ದೆಹಲಿ: ಕಾಂತಾರ ಸಿನಿಮಾದ ಅತ್ಯುತ್ತಮ ನಟನೆಗಾಗಿ ಕನ್ನಡಿಗ ರಿಷಬ್‌ಶೆಟ್ಟಿ ಅವರಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನು ನೀಡಲಾಗಿದೆ.
ಮಂಗಳವಾರ ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಿಷಬ್‌ಶೆಟ್ಟಿ ಅವರಿಗೆ ರಾಷ್ಟ್ರ ಪ್ರಶಸ್ತಿ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ನಿತ್ಯಾ ಮೆನನ್ ಅವರಿಗೂ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.