ಬೆಂಗಳೂರು: ಸ್ಯಾಂಡಲ್‌ವುಡ್ ನಟ ರಿಷಬ್ ಶೆಟ್ಟಿ ಕಾಂತಾರ ಚಾಪ್ಟರ್-1 ಸಿನಿಮಾದ ಬಗ್ಗೆ ಬಿಗ್ ಅಪ್‌ಡೇಟ್ ನೀಡಿದ್ದು, ಸಿನಿಮಾವು 2025ರ ಅಕ್ಟೋಬರ್ 2ರಂದು ವಿಶ್ವದಾದ್ಯಂತ ಪ್ರದರ್ಶನವಾಗಲಿದೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ದಕ್ಷಿಣ ಭಾರತ ಖ್ಯಾತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಸ್ಮ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಇದೊಂದು ಬನವಾಸಿ ಕದಂಬರ ಕಾಲದ ಕಥೆ ಇರುವ ಸಿನಿಮಾವಾಗಿದೆ. ಇದು ವಿಶ್ವದಾದ್ಯಂತ ಏಳು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದಿದ್ದಾರೆ.
ರಿಷಬ್‌ಶೆಟ್ಟಿ ಈಗಾಗಲೇ ಕಾಂತಾರ ಚಾಪ್ಟರ್-1 ಸಿನಿಮಾದ ಪೋಸ್ಟರ್‌ಅನ್ನು ಬಿಡುಗಡೆ ಮಾಡಿದ್ದು, ಈ ಚಿತ್ರದ ಮೇಲೆ ಅಭಿಮಾನಿಗಳು ಭಾರಿ ನಿರೀಕ್ಷೆಯನ್ನಿಟ್ಟುಕೊಂಡಿದ್ದಾರೆ.
60 ದಿನಗಳ ಕಾಲ ನಿರಂತರ ಚಿತ್ರೀಕರಣ
ಹೊಂಬಾಳೆ ಸಂಸ್ಥೆಯೂ ಕಾಂತಾರ ಚಾಪ್ಟರ್-1 ಚಿತ್ರೀಕರಣಕ್ಕಾಗಿ ಕುಂದಾಪುರದಲ್ಲಿ ಸೆಟ್ ಹಾಕಿದೆ. ಇಲ್ಲಿ 60 ದಿನಗಳ ಕಾಲ ನಿರಂತರವಾಗಿ ಸಾಹಸ ಸನ್ನಿವೇಶಗಳ ಚಿತ್ರೀಕರಣವನ್ನು ಮಾಡಲಾಗುತ್ತಿದೆ. ಈ ಸಾಹಸಮಯ ಸನ್ನಿವೇಶಗಳನ್ನು ತೆಲುಗಿನ ಆರ್‌ಆರ್‌ಆರ್ ಸಿನಿಮಾ ಖ್ಯಾತಿಯ ಆಕ್ಷನ್ ನಿರ್ದೇಶಕ ಟೊಡರ್ ಲ್ಯಾಜರೋವ್ ಅವರು ಕರಾವಳಿ ನೆಲದ ದಂತಕತೆಗೆ ಸಾಹಸ ನಿರ್ದೇಶನ ಮಾಡಲಿದ್ದಾರೆ. ಅಲ್ಲದೇ ಚಿತ್ರದ ಸಾಹಸಮಯ ದೃಶ್ಯಾವಳಿಗಳು ಮುಗಿದ ನಂತರ ಹಾಡಿನ ಚಿತ್ರೀಕರಣ ನಡೆಯಲಿದೆ ಎಂದು ತಿಳಿಸಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…