ಬೆಂಗಳೂರು : ಸಿದ್ಲಿಂಗು ಚಿತ್ರದ ಬಳಿಕ ಅನೇಕ ವರ್ಷ ನಟನೆಯಿಂದ ದೂರ ಉಳಿದಿದ್ದ ಸ್ಯಾಂಡಲ್‌ವುಡ್ ಕ್ವೀನ್ ರಮ್ಯ ಇತ್ತೀಚೆಗೆ ನಟ ಡಾಲಿ ಧನಂಜಯ್ ನಟನೆಯ ‘ಉತ್ತರಕಾಂಡ’ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕಿಯಾಗಿ ನಟಿಸುತ್ತಿರುವುದಾಗಿ ಹೇಳಿದ್ದರು.
ಆದರೆ ಇದೀಗ ಈ ಚಿತ್ರದಿಂದಲೂ ಹೊರನಡೆದಿರುವುದಾಗಿ ತಿಳಿಸುವ ಮೂಲಕ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.
ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಮಾಹಿತಿ ಹಂಚಿಕೊಂಡಿರುವ ರಮ್ಯಾ, ಚಿತ್ರದ ಶೂಟಿಂಗ್‌ನಲ್ಲಿ ಪಾಲ್ಗೊಳ್ಳಲು ಸಮಯಾವಕಾಶ ಇಲ್ಲದಿರುವುದರಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
‘ಉತ್ತರಕಾಂಡ” ಚಿತ್ರವನ್ನು ‘ರತ್ನನ್ ಪ್ರಪಂಚ’ ಖ್ಯಾತಿಯ ರೋಹಿತ್ ಪದಕಿ ನಿರ್ದೇಶಿಸುತ್ತಿದ್ದು, ಕೆ.ಆರ್.ಜಿ ಸಂಸ್ಥೆ ನಿರ್ಮಾಣದ ಹೊಣೆ ಹೊತ್ತಿದೆ. ಡಾಲಿ ಧನಂಜಯ್ ಚಿತ್ರದ ನಾಯಕ ನಟನಾಗಿದ್ದು ರಮ್ಯ ಪೂರ್ಣಪ್ರಮಾಣದ ನಾಯಕಿಯಾಗಿ ಆಯ್ಕೆಯಾಗಿದ್ದರು.
ಆದರೆ ಇದೀಗ ಸಮಯದ ತೊಂದರೆಯಿಂದಾಗಿ ‘ಉತ್ತರಕಾಂಡ’ ಚಿತ್ರತಂಡದ ಜೊತೆ ಕೆಲಸ ಮಾಡುತ್ತಿಲ್ಲ. ಸ್ವಲ್ಪ ದಿನಗಳ ಕಾಲ ರಾಜಕೀಯ ಮತ್ತು ಸಿನಿಮಾಗಳಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ್ದೇನೆ ಎಂದಿರುವ ಅವರು ಚಿತ್ರತಂಡಕ್ಕೆ ಶುಭಾಶಯಗಳು’ ಎಂದು ತಿಳಿಸಿದ್ದಾರೆ.
ಈ ಹಿಂದೆ ತಮ್ಮದೇ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. 10 ವರ್ಷಗಳ ಬಳಿಕ ಉತ್ತರಕಾಂಡ ಸಿನಿಮಾ ಮೂಲಕ ನಾನು ಬೆಳ್ಳಿಪರದೆಗೆ ಹಿಂತಿರುಗುತ್ತಿದ್ದೇನೆ’ ಎಂದು ಟ್ವೀಟ್ ಕೂಡ ಮಾಡಿದ್ದರು.
ಈ ಸುದ್ದಿ ಕೇಳಿದ್ದ ರಮ್ಯ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕಿ ಬೆಳ್ಳಿ ತೆರೆಗೆ ಹಿಂದಿರುಗುತ್ತಿರುವುದನ್ನು ಕಾತುರದಿಂದ ಎದುರು ನೋಡುತ್ತಿದ್ದರು. ಆದರೆ ನಟನೆಯಿಂದ ಹಿಂದೆ ಸರೆದಿರುವ ಸುದ್ದಿ ಅಭಿಮಾನಿಗಳಲ್ಲಿ ಬೇಸರ ಉಂಟು ಮಾಡಿದೆ.
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…