Mysore
27
broken clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಜನವರಿ10ರಂದು ‘ಛೂ ಮಂತರ್’ ಮಾಡಲಿದ್ದಾರೆ ಸಂಜು ಮತ್ತು ಗೀತಾ

‘ಸಂಜು ವೆಡ್ಸ್ ಗೀತಾ 2’ ಚಿತ್ರದ ಚಿತ್ರೀಕರಣ ಮುಗಿದು ನಾಲ್ಕು ತಿಂಗಳುಗಳಾಗಿವೆ. ಆದರೆ, ಚಿತ್ರದ ಬಿಡುಗಡೆ ಯಾವಾಗ ಎಂಬ ವಿಷಯದಲ್ಲಿ ಸ್ಪಷ್ಟತೆ ಇರಲಿಲ್ಲ. ಮೊದಲು ದಸರಾ ವೇಳೆ ಚಿತ್ರ ಬರುತ್ತದೆ ಎಂದು ಸುದ್ದಿಯಾಗಿದ್ದರೂ, ಕಾರಣಾಂತರಳಿಂದ ಚಿತ್ರ ಬರಲಿಲ್ಲಿ. ಇದೀಗ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ಸಂಕ್ರಾಂತಿ ಪ್ರಯುಕ್ತ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ 10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

‘ಸಂಜು ವೆಡ್ಸ್ ಗೀತಾ’ ಚಿತ್ರವು 2011ರಲ್ಲಿ ಬಿಡುಗಡೆಯಾಗಿತ್ತು. ಶ್ರೀನಗರ ಕಿಟ್ಟಿ ಮತ್ತು ರಮ್ಯಾ, ಸಂಜು ಮತ್ತು ಗೀತಾ ಎಂಬ ಯುವ ಪ್ರೇಮಿಗಳಾಗಿ ನಟಿಸಿದ್ದರು. ದುರಂತಕಥೆಯಾದ ‘ಸಂಜು ವೆಡ್ಸ್ ಗೀತಾ’ ದೊಡ್ಡ ಯಶಸ್ಸು ಕಂಡಿತ್ತು. ಆ ಚಿತ್ರವನ್ನು ಇದೀಗ ನಾಗಶೇಖರ್‍ ಮುಂದುವರೆಸಿದ್ದಾರೆ. ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಪ್ರಾರಂಭವಾಗಿತ್ತು. ಇದೀಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಜನವರಿ 10ರಂದು ಚಿತ್ರ ಬಿಡುಗಡೆಯಾಗುತ್ತಿದೆ.

ವಿಶೇಷವೆಂದರೆ, ಅದೇ ದಿನ ಶರಣ್‍ ಅಭಿನಯದ ‘ಛೂ ಮಂತರ್‍’ ಚಿತ್ರ ಬಿಡುಗಡೆಯಾಗಬೇಕಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಚಿತ್ರ ಇಷ್ಟರಲ್ಲಿ ಬಿಡುಗಡೆಯಾಗಿಯೇ ಎಂಟು ತಿಂಗಳಾಗಬೇಕಿತ್ತು. ಏಪ್ರಿಲ್‍ನಲ್ಲೇ ಚಿತ್ರ ಬಿಡುಗಡೆ ಎಂದು ಚಿತ್ರತಂಡ ಘೋಷಿಸಿತ್ತು. ಆದರರೆ, ಏಪ್ರಿಲ್‍ನಲ್ಲಿ ಬಿಡುಗಡೆಯಾಗಲಿಲ್ಲ. ನಂತರ ಮೇ ಎಂದು ಹೇಳಲಾಯ್ತು. ಇದೀಗ ಕೊನೆಗೂ 2025ರ ಜನವರಿ 10ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ.

ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ರೇಶ್ಮೆ ನೂಲಿಗೆ ಉತ್ತಮ ಬೆಲೆ ಸಿಗಬೇಕೆಂದು ಹೋರಾಡುವ ನಮ್ಮ ಮಣ್ಣಿನ ಪ್ರೇಮಿಗಳ ಪ್ರೇಮಕಾವ್ಯವನ್ನು ನಾಗಶೇಖರ್ ‘ಸಂಜು ವೆಡ್ಸ್ ಗೀತಾ’ ಚಿತ್ರದಲ್ಲಿ ಹೇಳಿದರೆ, ‘ಛೂ ಮಂತರ್’ ಮೂಲಕ ಒಂದು ಹಾರರ್‍ ಕಥೆಯನ್ನು ಹೇಳುವುದಕ್ಕೆ ಮುಂದಾಗಿದ್ದಾರೆ ನಿರ್ದೇಶಕ ನವನೀತ್‍.

‘ಸಂಜು ವೆಡ್ಸ್ ಗೀತಾ 2’ ಚಿತ್ರವನ್ನು ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ನಿರ್ಮಿಸಿದ್ದು, ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ, ರಚಿತಾ ರಾಮ್, ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇನ್ನು, ‘ಛೂ ಮಂತರ್’ ಚಿತ್ರದಲ್ಲಿ ಶರಣ್‍ ಜೊತೆಗೆ ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಚಿಕ್ಕಣ್ಣ, ಪ್ರಭು ಮುಂಡ್ಕರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Tags:
error: Content is protected !!