Mysore
32
clear sky

Social Media

ಗುರುವಾರ, 05 ಮಾರ್ಚ್ 2026
Light
Dark

ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಿಗ್‌ ಬಜೆಟ್‌ ಸಿನಿಮಾ ಟಾಕ್ಸಿಕ್‌ ಇರಾನ್-‌ ಇಸ್ರೇಲ್‌ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ.

ಮಾರ್ಚ್.‌19ರಂದು ಬಿಡುಗಡೆಯಾಗಬೇಕಿದ್ದ ಟಾಕ್ಸಿಕ್‌ ಸಿನಿಮಾವು ಈಗ ಜೂನ್.‌4ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ.

ಪ್ರಸ್ತುತ ನಡೆಯುತ್ತಿರುವ ಇಸ್ರೇಲ್-ಇರಾನ್‌ ಯುದ್ಧದ ಪರಿಸ್ಥಿತಿಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಚಿತ್ರತಂಡ ತಿಳಿಸಿದೆ. ನಟ ಯಶ್‌ ಹಾಗೂ ಟಾಕ್ಸಿಕ್‌ ತಂಡವು ಅಧಿಕೃತ ಪೋಸ್ಟ್‌ ಮೂಲಕ ಈ ಬದಲಾವಣೆಯನ್ನು ಖಚಿತಪಡಿಸಿದ್ದಾರೆ.‌

ಕೆವಿಎನ್‌ ಪ್ರೊಡಕ್ಷನ್ಸ್‌ ಮತ್ತ ಮಾನ್ಸ್ಟರ್‌ ಮೈಂಡ್‌ ಕ್ರಿಯೇಷನ್ಸ್‌ ಬ್ಯಾನರ್‌ ಅಡಿಯಲ್ಲಿ ವೆಂಕಟ್ ಕೆ ನಾರಾಯಣ ಮತ್ತು ಯಶ್‌ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್‌ ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಣಗೊಂಡಿರುವ ಈ ಸಿನಿಮಾ ಸುಮಾರು 600 ರಿಂದ 700 ಕೋಟಿ ಬಜೆಟ್‌ನಲ್ಲಿ ತಯಾರಾಗುತ್ತಿದ್ದು, ಇದು ಭಾರತದ ಅತ್ಯಂತ ದುಬಾರಿ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Tags:
error: Content is protected !!