೇಕ ಸೆಲೆಬ್ರೆಟಿಗಳು ಭಾಗವಹಿಸಿದ್ದರು.





