ಮನರಂಜನೆ

ಕಾಂತಾರ 1’ ಚಿತ್ರಕ್ಕಾಗಿ ಕಲರಿಪಯಟ್ಟು ಕಲಿಯುತ್ತಿರುವ ರಿಷಭ್‍ ಶೆಟ್ಟಿ

ಇತ್ತೀಚೆಗೆ ನಡೆದ ‘ ಲಾಫಿಂಗ್‍ ಬುದ್ಧ’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಆ ಚಿತ್ರದ ನಿರ್ಮಾಪಕ ರಿಷಭ್‍ ಶೆಟ್ಟಿ ಸಹ ಹಾಜರಿದ್ದರು. ಈ ಸಂದರ್ಭದಲ್ಲಿ ‘ಕಾಂತಾರ – ಅಧ್ಯಾಯ 1’ ಎಲ್ಲಿಯವರೆಗೂ ಬಂತು ಎಂಬ ಪ್ರಶ್ನೆಯೂ ಕೇಳಿಬಂತು. ಅದಕ್ಕೆ ಉತ್ತರಿಸಿದ್ದ ರಿಷಭ್ ಶೆಟ್ಟಿ, ಹೇಳುವುದಕ್ಕೂ ಕೇಳುವುದಕ್ಕೂ ಇದು ಸಮಯವಲ್ಲ ಎಂದು ಹೇಳಿದ್ದರು.

ಹೀಗಿರುವಾಗಲೇ, ರಿಷಭ್‍ ಶೆಟ್ಟಿ ಕಡೆಯಿಂದ ಒಂದು ಅಪ್‍ಡೇಟ್‍ ಬಂದಿದೆ. ತಮ್ಮ ಎಕ್ಸ್ ಖಾತೆ ಮೂಲಕ ರಿಷಭ್‍, ಕಲರಿಪಯಟ್ಟು ಕಲಿಯುತ್ತಿರುವ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಇದಕ್ಕೂ ಮೊದಲು ಚಿತ್ರಕ್ಕಾಗಿ ಕುದುರೆ ಸವಾರಿಯನ್ನು ಕಲಿಯುತ್ತಿರುವುದಾಗಿ ಹೇಳಿಕೊಂಡಿದ್ದರು. ಇದೀಗ ಅವರು ಪ್ರಾಚೀನ ಸಮರಕಲೆಯಾದ ಕಲರಿಪಯಟ್ಟು ಕಲಿಯುತ್ತಿದ್ದು, ‘ಕಾಂತಾರ – ಅಧ್ಯಾಯ 1’ರಲ್ಲಿ ಕಲೆ ಪ್ರದರ್ಶಿಸಲಿದ್ದಾರೆ.

ಮೂಲಗಳ ಪ್ರಕಾರ, ಕಳೆದ ಒಂದು ವರ್ಷದಿಂದ ರಿಷಭ್, ಈ ಕಲೆಯನ್‍ನು ಕಲಿಯುತ್ತಿದ್ದಾರಂತೆ. ಕೇರಳದಿಂದ ಒಂದು ತಂಡ ಬಂದು ರಿಷಭ್‍ಗೆ ಕಲರಿಪಯಟ್ಟು ಕಲಿಸುತ್ತಿದ್ದಾರಂತೆ. ಈ ಚಿತ್ರದಲ್ಲಿ ಸಾಹಸ ದೃಶ್ಯಗಳಲ್ಲಿ ಕಲರಿಪಯಟ್ಟು ಬಳಸಿಕೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ.

ರಿಷಭ್‍ ಶೆಟ್ಟಿ ಕಳೆದ ಕೆಲವು ತಿಂಗಳುಗಳಿಂದ ‘ಕಾಂತಾರ – ಅಧ್ಯಾಯ 1’ ಚಿತ್ರಕ್ಕಾಗಿ ಕುಂದಾಪುರ ಬಳಿ ಬೀಡು ಬಿಟ್ಟಿದ್ದಾರೆ. ಈ ಕುರಿತು ಕೆಲವು ತಿಂಗಳುಗಳ ಹಿಂದೆ ಮಾತನಾಡಿದ್ದ ಅವರು, ‘ಚಿತ್ರಕ್ಕಾಗಿ ಕುಂದಾಪುರ ಬಳಿ ದೊಡ್ಡ ಸ್ಟುಡಿಯೋ ಮಾಡಿ, ಅಲ್ಲಿ ಸೆಟ್‍ಗಳನ್ನು ಹಾಕಿ ಚಿತ್ರೀಕರಣ ಮಾಡುತ್ತಿದ್ದೇವೆ. ಹೊರಾಂಗಣ, ಒಳಾಂಗಣ ಎಲ್ಲವೂ ಅಲ್ಲೇ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಈ ಚಿತ್ರಕ್ಕಾಗಿ 10 ಕೆಜಿ ತೂಕ ಹೆಚ್ಚಿಸಿ, ಆ ನಂತರ 8 ಕೆಜಿ ತೂಕ ಇಳಿಸಿದ್ದೇನೆ. ಈ ಚಿತ್ರಕ್ಕಾಗಿ ಕಲರಿಪಯಟ್ಟು ಕಲಿಯುತ್ತಿದ್ದೇನೆ. 100ಕ್ಕೂ ಹೆಚ್ಚು ದಿನಗಳ ಚಿತ್ರೀಕರಣವಾಗಲಿದೆ. ಕನ್ನಡದಲ್ಲಿ ಚಿತ್ರೀಕರಣ ಮಾಡಿ, ಆ ನಂತರ ಬೇರೆಬೇರೆ ಭಾಷೆಗಳಿಗೆ ಡಬ್‍ ಮಾಡುತ್ತೇನೆ. ಈ ವರ್ಷ ಚಿತ್ರೀಕರಣ ಮುಗಿಯುತ್ತದೆ. ಬಿಡುಗಡೆ ಮುಂದಿನ ವರ್ಷ ಆಗುತ್ತದೆ’ ಎಂದು ಹೇಳಿದ್ದರು.
‘ಕಾಂತಾರ – ಅಧ್ಯಾಯ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ನ ವಿಜಯ್‍ ಕಿರಗಂದೂರು ನಿರ್ಮಿಸುತ್ತಿದ್ದು, ಚಿತ್ರಕ್ಕೆ ಅರವಿಂದ್‍ ಕಶ್ಯಪ್‍ ಛಾಯಾಗ್ರಹಣ ಮತ್ತು ಅಜನೀಶ್ ‍ಲೋಕನಾಥ್‍ ಸಂಗೀತವಿದೆ. ಇನ್ನು, ರಿಷಭ್‍ ಪತ್ನಿ ಪ್ರಗತಿ ಶೆಟ್ಟಿ ಈ ಚಿತ್ರಕ್ಕೆ ವಸ್ತ್ರ ವಿನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದಾರೆ.

ಭೂಮಿಕಾ

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago