ಮನರಂಜನೆ

ಹೊಸ ರೂಪದಲ್ಲಿ ‘ಸಂಜು ವೆಡ್ಸ್ ಗೀತಾ 2’; ಸದ್ಯದಲ್ಲೇ ಬಿಡುಗಡೆ

ಸಾಕಷ್ಟು ಸಂಕಷ್ಟಗಳ ಮಧ್ಯೆ ಜನವರಿ 17ರಂದು ಬಿಡುಗಡೆಯಾಗಿದ್ದ ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್‍ ಅಭಿನಯದ ‘ಸಂಜು ವೆಡ್ಸ್ ಗೀತಾ 2’ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಷ್ಟೇನೂ ಒಳ್ಳೆಯ ಪ್ರತಿಕ್ರಿಯೆ ಸಿಗಲಿಲ್ಲ. ಚಿತ್ರ ಅದ್ಧೂರಿಯಾಗಿ ಮೂಡಿಬಂದಿದೆಯಾದರೂ, ತಾಂತ್ರಿಕ ಶ್ರೀಮಂತವಾಗಿದ್ದರೂ, ಕಥೆಯಲ್ಲಿ ಗಟ್ಟಿತನವಿಲ್ಲ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿ ಕೇಳಿಬಂದಿತ್ತು. ಚಿತ್ರದ ಕಥೆ-ಚಿತ್ರಕಥೆ ಮತ್ತಷ್ಟು ಗಟ್ಟಿಯಾಗಿದ್ದರೆ, ಇನ್ನಷ್ಟು ಮನಕಲಕುವ ಅಂಶಗಳು ಇದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂಬ ಮಾತು ಕೇಳಿಬಂದಿತ್ತು.

ಈ ವಿಷಯ ಚಿತ್ರತಂಡಕ್ಕೂ ಸ್ಪಷ್ಟವಾಗಿರುವ ಹಾಗಿದೆ. ಹಾಗಾಗಿ, ಚಿತ್ರದ ಪ್ರದರ್ಶನವನ್ನು ಸ್ಥಗಿತಗೊಳಿಸಿ, ಇನ್ನಷ್ಟು ವಿಷಯಗಳನ್ನು ಸೇರಿಸಿ, ಮತ್ತೊಮ್ಮೆ ಹೊಸದಾಗಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಹೆಜ್ಜೆ ಇಟ್ಟಿದೆ. ಅದಕ್ಕೆ ಪೂರಕವಾಗಿ ಜನವರಿ 20ರಿಂದಲೇ ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಪ್ರದರ್ಶನವನ್ನು ವಿತರಕರಿಗೆ ಹೇಳಿ ಎಲ್ಲಾ ಕೇಂದ್ರಗಳಲ್ಲಿ ಸ್ಥಗಿತಗೊಳಿಸಲಾಗಿದೆ.

ವಿಶೇಷವೆಂದರೆ, ಹೊಸದಾಗಿ 20 ನಿಮಿಷಗಳ ಹೃದಯಸ್ಪರ್ಶಿ ದೃಶ್ಯಗಳನ್ನು ಚಿತ್ರಕ್ಕೆ ಮರು ಜೋಡಿಸಲಾಗುತ್ತಿದೆ. ಈ ಹೊಸ ಅವತರಣಿಕೆಯನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುತ್ತಿದ್ದು, ಮರುಬಿಡುಗಡೆಯ ದಿನಾಂಕವನ್ನು ಅತಿ ಶೀಘ್ರದಲ್ಲೇ ಪ್ರಕಟಿಸುವುದಾಗಿ ನಿರ್ಮಾಪಕ ಛಲವಾದಿ‌ ಕುಮಾರ್ ಹಾಗೂ ನಿರ್ದೇಶಕ ನಾಗಶೇಖರ್ ತಿಳಿಸಿದ್ದಾರೆ.

ಈ ಹಿಂದೆ, ಡಾ. ರಾಜಕುಮಾರ್‍ ಅಭಿನಯದ ‘ಬಿಡುಗಡೆ’ ಚಿತ್ರದಲ್ಲಿ ನಿರಪರಾಧಿಗೆ ಗಲ್ಲು ಶಿಕ್ಷೆಯಾಗುವಂತೆ ಚಿತ್ರೀಕರಣ ಮಾಡಿ ಬಿಡುಗಡೆ ಮಾಡಲಾಯಿತು. ಆದರೆ, ಪ್ರೇಕ್ಷಕರು ಈ ಅಂತ್ಯವನ್ನು ಒಪ್ಪದ ಕಾರಣ, ನಂತರ ನಾಯಕನನ್ನು ಬಂಧಮುಕ್ತಗೊಳಿಸುವಂತೆ ಚಿತ್ರೀಕರಣ ಮಾಡಿ, ಚಿತ್ರವನ್ನು ಮತ್ತೊಮ್ಮೆ ಬಿಡುಗಡೆ ಮಾಡಲಾಯಿತು.

‘ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ಶ್ರೀನಗರ ಕಿಟ್ಟಿ, ರಚಿತಾ ರಾಮ್, ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಶ್ರೀಧರ್‍ ಸಂಭ್ರಮ್‍ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

1 hour ago

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

3 hours ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

3 hours ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

3 hours ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

3 hours ago

ಮನುಷ್ಯನ ಮುಖವಾಡ ಕಳಚುವ ನಾಟಕ ‘ಪಾರ್ಟಿ’

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…

3 hours ago