ಮನರಂಜನೆ

ವಿಶೇಷ ರೀತಿಯಲ್ಲಿ ಪ್ರಧಾನಿ ಮೋದಿಗೆ ಶುಭ ಕೋರಿದ ಡಿವೈನ್‌ ಸ್ಟಾರ್‌

ನರೇಂದ್ರ ಮೋದಿ ಅವರು ಭಾನುವಾರ (ಜೂನ್‌.9) ಸತತ ಮೂರನೇ ಬಾರಿಗೆ ಭಾರತ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರಿಗೆ ಕೋಟ್ಯಾಂತರ ಅಭಿಮಾನಿಗಳು ಶುಭ ಕೋರಿದ್ದಾರೆ. ಅದರಲ್ಲಿ ಕನ್ನಡದ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಅವರು ತಮ್ಮದೇ ಶೈಲಿಯಲ್ಲಿ ವಿಶಿಷ್ಟವಾಗಿ ಪ್ರಧಾನ ಮಂತ್ರಿಯಾದ ನರೇಂದ್ರ ಮೋದಿ ಅವರಿಗೆ ಶುಭಾಷಯ ತಿಳಿಸಿದ್ದಾರೆ.

ಇನ್ನು ಇವರ ಟ್ವೀಟ್‌ಗೆ ಸಾವಿರಾರು ಮಂದು ರೀ-ಟ್ವೀಟ್‌ ಮಾಡಿದ್ದು, ಶೆಟ್ರು ಟ್ವೀಟ್‌ ಸದ್ಯ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ರಿಷಭ್‌ ಶೆಟ್ಟಿ ಟ್ವೀಟ್‌: “ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಅಭಿವೃದ್ಧಿ, ಶಿಕ್ಷಣ ಮತ್ತು ರಾಷ್ಟ್ರೀಯ ಸುರಕ್ಷತೆಯ ಬಗೆಗಿನ ನಿಮ್ಮ ಸಮರ್ಪಣೆಯನ್ನು ನಾವು ಗೌರವಿಸುತ್ತೇವೆ” ಎಂದು ಬರೆದುಕೊಂಡಿದ್ದಾರೆ.

ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಜತೆಯಲ್ಲಿ ಕರ್ನಾಟಕದ ಐದು ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಈ ಕಾರ್ಯಕ್ರಮಕ್ಕೆ ದೇಶ-ವಿದೇಶ ಸೇರಿದಂತೆ ಒಟ್ಟು 8 ಸಾವಿರಕ್ಕೂ ಅಧಿಕ ಮಂದಿಗೆ ಆಹ್ವಾನ ನೀಡಲಾಗಿತ್ತು. ಇದರಲ್ಲಿ ಅನೇಕ ಸೆಲೆಬ್ರೆಟಿಗಳು ಭಾಗವಹಿಸಿದ್ದರು.

https://x.com/shetty_rishab/status/1799705478190272540

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

2 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

3 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

22 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

23 hours ago