ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.
ಸಿನಿಮಾ ಬ್ಲಾಕ್ ಬಸ್ಟರ್ ಆಗಲಿ ಎಂದು ನಟ ದರ್ಶನ್‌ಗೆ ರಿಷಬ್ ಶೆಟ್ಟಿ ವಿಶ್ ಮಾಡಿದ್ದಾರೆ.
ಇದನ್ನು ಓದಿ: ನಾಳೆ ಡೆವಿಲ್ ಚಿತ್ರ ರಿಲೀಸ್: ಜೈಲಿನಿಂದಲೇ ಅಭಿಮಾನಿಗಳಿಗೆ ದರ್ಶನ್ ಸಂದೇಶ
ಈ ಕುರಿತು ಟ್ವೀಟ್ ಮಾಡಿರುವ ರಿಷಬ್ ಶೆಟ್ಟಿ ಅವರು, ದರ್ಶನ್ ಸರ್ ಹಾಗೂ ಇಡೀ ಚಿತ್ರತಂಡಕ್ಕೆ ಡೆವಿಲ್ ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. ಸಿನಿಮಾ ಬ್ಲಾಕ್ ಬಸ್ಟರ್ ಆಗಲಿ ಎಂದು ಹಾರೈಸುತ್ತೇನೆ ಎಂದು ವಿಶ್ ಮಾಡಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ನಾಳೆ ಬಿಡುಗಡೆಯಾಗಲಿದ್ದು, ಬೆಳಿಗ್ಗೆ 6 ಗಂಟೆಗೆ ಮೊದಲ ಶೋ ಶುರುವಾಗಲಿದೆ.



