ಕಿರಣ್ ರಾಜ್ ಅಭಿನಯದ ‘ರಾನಿ’ ಚಿತ್ರವು ಎರಡು ವಾರ ಮುಂದಕ್ಕೆ ಹೋಗಿದೆ. ಆಗಸ್ಟ್ 30ರಂದು ಬಿಡುಗಡೆ ಆಗಬೇಕಿದ್ದ ಚಿತ್ರವು ಹೀಗೆ ಮುಂದಕ್ಕೆ ಹೋಗಲು ಕಾರಣವೇನು ಎಂಬ ಪ್ರಶ್ನೆ ಬರಬಹುದು. ಅದಕ್ಕೆ ಕಾರಣ ‘ಭೀಮ’ ಮತ್ತು ‘ಕೃಷ್ಣ’. ಅವರಿಬ್ಬರಿಂದಾಗಿ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ.
ವಿಷಯವೇನು ಎಂದರೆ, ‘ಭೀಮ’ ಮತ್ತು ‘ಕೃಷ್ಣಂ ಪ್ರಣಯ ಸಖಿ’ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿರುವುದರಿಂದ ಮತ್ತು ಮುಂದೆ ಚಿತ್ರ ಪ್ರದರ್ಶನಕ್ಕೆ ಸಮಸ್ಯೆ ಎದುರಾಗಬಾರದು ಎಂಬ ಕಾರಣಕ್ಕೆ ‘ರಾನಿ’ ಚಿತ್ರವನ್ನು ಎರಡು ವಾರಗಳ ಕಾಲ ಮುಂದೂಡಲಾಗಿದೆ. ಅಲ್ಲಿಗೆ ಆಗಸ್ಟ್ 30ರಂದು ಬಿಡುಗಡೆ ಆಗಬೇಕಿದ್ದ ‘ರಾನಿ’, ಇದೀಗ ಸೆ. 12ಕ್ಕೆ ಬಿಡುಗಡೆಯಾಗಲಿದೆ.
ಈ ಕುರಿತು ಚಿತ್ರತಂಡದವರು ಮಂಗಳವಾರ ಒಂದು ಪತ್ರಿಕಾಗೋಷ್ಠಿ ಮಾಡಿ, ಚಿತ್ರ ವಿಷಯ ತಿಳಿಸಿದರು. ಅಷ್ಟೇ ಅಲ್ಲ, ಚಿತ್ರ ಮುಂದಕ್ಕೆ ಹೋಗುತ್ತಿರುವ ಕಾರಣಗಳನ್ನೂ ನೀಡಿದರು.
ಈ ಕುರಿತು ಮಾತನಾಡುವ ಗುರುತೇಜ್ ಶೆಟ್ಟಿ, ‘ಎರಡು ಸಿನಿಮಾಗಳು ಒಳ್ಳೆಯ ಪ್ರದರ್ಶನ ಕಾಣುತ್ತಿರುವುದರಿಂದ, ನಮಗೆ ಚಿತ್ರಮಂದಿರಗಳ ಸಮಸ್ಯೆ ಆಗಬಹುದು ಎಂದು ವಿತರಕರು ಹೇಳಿದರು. ಅಷ್ಟೇ ಅಲ್ಲ, ಮುಂದಿನ ವಾರದ ಹೊತ್ತಿಗೆ ಎಷ್ಟು ಚಿತ್ರಮಂದಿರಗಳು ಸಿಗುತ್ತವೋ ಗೊತ್ತಿಲ್ಲ. ಚೆನ್ನಾಗಿ ಶೇರ್ ಸಿಗುವಾಗ, ಚಿತ್ರವನ್ನು ಚಿತ್ರಮಂದಿರದಿಂದ ತೆಗೆಯುವುದು ಸರಿಯಲ್ಲ. ಹಾಗಾಗಿ, ಸೆ. 12ರಂದು ಬಿಡುಗಡೆ ಮಾಡುತ್ತಿದ್ದೇವೆ. ನಮ್ಮದು ದೊಡ್ಡ ಬಜೆಟ್‍ನ ಸಿನಿಮಾ. ಸಣ್ಣದಾಗಿ ಬಿಡುಗಡೆ ಮಾಡುವುದಕ್ಕಿಂತ, ಎಲ್ಲರಿಗೂ ದೊಡ್ಡ ಮಟ್ಟದಲ್ಲಿ ರೀಚ್ ಆಗಬೇಕು ಎಂಬ ಕಾರಣಕ್ಕೆ ಚಿತ್ರವನ್ನು ಮುಂದೂಡಿದ್ದೇವೆ. ಮೇಲಾಗಿ ಚಿತ್ರದ ಪ್ರಚಾರ ಮಾಡುವುದಕ್ಕೆ ಇನ್ನಷ್ಟು ಸಮಯ ಸಿಕ್ಕಂತಾಗುತ್ತದೆ’ ಎಂದರು.
