ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಡಿ ಜೈಲು ಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜ್ವರದಿಂದ ಬಳಲುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಆರೋಪದಡಿ ಹೆಚ್ಚು ಕಡಿಮೆ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಜ್ವರ ಬಂದಿದ್ದು, ಜೈಲಿನಲ್ಲಿ ವೈದ್ಯರು ತಪಾಸಣೆಗೆ ಒಳಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ದಚ್ಚು ಅಭಿಮಾನಿಗಳಿಗೆ ತೀವ್ರ ಆತಂಕ ಉಂಟಾಗಿದೆ.
ಸರಿಯಾಗಿ ನಿದ್ದೆ ಹಾಗೂ ಊಟ ಸೇವಿಸದ ಕಾರಣ ದರ್ಶನ್ ಜ್ವರದಿಂದ ಬಳಲುತ್ತಿದ್ದು, ಜೈಲಿನಲ್ಲಿಯೇ ಹಿರಿಯ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಿಗ್ಗೆಯಷ್ಟೇ ಹಾಸ್ಯ ನಟ ಸಾಧುಕೋಕಿಲ ಅವರು ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ರನ್ನು ಭೇಟಿ ಮಾಡಿ ಸಮಾಧಾನ ಮಾಡಿದ್ದರು. ಆ ವೇಳೆ ಚೆನ್ನಾಗಿಯ ಇದ್ದ ದಚ್ಚುಗೆ ಇದೀಗ ಜ್ವರ ಬಂದಿದ್ದು, ವೈದ್ಯರೇ ಚಿಕಿತ್ಸೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್ ಅಭಿಮಾನಿಗಳು ಕೊಂಚ ಸಮಾಧಾನದಿಂದ ಇದ್ದಾರೆ.
ಬೆಂಗಳೂರು: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಟೆಹರಾನ್: ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್…
ಟಿ.ನರಸೀಪುರ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…