ಯುವ ರಾಜಕುಮಾರ್ ಅಭಿನಯದ ಎರಡನೇ ಚಿತ್ರ ‘ಎಕ್ಕ’, ಜೂನ್ 06ರಂದು ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಮುಹೂರ್ತದ ದಿನವೇ ಘೋಷಿಸಿದೆ. ಅದಕ್ಕೆ ಸರಿಯಾಗಿ, ಚಿತ್ರೀಕರಣ ಭರದಿಂದ ಸಾಗಿದ್ದು, ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಿತ್ರತಂಡದಿಂದ ಸುದ್ದಿಯೊಂದು ಬಂದಿದೆ. ಚಿತ್ರಕ್ಕೆ ನಾಯಕಿಯಾಗಿ ಸಂಜನಾ ಆನಂದ್ ಆಯ್ಕೆಯಾಗಿದ್ದು, ಮೊದಲ ಪೋಸ್ಟರ್ ಬಿಡುಗಡೆಯಾಗಿದೆ.
ಚಿತ್ರದಲ್ಲಿ ಇಬ್ಬರು ನಾಯಕಿಯರು ಇರುತ್ತಾರಾ? ಎಂಬ ಪ್ರಶ್ನೆ ಚಿತ್ರದ ಮುಹೂರ್ತ ಸಮಾರಂಭದಲ್ಲೇ ಕೇಳಿಬಂದಿತ್ತು. ಆದರೆ, ಈ ಕುರಿತು ಚಿತ್ರತಂಡದವರು ಉತ್ತರಿಸಿರಲಿಲ್ಲ. ಕಾದು ನೋಡಿ ಎಂದಷ್ಟೇ ಹೇಳಿದ್ದರು. ಅದಕ್ಕೆ ಸರಿಯಾಗಿ, ಈಗ ನಾಯಕಿಯಾಗಿ ಸಂಜನಾ ಆನಂದ್ ಅವರನ್ನು ಪರಿಚಯಿಸಲಾಗಿದೆ. ಇದಕ್ಕೂ ಮೊದಲು ಸಂಪದ ಹುಲಿವಾನ ಸಹ ಒಬ್ಬ ನಾಯಕಿ ಎಂದು ಚಿತ್ರತಂಡದವರು ಈಗಾಗಲೇ ಘೋಷಿಸಿದ್ದರು.
‘ಎಕ್ಕ’ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ ರೋಹಿತ್ ಪದಕಿ. ಈ ಹಿಂದೆ ‘ರತ್ನನ್ ಪ್ರಪಂಚ’ ಮತ್ತು ‘ಉತ್ತರಕಾಂಡ’ ಚಿತ್ರಗಳನ್ನು ನಿರ್ದೇಶಿಸಿರುವ ಅವರಿಗೆ ಇದು ಮೂರನೇ ಚಿತ್ರ. ಈ ಚಿತ್ರದಲ್ಲಿ ಮಾಸ್ ಅಂಶಗಳ ಜೊತೆಗೆ ಗಟ್ಟಿ ಕಥೆ ಸಹ ಇದೆ ಎನ್ನುವ ಅವರು, ‘ಇದೊಂದು ರಾ ಚಿತ್ರ. ಅದರ ಜೊತೆಗೆ ಸಾಕಷ್ಟು ಭಾವನೆಗಳಿವೆ. ಚಿತ್ರದ ಮೂಲಕ ಮನುಷ್ಯನ ತಳಮಳವಳನ್ನು ತೋರಿಸುವ ಪ್ರಯತ್ನ ಮಾಡುತ್ತಿದ್ದೇವೆ. ‘ರತ್ನನ್ ಪ್ರಪಂಚ’ ಚಿತ್ರದಲ್ಲೂ ತಳಮಳವಿತ್ತು. ಆದರೆ, ಅದರಲ್ಲಿ ರಕ್ತ ಇರಲಿಲ್ಲ. ಇದರಲ್ಲಿ ರಕ್ತ ಇದೆ. ಪ್ರತಿಯೊಬ್ಬರಿಗೂ ಕನೆಕ್ಟ್ ಆಗುವ ವಿಷಯ ಈ ಚಿತ್ರದಲ್ಲಿದೆ’ ಎಂದು ಹೇಳಿದ್ದಾರೆ.
ಈ ಚಿತ್ರದಲ್ಲಿ ಯುವ, ಸಂಜನಾ ಆನಂದ್ ಮತ್ತು ಸಂಪದ ಹುಲಿವಾನ ಜೊತೆಗೆ ಅತುಲ್ ಕುಲಕರ್ಣಿ, ಶ್ರುತಿ, ಡಾ. ಸೂರಿ, ಪೂರ್ಣಚಂದ್ರ ಮೈಸೂರು, ಪುನೀತ್ ರುದ್ರನಾಗ್ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣವಿದೆ.
‘ಎಕ್ಕ’ ಚಿತ್ರವನ್ನು PRK ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್ ಮತ್ತು KRG ಸ್ಟುಡಿಯೋಸ್ ಅಡಿ ಅಶ್ವಿನಿ ಪುನೀತ್ ರಾಜಕುಮಾರ್, ಜಯಣ್ಣ, ಭೋಗೇಂದ್ರ, ಕಾರ್ತಿಕ್ ಗೌಡ ಮತ್ತು ಯೋಗಿ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…