ಮನರಂಜನೆ

‘ಜೈ’ ಎಂದ ರೂಪೇಶ್‍ ಶೆಟ್ಟಿ: ಟೀಸರ್ ಬಿಡುಗಡೆ ಮಾಡಿದ ಶ್ರೀಮುರಳಿ

‘ಬಿಗ್ ಬಾಸ್’ ಖ್ಯಾತಿಯ ರೂಪೇಶ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಹಾಗೂ ಕನ್ನಡ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಶ್ರೀಮುರಳಿ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

ಇದು ರೂಪೇಶ್‍ ಶೆಟ್ಟಿ ನಿರ್ದೇಶನದ ಮೂರನೇ ಚಿತ್ರವಾಗಿದ್ದು, ಇದಕ್ಕೂ ಮೊದಲು ‘ಗಿರ್ಗಿಟ್’ ಮತ್ತು ‘ಸರ್ಕಸ್’ ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು. ಇದು ಕರಾವಳಿ ಭಾಗದ ರಾಜಕೀಯದ ಕುರಿತಾದ ಚಿತ್ರ. ಇದು ತುಳು ಭಾಷೆಯಲ್ಲಿ ಸಿದ್ಧವಾಗಿದ್ದು, ಕನ್ನಡಕ್ಕೆ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತದೆ.

ಈ ಹಿಂದೆ ಕನ್ನಡದ ‘ಪೈಲ್ವಾನ್‍’ ಚಿತ್ರದಲ್ಲಿ ನಟಿಸಿದ್ದ ಬಾಲಿವುಡ್‍ ನಟ ಸುನೀಲ್‍ ಶೆ್ಟ್ಟಿ, ಈ ಚಿತ್ರದ ಮೂಲಕ ತುಳು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮೂಲತಃ ತುಳು ಭಾಷೆಯವರಾದ ಸುನೀಲ್‍ ಶೆಟ್ಟಿ, ಇಷ್ಟು ವರ್ಷಗಳಲ್ಲಿ ತುಳು ಚಿತ್ರಗಳಲ್ಲಿ ನಟಿಸಿರಲಿಲ್ಲ. ಈಗ ಇದೇ ಮೊದಲ ಬಾರಿಗೆ ಅವರು ತುಳು ಚಿತ್ರದಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ, ತಮ್ಮ ಭಾಷೆಯ ಅಭಿಮಾನದಿಂದ ಒಂದು ರೂಪಾಯಿಯನ್ನು ಪಡೆಯದೆ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಅವರು ಸುಮಾರು 18 ನಿಮಿಷಗಳ ಕಾಲ ತೆರೆಯ ಮೇಲೆ ಕಾಣಿಸಿಕೊಳ‍್ಳುತ್ತಾರಂತೆ.

ಆರ್. ಎಸ್. ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ ನಿರ್ಮಿಸಿರುವ ‘ಜೈ’ ಚಿತ್ರದಲ್ಲಿ ರೂಪೇಶ್‍ಗೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸಿದ್ದಾರೆ. ಮಿಕ್ಕಂತೆ ದೇವದಾಸ್ ಕಾಪಿಕಾಡ್, ರಾಜ್‌ ದೀಪಕ್‌ ಶೆಟ್ಟಿ, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು ಮುಂತಾದವರು ನಟಿಸಿದ್ದಾರೆ.

‘ಜೈ’ ಚಿತ್ರಕ್ಕೆ ವಿನುತ್ ಛಾಯಾಗ್ರಹಣ, ಲೊಯ್ ವೆಲೆಂಟಿನ್ ಸಲ್ದಾನ ಸಂಗೀತವಿದ್ದು, ನವೆಂಬರ್‌.14ರಂದು ಕನ್ನಡ ಮತ್ತು ತುಳು ಭಾಷೆಗಳಲ್ಲಿ ಏಕಾಲಕ್ಕೆ ತೆರೆಯ ಮೇಲೆ ಬರಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

2 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago