ಕನ್ನಡ ಕಿರುತೆರೆಯಲ್ಲಿ ‘ಅಗ್ನಿಸಾಕ್ಷಿ’, ‘ನಾಗಿಣಿ’, ‘ಕಮಲಿ’ ಮುಂತಾದ ಧಾರಾವಾಹಿಗಳನ್ನು ನಿರ್ದೇಶಿಸಿರುವ ಹಯವದನ, ಇದೀಗ ಹಿರಿತೆರೆಗೆ ಕಾಲಿಟ್ಟಿದ್ದಾರೆ. ಅವರೀಗ ಸದ್ದಿಲ್ಲದೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದು, ಈ ಚಿತ್ರವು ಸದ್ಯದಲ್ಲೇ ಬಿಡುಗಡೆ ಆಗಲಿದೆ.
ಈ ಹಿಂದೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದ ‘ಹುಲಿಯಾ’ ಎಂಬ ಹಾಡಿ ಬಿಡುಗಡೆಯಾಗಿತ್ತು. ಇದೀಗ, ‘ಜಾಣಮರಿ’ ಎಂಬ ಚಿತ್ರದ ಎರಡನೇ ಹಾಡು ಬಿಡುಗಡೆಯಾಗಿದೆ. ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನಲ್‍ನಲ್ಲಿ ‘ಜಾಣಮರಿ’ ಗೀತೆ ಬಿಡುಗಡೆ ಮಾಡಲಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯ ರಚಿಸಿರುವ ಈ ಹಾಡಿಗೆ ರಕ್ಷಿತಾ ಸುರೇಶ್ ಹಾಗೂ ವಿಶಾಕ್ ನಾಗಲಾಪುರ ಧ್ವನಿಯಾಗಿದ್ದಾರೆ. ಶಿಯೋಮ್ ಸಂಗೀತ ಸಂಯೋಜಿಸಿದ್ದಾರೆ.
‘ಜಾಣಮರಿ’ ಹಾಡಿನಲ್ಲಿ ಅಂಜನ್ ನಾಗೇಂದ್ರ ಹಾಗೂ ವೆನ್ಯಾ ರೈ ಜೋಡಿಯಾಗಿ ಮಿಂಚಿದ್ದಾರೆ. ಕನ್ನಡ ಹುಡುಗನಾಗಿ ಅಂಜನ್ ಕಾಣಿಸಿಕೊಂಡರೆ, ವೆನ್ಯಾ ರೈ ಮರಾಠಿ ಹುಡುಗಿಯಾಗಿ ಅಭಿನಯಿಸಿದ್ದಾರೆ. ಮಹಾರಾಷ್ಟ್ರದ ಪಂಢರಪುರದಲ್ಲಿ ಇಡೀ ಹಾಡನ್ನು ಚಿತ್ರೀಕರಣ ಮಾಡಿರುವುದು ವಿಶೇಷ. ನಾಯಕ ಹಾಗೂ ನಾಯಕಿ ನಡುವಿನ ಸುಮಧುರ ಪ್ರೇಮಗೀತೆ ಇದಾಗಿದ್ದು, ಸಂಗೀತ ಪ್ರಿಯರನ್ನು ಗಮನ ಸೆಳೆದಿದೆ.
‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದಲ್ಲಿ ಸಂಜನಾ ದಾಸ್ ಕೂಡ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಬಿರಾದರ್, ಶರತ್ ಲೋಹಿತಾಶ್ವ, ದಾನಪ್ಪ, ಸ್ವಾತಿ, ದಿನೇಶ್ ಮಂಗಳೂರು, ಲಕ್ಷ್ಮೀ ನಾಡಗೌಡ ಮುಂತಾದವರು ನಟಿಸಿರುವ ಈ ಚಿತ್ರದಲ್ಲಿ ಅಪ್ಪ-ಮಗನ ಬಾಂಧವ್ಯದ ಎಳೆ ಇದೆ. ಈ ಚಿತ್ರಕ್ಕೆ ಬೆಂಗಳೂರಿನಿಂದ ಕಾಶ್ಮೀರದವರೆಗೂ ಚಿತ್ರೀಕರಣ ಮಾಡಲಾಗಿದ್ದು, ಹಲವು ರಾಜ್ಯಗಳಲ್ಲಿ ಚಿತ್ರೀಕರಣ ಮಾಡಿರುವುದು ವಿಶೇಷ.
‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರವನ್ನು ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್ ಮತ್ತು ಕೃಷ್ಣಛಾಯಾ ಚಿತ್ರ ಸಂಸ್ಥೆಗಳ ಮೂಲಕ ಪವನ್ ಸಿಮಿಕೇರಿ ಹಾಗೂ ಸಿಂಧು ಹಯವದನ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಶಿವ ಪ್ರಸಾದ್ ಸಂಗೀತ, ನಟರಾಜ್ ಮದ್ದಾಲ ಛಾಯಾಗ್ರಹಣವಿದೆ.
ಮಹಾದೇಶ್ ಎಂ ಗೌಡ ಹನೂರು: ನಂಜದೇವನಪುರ ಗ್ರಾಮದಲ್ಲಿ ಸೆರೆಹಿಡಿದಿರುವ ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ…
ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಪೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು, ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು…
ಮೈಸೂರು: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪ್ರಯತ್ನದ ಫಲವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯ ಮಣಿಪಾಲ್ ಜಂಕ್ಷನ್ ಫ್ಲೈಓವರ್…
ಮಡಿಕೇರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ರತ್ನಪುರಿ ನಿವಾಸಿ ಜಾಹಿರ್…
ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ನಾಟಕ ನೋಡಿ ಅಲ್ಲೇ ಪಕ್ಕದಲ್ಲಿ ಮಲಗಿ…