ದಿನಕರ್ ತೂಗುದೀಪ ನಿರ್ದೇಶನದಲ್ಲಿ ವಿರಾಟ್ ಅಭಿನಯಿಸಿರುವ ‘ರಾಯಲ್’ ಚಿತ್ರವು ಜನವರಿ 24ರಂದು ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಇದಕ್ಕೂ ಮೊದಲು ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿದ್ದು, ಸದ್ಯದಲ್ಲೇ ಚಿತ್ರದ ಟ್ರೇಲರ್ ಬಿಡುಗಡೆ ಆಗಲಿದೆ.
‘ರಾಯಲ್’ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ದಿನಕರ್ ತೂಗುದೀಪ, ‘ಚಿತ್ರದ ಹಾಡುಗಳು ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿವೆ. ಚಿತ್ರ ಚೆನ್ನಾಗಿ ಮೂಡಿಬರುವುದಕ್ಕೆ ಕಾರಣ ಕಥೆಗಾರ ರಘು ನಿಡುವಳ್ಳಿ. ಸಂಭಾಷಣೆಯನ್ನೂ ಅವರೇ ಬರೆದಿದ್ದಾರೆ. ತಂತ್ರಜ್ಞರ ಸಹಕಾರದಿಂದ ಬಹಳ ಚೆನ್ನಾಗಿ ಮೂಡಿಬಂದಿದೆ.
ನಿರ್ಮಾಪಕರು ನಾನು ಕೇಳಿದ್ದೆಲ್ಲವನ್ನೂ ಕೊಟ್ಟಿದ್ದಾರೆ. ಈ ಚಿತ್ರದಿಂದ ದುಡ್ಡು ಮಾಡಬೇಕು ಎನ್ನುವುದಕ್ಕಿಂತ, ಚಿತ್ರರಂಗಕ್ಕೊಬ್ಬ ಒಳ್ಳೆಯ ಹೀರೋ ಕೊಡಬೇಕು ಎಂದು ಸಹಕಾರ ಕೊಟ್ಟರು. ವಿರಾಟ್ ಎರಡನೆಯ ಸಿನಿಮಾಗೆ ಇಷ್ಟೊಂದು ಖರ್ಚು ಮಾಡಬೇಕಿತ್ತಾ ಎಂದೆನಿಸಬಹುದು. ಆದರೆ, ವಿರಾಟ್‍ನನ್ನು ಕೊಡುಗೆಯಾಗಿ ಕೊಡಬೇಕು ಎಂಬ ಉದ್ದೇಶದಿಂದ ಚಿತ್ರ ಮಾಡಿದ್ದಾರೆ. ಜನವರಿ ಎರಡನೇ ವಾರದಲ್ಲಿ ಟ್ರೇಲರ್ ಬಿಡುಗಡೆ ಮಾಡುತ್ತಿದ್ದೇವೆ’ ಎಂದು ಮಾಹಿತಿ ನೀಡಿದರು.
ಈ ಹಿಂದೆ ‘ಕಿಸ್’ ಚಿತ್ರದ ಮೂಲಕ ಚಿತ್ರರಂಗಕ್ಕೆ ನಾಯಕನಾಗಿ ಪರಿಚಿತರಾದ ವಿರಾಟ್, ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ‘ಈ ಚಿತ್ರ ಆಗುವುದಕ್ಕೆ ಪ್ರಮುಖ ಕಾರಣ ನಿರ್ಮಾಪಕರಾದ ಜಯಣ್ಣ ಮತ್ತು ಭೋಗೇಂದ್ರ. ಅವರ ಬ್ಯಾನರ್‍ನಲ್ಲಿ ನನಗೆ ಇದು ಎರಡನೆಯ ಸಿನಿಮಾ. ದಿನಕರ್ ಅವರ ನಿರ್ದೇಶನದಲ್ಲಿ ಅಭಿನಯ ಮಾಡುವುದಕ್ಕೆ ನನಗೆ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಅವರಿಂದ ಸಾಕಷ್ಟು ಕಲಿತಿದ್ದೇನೆ. ಚಿತ್ರ ನಿಜಕ್ಕೂ ರಾಯಲ್ ಆಗಿ ಬಂದಿದೆ. ಚಿತ್ರದಲ್ಲಿ ಸಾಕಷ್ಟು ಪ್ರತಿಭಾವಂತ ಕಲಾವಿದರಿದ್ದಾರೆ’ ಎಂದರು.
ಚಿತ್ರದ ನಾಯಕಿಯಾಗಿ ಅಭಿನಯಿಸಿರುವ ಸಂಜನಾ ಮಾತನಾಡಿ, ‘ಚಿತ್ರ ಚೆನ್ನಾಗಿ ಬಂದಿದೆ. ಹಾಡುಗಳು ಯಶಸ್ವಿಯಾಗಿವೆ. ದಿನಕರ್ ಅವರ ಚಿತ್ರಗಳನ್ನು ಎಲ್ಲರೂ ನೋಡಿದ್ದಾರೆ. ಇಷ್ಟಪಟ್ಟಿದ್ದಾರೆ. ಅವರ ಚಿತ್ರಜೀವನದಲ್ಲೇ ಇದು ವಿಭಿನ್ನವಾದ ಚಿತ್ರ. ಚಿತ್ರದಲ್ಲಿ ಹಲವು ಸರ್‍ಪ್ರೈಸ್‍ಗಳಿವೆ. ಹೊಸ ವರ್ಷಕ್ಕೆ ಒಂದು ವಿಶೇಷ ಚಿತ್ರವಾಗಲಿದೆ’ ಎಂದರು.
‘ರಾಯಲ್’ ಚಿತ್ರದಲ್ಲಿ ವಿರಾಟ್ ಮತ್ತು ಸಂಜನಾ ಆನಂದ್ ಜೊತೆಗೆ ರಘು ಮುಖರ್ಜಿ, ಛಾಯಾ ಸಿಂಗ್, ಅಚ್ಯುತ್ ಕುಮಾರ್, ರಂಗಾಯಣ ರಘು, ಪ್ರಮೋದ್ ಶೆಟ್ಟಿ, ರವಿ ಭಟ್, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಸಂಕೇತ್ ಛಾಯಾಗ್ರಹಣ, ಚರಣ್ ರಾಜ್ ಸಂಗೀತವಿದೆ. ಈ ಚಿತ್ರವನ್ನು ಜಯಣ್ಣ ಕಂಬೈನ್ಸ್ ಬ್ಯಾನರ್ ಅಡಿ ಜಯಣ್ಣ ಮತ್ತು ಭೋಗೇಂದ್ರ ಜೊತೆಯಾಗಿ ನಿರ್ಮಿಸಿದ್ದಾರೆ.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…