Mysore
28
scattered clouds

Social Media

ಶನಿವಾರ, 30 ಮೇ 2026
Light
Dark

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ್ದಾರೆ.

ಇಂದು ಮುಂಜಾನೆ ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆಯಾದ ಈ ಪೋಸ್ಟರ್‌, ಮಾರ್ಚ್.‌19, 2026ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿರುವ ಚಿತ್ರದ 100 ದಿನಗಳ ಕೌಂಟರ್‌ನ ಆರಂಭವನ್ನು ಸೂಚಿಸುತ್ತದೆ.

ಈ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ತಮ್ಮ ಇನ್ಸ್‌ಸ್ಟಾಗ್ರಾಮ್‌ ಖಾತೆಯಲ್ಲಿ, ಯಶ್‌ ಪೋಸ್ಟರ್‌ ಅನ್ನು ಹಂಚಿಕೊಂಡರು. ದಿ ಫೇರಿ ಟೇಲ್‌ 100 ದಿನಗಳಲ್ಲಿ ತೆರೆದುಕೊಳ್ಳುತ್ತದೆ ಟಾಕ್ಸಿಕ್‌ ಎಂದು ಬರೆದಿದ್ದಾರೆ. ಈ ಪೋಸ್ಟರ್‌ನಲ್ಲಿ ಕ್ಯಾಮರಾಗೆ ಬೆನ್ನು ತಿರುಗಿಸಿ ನಟ ಯಶ್‌ ಕುಳಿತಿದ್ದಾರೆ. ಪೋಸ್ಟರ್‌ಗೆ ಅಭಿಮಾನಿಗಳು ಬೆಂಕಿಯ ಎಮೋಜಿಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ.

Tags:
error: Content is protected !!