ಮನರಂಜನೆ

ಏಳು ಕುಟುಂಬಗಳ ದುಃಖದ ಕಥೆಯೊಂದಿಗೆ ಬಂದ ಸಾಯಿಪ್ರಕಾಶ್‍…

ಸಾಯುವುದಕ್ಕೆ ಮಾಡುವ ಧೈರ್ಯವನ್ನು ಬದಕುವುದಕ್ಕೆ ಮಾಡಿ ಎಂಬ ಸಂದೇಶ ಸಾರುವ ಸಾಯಿಪ್ರಕಾಶ್‍ ನಿರ್ದೇಶನದ 105ನೇ ಚಿತ್ರವಾದ ‘ಸೆಪ್ಟೆಂಬರ್‌ 10’ ಸದ್ಯದಲ್ಲೇ ಬಿಡುಗಡೆ ಆಗಲಿದೆ. ಅದಕ್ಕೂ ಮೊದಲು ಚಿತ್ರದ ಮೂರನೇ ಹಾಡನ್ನು ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪ್ರಿಯಾ ಹಾಸನ್‍ ಮುಂತಾದವರು ಹಾಜರಿದ್ದರು. ನಾಗೇಂದ್ರ ಪ್ರಸಾದ್‍ ಸಾಹಿತ್ಯ ಬರೆಯುವುದರ ಜೊತೆಗೆ ಸಂಗೀತವನ್ನೂ ಸಂಯೋಜಿಸಿದ್ದಾರೆ.

ಹಾಡು ಬಿಡುಗಡೆ ಮಾಡಿದ ನಾರಾಯಣ ಗೌಡ, ‘ಸಾಯಿಪ್ರಕಾಶ್ ೧೦೫ ಸಿನಿಮಾ ಮಾಡಿದ್ದಾರೆ. ಆದರೂ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದಾರೆ. ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ಸಂಪತ್ತು ಉಳಿಯುವುದಿಲ್ಲ. ನಿಮ್ಮ ಜತೆ ನಾನು ಮತ್ತು ಕಾರ್ಯಕರ್ತರು ಇರುತ್ತೇವೆ, ಚಿತ್ರದ ಬಿಡುಗಡೆಗೆ ಸಹಾಯ ಮಾಡುತ್ತೇನೆ ಎಂದು ಅವರ ಜೊತೆಗೆ ನಾವು ನಿಂತಿದ್ದೇವೆ. ಸಸಾಯುವುದು ಸುಲಭವಲ್ಲ, ಅದೇ ಧೈರ್ಯವನ್ನು ಬದುಕೋಕೆ ಮಾಡಿ ಎಂಬ ಸಂದೇಶವನ್ನು ಈ ಚಿತ್ರದ ಮೂಲಕ ಹೇಳಿದ್ದಾರೆ. ಈ ಸಂದೇಶ ಎಲ್ಲರಿಗೂ ತಲುಪಬೇಕು. ಎಲ್ಲಾ ಜಿಲ್ಲೆಗಳ ನಮ್ಮ ಕಾರ್ಯಕರ್ತರು ಈ ಚಿತ್ರವನ್ನು ನೋಡುತ್ತಾರೆ. ರಕ್ಷಣಾ ವೇದಿಕೆ ಎಂದರೆ ಬರೀ ಬೀದೀಲಿ ನಿಂತು ಹೋರಾಡುವುದಲ್ಲ. ಕನ್ನಡ ಭಾಷೆ ಉಳಿಸುವ ಎಲ್ಲ ಪ್ರಕಾರಗಳಲ್ಲೂ ಹೋರಾಟ ನಡೆಸಬೇಕು’ ಎಂದರು.

ನಟಿ ಪ್ರಿಯಾ ಹಾಸನ್ ಮಾತನಾಡುತ್ತಾ, ‘ಈ ಸಿನಿಮಾದಲ್ಲಿ ನಿರ್ದೇಶಕರು ಏಳು ಕುಟುಂಬಗಳ ಕಥೆ ಹೇಳಿದ್ದಾರೆ. ನಮ್ಮ ಮನೆಯ ಸುತ್ತ ಮುತ್ತ ನಡೆವ ಕಥೆಯೇ ಇದರಲ್ಲಿದೆ‌. ವ್ಯವಸ್ಥೆ ಸರಿ ಹೋದರೆ ಮಾತ್ರವೇ ಪರಿಹಾರ ಸಿಗಲು ಸಾಧ್ಯ’ ಎಂದರು.

ಸಾಯಿಪ್ರಕಾಶ್ ಮಾತನಾಡಿ, ‘ಇವತ್ತು ಚಿತ್ರ ಬಿಡುಗಡೆ ಮಾಡೋದು ತುಂಬಾ ಕಷ್ಟ. ಇದು ನನ್ನ 105ನೇ ಚಿತ್ರ. ಇದರಲ್ಲಿ 96 ಕನ್ನಡ ಸಿನಿಮಾ ಮಾಡಿದ್ದೇನೆ. ೭೦% ಸಕ್ಸಸ್ ಕೊಟ್ಟಿದ್ದೇನೆ. ಕಷ್ಟದ ಸಮಯದಲ್ಲಿ ಯಾರೂ ಬಂದಿಲ್ಲ. ಇದು ನನಗೆ ಹತ್ತಿರವಾದ ಸಿನಿಮಾ ಅಂತ. ಸಿನಿಮಾ ನೋಡಿ ಮನೆಗೆ ಹೋದವರೂ ಯೋಚಿಸುತ್ತಾರೆ’ ಎಂದು ಹೇಳಿದರು.

ಶ್ರೀದೇವಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ರಾಜಮ್ಮ ಸಾಯಿಪ್ರಕಾಶ್ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಶಶಿಕುಮಾರ್, ರಮೇಶ್ ಭಟ್, ಶ್ರೀನಿವಾಸಮೂರ್ತಿ, ಶ್ರೀರಕ್ಷಾ, ಶಿವಕುಮಾರ್ ಮುಂತಾದವರು ನಟಿಸಿದ್ದು, ಜೆಜಿ. ಕೃಷ್ಣ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್‌ ಜಲಸಂಧಿ ಬಳಿ ಅಮೇರಿಕಾ ಅಬ್ಬರ: ಇರಾನ್‌ನ 16 ನೌಕೆಗಳು ಧ್ವಂಸ

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…

19 mins ago

90 ದಿನದೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು…

25 mins ago

ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…

50 mins ago

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

2 hours ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

2 hours ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

3 hours ago