ದೊಡ್ಮನೆ ಕುಡಿ, ರಾಜ್‌ಕುಮಾರ್ ಮೊಮ್ಮಗ ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ತಮ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ಕೋರಿ ಕಾಂತಾರ ಚೆಲುವೆ ಸಪ್ತಮಿ ಗೌಡ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಮೊರೆ ಹೋಗಿದ್ದಾರೆ.
ನಾಲ್ಕು ವರ್ಷಗಳ ಪ್ರೇಮ ವಿವಾಹದ ನಂತರ ನಟ ಯುವರಾಜ್ ಕುಮಾರ್ ತಮ್ಮ ಪತ್ನಿ ಶ್ರೀದೇವಿ ವಿರುದ್ಧ ಮಾನಸಿಕ ಹಿಂಸೆ ಅಗೌರವ ಮತ್ತು ಕ್ರೌರ್ಯ ಆರೋಪ ಹೊರಿಸಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಕೊರಿ ಅರ್ಜಿ ಸಲ್ಲಿಸಿದ್ದರು.
ಇತ್ತ ಯುವರಾಜ್ ಕುಮಾರ್ ಪರ ವಕೀಲರು ಶ್ರೀದೇವಿ ವಿರುದ್ಧ ಹಲವಾರು ಆರೋಪಗಳನ್ನು ಮಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಶ್ರೀದೇವಿ ಅವರು, ತಮ್ಮ ಪತಿ ಯುವ ವಿರುದ್ಧವೇ ಅಕ್ರಮ ಸಂಬಂಧ ಆರೋಪ ಮಾಡಿದ್ದರು. ಈ ಆರೋಪದಲ್ಲಿ ಕನ್ನಡದ ನಟಿ ಸಪ್ತಮಿ ಗೌಡ ಹೆಸರನ್ನು ಸಹಾ ಮುನ್ನಲೆಗೆ ಎಳೆದಿದ್ದರು. ತಾವು ಅಮೇರಿಕಾಕ್ಕೆ ತೆರಳಿದ್ದ ವೇಳೆ ಯುವರಾಜ್ ಕುಮಾರ್ ಹಾಗೂ ಸಪ್ತಮಿ ಗೌಡ ಸಜೀವನ ನಡೆಸಿದ್ದಾರೆ. ಈ ವಿಚಾರವಾಗಿ ನನ್ನನ್ನು ಮನೆಯಿಂದ ಹೊರ ಹಾಕುವ ಪ್ರಯತ್ನವು ನಡೆದಿತ್ತು ಎಂದು ಶ್ರೀದೇವಿ ಪರ ವಕೀಲರು ಗಂಭೀರವಾಗಿ ಆರೋಪ ಮಾಡಿದ್ದರು.
ಶ್ರೀದೇವಿ ಪರ ಕೋರ್ಟ್ ಮೆಟ್ಟಿಲೇರಿರುವ ಸಪ್ತಮಿ ಗೌಡ, ಶ್ರೀದೇವಿ ಅವರು ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಸುಳ್ಳು ಆರೋಪ ಮಾಡುವ ಮೂಲಕ ಮಾನಹಾನಿಕಾರ ಹೇಳಿಕೆ ನೀಡುತ್ತಿದ್ದಾರೆ. ನನ್ನ ಚಾರಿತ್ರ್ಯ ವಧೆಯಾಗಲಿದೆ ಎಂದು ಕೋರ್ಟ್ ಮೆಟ್ಟಿಲೇರಿ ನಿರ್ಬಂಧಕಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ.
ಇದಕ್ಕೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಶ್ರೀದೇವಿ ಅವರಿಗೆ ನೋಟಿಸ್ ಜಾರಿ ಮಾಡುವಂತೆ ಆದೇಶಿಸಿದೆ. ಪ್ರಸ್ತುತ ಅವರು ಅಮೇರಿಕಾದ ಹಾರ್ವರ್ಡ್ ಯುನಿವರ್ಸಿಟಿಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಅವರು ದೇಶಕ್ಕೆ ಹಿಂದಿರುಗಿದ ಬಳಿಕ ಈ ಪ್ರಕರಣದ ಮುಂದಿನ ತಿರುವು ತಿಳಿಯಲಿದೆ.
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…