ಮನರಂಜನೆ

ಅಮ್ಮ ಕ್ಷಮಿಸು… ಎನ್ನುತ್ತಿದ್ದಾನೆ ‘ಜಾಂಟಿ ಸನ್ ಆಫ್ ಜಯರಾಜ್’

ರೌಡಿಸಂ ಚಿತ್ರಗಳಲ್ಲಿ ಇತ್ತೀಚೆಗೆ ತಾಯಿ ಸೆಂಟಿಮೆಂಟ್‍ ಹಾಡುಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ‘ವಾಮನ’ ಚಿತ್ರದಲ್ಲಿ ‘ಕಂಡ ಕನಸ ರೂಪ…’ ಎಂಬ ತಾಯಿ ಸೆಂಟಿಮೆಂಟ್‍ ಹಾಡೊಂದು ಕೇಳಿಬಂದಿತ್ತು. ಇದೀಗ ‘ಜಾಂಟಿ ಸನ್ ಆಫ್ ಜಯರಾಜ್’ ಎಂಬ ಇನ್ನೊಂದು ರೌಡಿಸಂ ಹಿನ್ನೆಲೆಯ ಚಿತ್ರದಲ್ಲೂ ತಾಯಿ ಸೆಂಟಿಮೆಂಟ್‍ ಹಾಡನ್ನು ರೂಪಿಸಲಾಗಿದ್ದು, ಈ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ.

ವಿಶೇಷವೆಂದರೆ, ತಾಯಿ ಸೆಂಟಿಮೆಂಟ್‍ ಹಾಡುಗಳಿಗೆ ಜನಪ್ರಿಯರಾಗಿರುವ ‘ಜೋಗಿ’ ಪ್ರೇಮ್‍ ಈ ಹಾಡನ್ನು ಹಾಡಿದ್ದಾರೆ. ಇದಕ್ಕೂ ಮೊದಲು ಅವರು ‘ಎಕ್ಸ್ಕ್ಯೂಸ್‍ ಮೀ’ ಚಿತ್ರದ ‘ಬ್ರಹ್ಮ ವಿಷ್ಣು ಶಿವ …’, ‘ಜೋಗಿ’ ಚಿತ್ರದ ‘ಕೇಳುವೆನು ವರವನ್ನು ಕೊಡೆ ತಾಯಿ ಜನ್ಮವನು …’ ಮುಂತಾದ ಹಾಡುಗಳನ್ನು ಹಾಡಿದ್ದರು.

‘ಜಾಂಟಿ ಸನ್ ಆಫ್ ಜಯರಾಜ್’ ಚಿತ್ರದಲ್ಲಿ’ಲೋಕದ ಮೂಲ ಬ್ರಹ್ಮನಂತೆ, ಪ್ರೀತಿಯ ಮೂಲ ಅಮ್ಮನಂತೆ, ಅಮ್ಮ ಕ್ಷಮಿಸು …’ ಎನ್ನುವ ಹಾಡನ್ನು ನಿರ್ದೇಶಕ ಆನಂದ್‍ರಾಜ್‍ ಬರೆದಿದ್ದು, ‘ಜೋಗಿ’ ಪ್ರೇಮ್‍ ಧ್ವನಿಯಾಗಿದ್ದಾರೆ. ವಿಜೇತ್‍ ಮಂಜಯ್ಯ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡನ್ನು ಇತ್ತೀಚೆಗೆ ನಿರ್ದೇಶಕ ಯೋಗರಾಜ್‍ ಭಟ್‍ ಮತ್ತು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷೀ ಚೌಧರಿ ಬಿಡುಗಡೆ ಮಾಡಿದ್ದಾರೆ.