ಕಿರಣ್ ರಾಜ್ ಅಭಿನಯದ ‘ಭರ್ಜರಿ ಗಂಡು’, ‘ಬಡ್ಡೀಸ್’ ಸೇರಿದಂತೆ ಯಾವುದೇ ಚಿತ್ರ ದೊಡ್ಡ ಯಶಸ್ವಿಯಾಗಿಲ್ಲ. ಹಾಗಾಗಿ, ಈ ಚಿತ್ರ ತಮ್ಮ ಪಾಲಿಗೆ ಬಹಳ ಮಹತ್ವದ್ದು ಎನ್ನುವ ಕಿರಣ್, ‘ಈ ಗೆಲುವು ನನಗೆ ಬಹಳ ಮುಖ್ಯ. ಏನೇ ಕನಸು ಮತ್ತು ಗುರಿ ಇದ್ದರೂ, ಒಂದು ಶಕ್ತಿ ಬಹಳ ಮುಖ್ಯವಾಗುತ್ತದೆ. ಆ ಶಕ್ತಿ ಬರಬೇಕು ಎಂದರೆ ನಮ್ಮ ಮೇಲೆ ನಂಬಿಕೆ ಇರಬೇಕು. ಆ ನಂಬಿಕೆ ಬರಬೇಕು ಎಂದರೆ ಈ ಚಿತ್ರ ಗೆಲ್ಲಲೇಬೇಕು. ಇಲ್ಲವಾದರೆ, ನಾನು ಪುನಃ ಮೊದಲಿನಿಂದಲೂ ಶುರು ಮಾಡಬೇಕು. ಯಾವುದೇ ರಾಜಿ ಮಾಡದೆ ಚಿತ್ರ ಮಾಡಿದ್ದೀವಿ. ಈ ಚಿತ್ರ ಗೆದ್ದರೆ ಇನ್ನಷ್ಟು ಚಿತ್ರಗಳನ್ನು ಮಾಡಬಹುದು. ಚಿತ್ರ ಚೆನ್ನಾಗಿ ಮೂಡಿಬಂದಿದೆ. ಚಿತ್ರ ನೋಡಿದವರು ಸಹ ಚಿತ್ರದ ಬಗ್ಗೆ ಖುಷಿಯಾಗಿದ್ದಾರೆ’ ಎಂದರು.
‘ರಾನಿ’ ಚಿತ್ರವನ್ನು ಸ್ಟಾರ್ ಕ್ರಿಯೇಷನ್ಸ್ನಡಿ ಚಂದ್ರಕಾಂತ್ ಪೂಜಾರಿ ಮತ್ತು ಉಮೇಶ್ ಹೆಗಡೆ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ಕಿರಣ್ ರಾಜ್ ಜೊತೆಗೆ ಸಮೀಕ್ಷಾ, ಅಪೂರ್ವ, ರಾಧ್ಯ, ರವಿಶಂಕರ್, ಮೈಕೋ ನಾಗರಾಜ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ರಾಘವೇಂದ್ರ ಬಿ ಕೋಲಾರ ಈ ಚಿತ್ರದ ಮೂಲಕ ಛಾಯಾಗ್ರಾಹಕರಾಗಿದ್ದಾರೆ.
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ ಅವರಿಂದು ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದ…
ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಕೇಂದ್ರ ಗೃಹ ಸಚಿವಾಲಯ ಬಿಗ್ ಶಾಕ್…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ಕಂಟೇನರ್ ಟ್ರಕ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಪಘಾತ…
ಯುವ ರಾಜಕುಮಾರ್ ಅಭಿನಯದ ಎರಡನೇ ಚಿತ್ರ ‘ಎಕ್ಕ’, ಜೂನ್ 06ರಂದು ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಮುಹೂರ್ತದ ದಿನವೇ ಘೋಷಿಸಿದೆ.…
ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’, ಈ ವರ್ಷದ ನಿರೀಕ್ಷಿತ ಚಿತ್ರಗಳಲ್ಲೊಂದು.…
ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ.10ರಂದೇ ಬಿಡುಗಡೆಯಾಗಬೇಕಿತ್ತು. ಆದರೆ, ತೆಲುಗು ನಿರ್ಮಾಪಕರೊಬ್ಬರು ನಾಗಶೇಖರ್ ಮೇಲೆ ಕೇಸ್…