Mysore
31
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಪರಪ್ಪನ ಅಗ್ರಹಾರ ಜೈಲಿನಲ್ಲಿ ಜ್ವರದಿಂದ ಬಳಲುತ್ತಿರುವ ನಟ ದರ್ಶನ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಡಿ ಜೈಲು ಪಾಲಾಗಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜ್ವರದಿಂದ ಬಳಲುತ್ತಿದ್ದಾರೆ.

ರೇಣುಕಾಸ್ವಾಮಿ ಕೊಲೆ ಆರೋಪದಡಿ ಹೆಚ್ಚು ಕಡಿಮೆ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಜ್ವರ ಬಂದಿದ್ದು, ಜೈಲಿನಲ್ಲಿ ವೈದ್ಯರು ತಪಾಸಣೆಗೆ ಒಳಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ದಚ್ಚು ಅಭಿಮಾನಿಗಳಿಗೆ ತೀವ್ರ ಆತಂಕ ಉಂಟಾಗಿದೆ.

ಸರಿಯಾಗಿ ನಿದ್ದೆ ಹಾಗೂ ಊಟ ಸೇವಿಸದ ಕಾರಣ ದರ್ಶನ್‌ ಜ್ವರದಿಂದ ಬಳಲುತ್ತಿದ್ದು, ಜೈಲಿನಲ್ಲಿಯೇ ಹಿರಿಯ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಿಗ್ಗೆಯಷ್ಟೇ ಹಾಸ್ಯ ನಟ ಸಾಧುಕೋಕಿಲ ಅವರು ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ರನ್ನು ಭೇಟಿ ಮಾಡಿ ಸಮಾಧಾನ ಮಾಡಿದ್ದರು. ಆ ವೇಳೆ ಚೆನ್ನಾಗಿಯ ಇದ್ದ ದಚ್ಚುಗೆ ಇದೀಗ ಜ್ವರ ಬಂದಿದ್ದು, ವೈದ್ಯರೇ ಚಿಕಿತ್ಸೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್‌ ಅಭಿಮಾನಿಗಳು ಕೊಂಚ ಸಮಾಧಾನದಿಂದ ಇದ್ದಾರೆ.

Tags:
error: Content is protected !!