ಈ ಚಿತ್ರಕ್ಕೆ ಕಥೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿರುವ ಆನಂದರಾಜ್ ಮಾತನಾಡಿ, ‘ನಾವು ಹಲವರ ಬಳಿ ಯಾವ್ಯಾವುದೋ ಕಾರಣಕ್ಕೆ ಸಾರಿ ಕೇಳುತ್ತೇವೆ. ಆದರೆ ಹೆತ್ತು, ಹೊತ್ತು ಬೆಳೆಸಿದ ಅಮ್ಮನ ಬಳಿ ಕ್ಷಮಿಸು ಅಂತ ಕೇಳೋದಿಲ್ಲ. ನಮ್ಮ ಸಿನಿಮಾ ಮೂಲಕ ಎಲ್ಲಾ ತಾಯಂದರಿಗೂ ಸಾರಿ ಅಂತ ಕೇಳುತ್ತೇವೆ. ಈ ಹಾಡು ಸಿನಿಮಾದ ಕ್ಲೈಮಾಕ್ಸ್‌ದಲ್ಲಿ ಬರುತ್ತದೆ. ಮಗ ತಾಯಿ ಆಸೆಪಟ್ಟಂತೆ ಸಮಾಜದಲ್ಲಿ ಬದುಕದೆ, ತನ್ನದೇ ಹಾದಿಯಲ್ಲಿ ಸಾಗುತ್ತಾನೆ. ಕೊನೆಗೆ ಅಮ್ಮನೇ ಸರ್ವಸ್ವ ಎಂದು ತಿಳಿದಾಗ ಹಿನ್ನಲೆಯಲ್ಲಿ ಹಾಡು ಬರುತ್ತದೆ’ ಎಂದು ಹೇಳಿದರು.

ಯೋಗರಾಜ್‍ ಭಟ್‍ ಮಾತನಾಡಿ, ‘ಬದುಕಲ್ಲಿ ನಾವು ಏನೇ ತಪ್ಪು ಮಾಡಿದರೂ ಕ್ಷಮಿಸುವಂತಹ ಗುಣ ಇರೋದು ತಾಯಿಗೆ ಮಾತ್ರ. ಇಂತಹ ವಿಷಯವನ್ನು ಇಟ್ಟುಕೊಂಡು ಸಾಹಿತ್ಯ ರಚಿಸಿದ ಆನಂದರಾಜ್, ಸಂಗೀತ ಸಂಯೋಜಕ ಮತ್ತು ಹಾಡು ಹಾಡಿದ ಪ್ರೇಮ್‌ಗೆ ನನ್ನ ಕಡೆಯಿಂದ ವೈಯಕ್ತಿಕ ಅಭಿನಂದನೆಗಳು’ ಎಂದರು.

ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷೀ ಹೇಳುವಂತೆ, ‘ನಾವು ಎಲ್ಲವನ್ನೂ ಅಮ್ಮನಿಂದ ಮಾಡಿಸಿಕೊಳ್ಳುತ್ತೇವೆ. ಆದರೆ, ಥ್ಯಾಂಕ್ಸ್ ಹೇಳೋದನ್ನು ಮರೆಯುತ್ತೇವೆ. ಈ ನಿಟ್ಟಿನಲ್ಲಿ ಈ ಗೀತೆ ಮನಮುಟ್ಟುವಂತಿದೆ’ ಎಂದರು.

ಸುಗೂರು ಕುಮಾರ್‍ ನಿರ್ಮಾಣದ ‘ಜಾಂಟಿ ಸನ್ ಆಫ್ ಜಯರಾಜ್’ ಚಿತ್ರದಲ್ಲಿ ಅಜಿತ್‍ ಜಯರಾಜ್‍, ನಿವಿಷ್ಕಾ ಪಟೇಲ್‍, ರಾಜವರ್ಧನ್, ಶರತ್‌ ಲೋಹಿತಾಶ್ವ, ಕಿಶನ್, ಸೋನು ಪಾಟೀಲ್, ಮೈಕೋ ನಾಗರಾಜ್ ಮುಂತಾದವರು ಅಭಿನಯಿಸಿದ್ದಾರೆ

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

3 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

4 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

4 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

4 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

6 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

11 hours ago