ಮನರಂಜನೆ

ಜ.24ಕ್ಕೆ ಬರಲಿದೆ ರುದ್ರನ ಗರುಡ ಪುರಾಣ; ಸದ್ಯ ಟ್ರೇಲರ್ ಬಿಡುಗಡೆ

ರಿಷಿ ಅಭಿನಯದ ‘ರುದ್ರ ಗರುಡ ಪುರಾಣ’ ಚಿತ್ರವು ಜ. 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್‍ ಬಿಡುಗಡೆ ಮಾಡಲಾಗಿದೆ. ಧನಂಜಯ್‍ ಈ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

ಮೊದಲು ಮಾತನಾಡಿದ ಧನಂಜಯ್‍, ರಿಷಿ ನನ್ನ ಕಾಲೇಜು ಹಾಗೂ ರಂಗಭೂಮಿ ದಿನಗಳ ಗೆಳೆಯ. ನಿರ್ದೇಶಕರು ಬಹು ದಿನಗಳ ಪರಿಚಯ. ‘ರುದ್ರ ಗರುಡ ಪುರಾಣ’ ಟ್ರೇಲರ್ ವಿಭಿನ್ನವಾಗಿದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ’ ಎಂದು ನಟ ಧನಂಜಯ ಹಾರೈಸಿದರು.

ಇನ್ನೂ ಹೆಚ್ಚುಹೆಚ್ಚು ಸಿನಿಮಾಗಳನ್ನು ಮಾಡಿ ಎಂದು ಹಲವರು ಹೇಳುತ್ತಾರೆ. ನನಗೆ ಹೆಚ್ಚು ಸಿನಿಮಾಗಳನ್ನು ಮಾಡದಿದ್ದರೂ ಪರವಾಗಿಲ್ಲ, ಮಾಡಿದ ಚಿತ್ರಗಳು ಚೆನ್ನಾಗಿರಬೇಕು. ಜನ ನೋಡಿದರೆ, ಚೆನ್ನಾಗಿದೆ ಎಂದು ಹೇಳಬೇಕು ಎಂಬಾಸೆ. ಈ ಚಿತ್ರದಲ್ಲಿ ಒಂದು ಅದ್ಭುತವಾದ ತಂಡ ಸಿಕ್ಕಿದೆ. ಈ ತರಹದ ತಂಡ ಸಿಗುವುದು ಕಡಿಮೆ. ನಿರ್ದೇಶಕರಿಗೆ ವಿಷನ್‍ ಇದೆ. ಯಾಕೆ ಈ ಸಿನಿಮಾ ಮಾಡುತ್ತಿದ್ದೇನೆ ಎಂಬ ಕ್ಲಾರಿಟಿ ಇದೆ. ಪ್ರತಿ ದೃಶ್ಯದ ಬಗ್ಗೆಯೂ ಅವರಿಗೆ ಕ್ಲಾರಿಟಿ ಇದೆ. ಚಿತ್ರ ಚೆನ್ನಾಗಿ ಮೂಡಿಬರುವುದಕ್ಕೆ ನಿರ್ಮಾಪಕರು ಕಾರಣ. ಏನು ಕೇಳಿದರೂ ಇನ್ನೂ ದೊಡ್ಡದಾಗಿ ಮಾಡೋಣ ಎಂದು ನಿರ್ಮಾಪಕರು ಹೇಳುತ್ತಿದ್ದರು. ಎಲ್ಲರೂ ತಮ್ಮ ಕೆಲಸವನ್ನು ಇನ್ನಷ್ಟು ಚೆನ್ನಾಗಿ ಹುಮ್ಮಸ್ಸಿನಿಂದ ಮಾಡಿದ್ದಾರೆ’ ಎಂದರು.

‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಪ್ರಿಯಾಂಕಾ ಕುಮಾರ್‍ ಇಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ‘ನಾಯಕಿಯಾಗಿ ಇದು ಮೊದಲ ಚಿತ್ರ. ನನ್ನ‌ ತಂದೆಗೆ ನಾನು ಚೆನ್ನಾಗಿ ಓದಬೇಕೆಂಬ ಆಸೆ. ನನಗೆ ಓದು ಹಾಗೂ ನಟನೆ ಎರಡು ಆಸೆ. ಓದಿನಲ್ಲೂ ನಮ್ಮ ತಂದೆ ಹೇಳಿದ ಹಾಗೆ ಕೇಳಿದ್ದೇನೆ. ಇದರಿಂದ ಅವರಿಗೂ ಖುಷಿಯಾಗಿದೆ. ಈ ಚಿತ್ರದ ಟ್ರೇಲರ್ ನೋಡಿ ನಮ್ಮ ತಂದೆ ಸಂತೋಷಪಟ್ಟಿದ್ದಾರೆ. ಜನರಿಗೂ ಚಿತ್ರ ಇಷ್ಟವಾಗಲಿದೆ’ ಎಂದರು.

‘ರುದ್ರ ಗರುಡ ಪುರಾಣ’ ಚಿತ್ರವನ್ನು ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಹಿರಿಯ ನಟ ವಿನೋದ್‍ ಆಳ್ವ, ‘ಸಿದ್ಲಿಂಗು’ ಶ್ರೀಧರ್, ಗಿರೀಶ್ ಶಿವಣ್ಣ, ಶಿವರಾಜ ಕೆ.ಆರ್ ಪೇಟೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಕೆಪಿ ಸಂಗೀತ ಸಂಯೋಜಿಸಿದ್ದು, ಸಂದೀಪ್‍ ಕುಮಾರ್ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

6 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

6 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

7 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

7 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

7 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

7 hours ago