ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಿಗ್ ಬಜೆಟ್ ಸಿನಿಮಾ ಟಾಕ್ಸಿಕ್ ಇರಾನ್- ಇಸ್ರೇಲ್ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ.
ಮಾರ್ಚ್.19ರಂದು ಬಿಡುಗಡೆಯಾಗಬೇಕಿದ್ದ ಟಾಕ್ಸಿಕ್ ಸಿನಿಮಾವು ಈಗ ಜೂನ್.4ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ.
ಪ್ರಸ್ತುತ ನಡೆಯುತ್ತಿರುವ ಇಸ್ರೇಲ್-ಇರಾನ್ ಯುದ್ಧದ ಪರಿಸ್ಥಿತಿಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಚಿತ್ರತಂಡ ತಿಳಿಸಿದೆ. ನಟ ಯಶ್ ಹಾಗೂ ಟಾಕ್ಸಿಕ್ ತಂಡವು ಅಧಿಕೃತ ಪೋಸ್ಟ್ ಮೂಲಕ ಈ ಬದಲಾವಣೆಯನ್ನು ಖಚಿತಪಡಿಸಿದ್ದಾರೆ.
ಕೆವಿಎನ್ ಪ್ರೊಡಕ್ಷನ್ಸ್ ಮತ್ತ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ವೆಂಕಟ್ ಕೆ ನಾರಾಯಣ ಮತ್ತು ಯಶ್ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಣಗೊಂಡಿರುವ ಈ ಸಿನಿಮಾ ಸುಮಾರು 600 ರಿಂದ 700 ಕೋಟಿ ಬಜೆಟ್‌ನಲ್ಲಿ ತಯಾರಾಗುತ್ತಿದ್ದು, ಇದು ಭಾರತದ ಅತ್ಯಂತ ದುಬಾರಿ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…