ಈ ಹಿಂದೆ ಕೆಲವು ಚಿತ್ರಗಳು ಹಣಕಾಸಿನ ಸಮಸ್ಯೆಗಳಿಂದಾಗಿ ಮುಂದೂಡಲ್ಪಟ್ಟ ಹಲವು ಉದಾಹರಣೆಗಳು ಇವೆ. ಇನ್ನೂ ಕೆಲವು ಚಿತ್ರಗಳು ಬಿಡುಗಡೆಯೇ ಆಗುವುದಿಲ್ಲ ಎಂಬ ಪರಿಸ್ಥಿತಿ ಎದುರಾಗಿ, ಕೊನೆಯ ಕ್ಷಣದ ಸಂಧಾನಗಳಿಂದ ಸಮಸ್ಯೆಗಳು ಬಗೆಹರಿದು, ಕೊನೆಗೆ ಚಿತ್ರ ಬಿಡುಗಡೆಯಾದ ಉದಾಹರಣೆಗಳೂ ಇವೆ. ಹಣಕಾಸಿನ ಸಮಸ್ಯೆಯಿಂದಾಗಿ ಇದೀಗ ‘ಸಂಜು ವೆಡ್ಸ್ ಗೀತಾ 2’ ಚಿತ್ರ ಇಂದು ಬಿಡುಗಡೆಯಾಗುತ್ತಿಲ್ಲ.
ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಅಭಿನಯದ ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ತರಲಾಗಿದ್ದು, ಈ ಚಿತ್ರದ ಬಿಡುಗಡೆ ಇದೀಗ ಮುಂದಕ್ಕೆ ಹೋಗಿದೆ. ಈ ವಿಷಯವನ್ನು ಚಿತ್ರತಂಡದವರೇ ಅಧಿಕೃತವಾಗಿ ಹೇಳಿದ್ದು, ಸದ್ಯದಲ್ಲೇ ಘೋಷಣೆ ಮಾಡುವುದಾಗಿ ಘೋಷಿಸಿದ್ದಾರೆ.
ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ 10ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಎರಡು ದಿನಗಳ ಹಿಂದೆಯೇ ಚಿತ್ರದ ಬಿಡುಗಡೆ ಅನುಮಾನ ಎಂಬ ಸುದ್ದಿಯೂ ಕೇಳಿಬಂದಿತ್ತು. ಚಿತ್ರಕ್ಕೆ ನಿರ್ಮಾಪಕರು ಆರು ಕೋಟಿ ರೂ.ಗಳಿಗೂ ಹೆಚ್ಚು ಸಾಲ ಮಾಡಿದ್ದು, ಅದನ್ನು ಬಿಡುಗಡೆಗೆ ಮುನ್ನ ತೀರಿಸುವುದಾಗಿ ಹೇಳಿದ್ದರಂತೆ. ಆದರೆ, ಅಂದುಕೊಂಡಂತೆ ತೀರಿಸಲಾಗದ ಕಾರಣ ಚಿತ್ರಕ್ಕೆ ಹಣದ ನೀಡಿದ ಫೈನಾನ್ಶಿಯರ್‍ಗಳು, ಚಿತ್ರ ಬಿಡುಗಡೆ ಆಗದಂತೆ ತಡೆಯಾಜ್ಞೆ ತಂದಿದ್ದಾರೆ ಎಂದು ರಾಜರಾಜೇಶ್ವರಿ ನಗರದಿಂದ ಸುದ್ದಿ ಬಂದಿದೆ.
ಈ ವಿಷಯದ ಕುರಿತು ನಿರ್ದೇಶಕ ನಾಗಶೇಖರ್ ಆಗಲೀ, ನಿರ್ಮಾಪಕ ಛಲವಾದಿ ಕುಮಾರ್ ಯಾವುದೇ ಸ್ಪಷ್ಟನೆ ನೀಡಿಲ್ಲ. ಚಿತ್ರ ಮುಂದಕ್ಕೆ ಹೋಗಿದೆ ಎಂದು ಹೇಳುವ ಪೋಸ್ಟರ್ ಒಂದು ಬಿಡುಗಡೆ ಮಾಡಿದ್ದಾರೆ.
‘ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ರೇಶ್ಮೆ ನೂಲಿಗೆ ಉತ್ತಮ ಬೆಲೆ ಸಿಗಬೇಕೆಂದು ಹೋರಾಡುವ ಕನ್ನಡದ ಮಣ್ಣಿನ ಪ್ರೇಮಿಗಳ ಕಥೆ ಇದೆ. ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ನಿರ್ಮಿಸಿರುವ ‘ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ಶ್ರೀನಗರ ಕಿಟ್ಟಿ, ರಚಿತಾ ರಾಮ್, ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಶ್ರೀಧರ್ ಸಂಭ್ರಮ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣವಿದೆ.
ಹಾವನೂರು ಆಯೋಗದ ವರದಿಯನ್ನು ಅಂದಿನ ಮುಖ್ಯಮಂತ್ರಿ ಅರಸು ಅವರು 'ಹಿಂದುಳಿದ ವರ್ಗಗಳ ಬೈಬಲ್' ಎಂದು ಬಣ್ಣಿಸಿದರೆ, ಸರ್ವೋಚ್ಚ ನ್ಯಾಯಾಲಯವು 'ಹಿಂದುಳಿದ…
ಕೇವಲ 3 ಗಂಟೆಗಳಲ್ಲಿ ಸತ್ಯಾಸತ್ಯತೆ ಪರಿಶೀಲನೆ ಸಾಧ್ಯವೇ? • ಶೇಷಾದ್ರಿ ಗಂಜೂರು, ಮಾಧ್ಯಮ ತಜ್ಞ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಷಯದಲ್ಲಿ, ಅದರಲ್ಲೂ…
ರಾತ್ರಿ ಪಾಳಿಯಲ್ಲಿ ನರ್ಸ್‌ಗಳು, ವೈದ್ಯರ ನಿಯೋಜನೆಗೆ ಜನತೆ ಒತ್ತಾಯ • ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ಕ್ಷೇತ್ರದ ಶಾಸಕ ರಮೇಶ್…
ಸ್ಥಳೀಯರಿಗೆ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು • ಕಾಂಗೀರ ಬೋಪಣ್ಣ ವಿರಾಜಪೇಟೆ : ಸ್ಥಳೀಯರಿಗೆ ಎಲ್ಲ ರೀತಿಯಲ್ಲೂ ಸಮಸ್ಯೆಯನ್ನು…
ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…
ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…