ಬೆಂಗಳೂರು : ಉದ್ಯಮಿಯೋರ್ವ ಸ್ಯಾಂಡಲ್‌ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣದಡಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಸಂತ್ರಸ್ತ ನಟಿ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಅರವಿಂದ್ ರೆಡ್ಡಿ ವಿರುದ್ಧ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಈ ಪ್ರಕರಣ ಗೋವಿಂದರಾಜನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿತ್ತು. ಅದರಂತೆ ಆರೋಪಿಯನ್ನು ಬಂಧಿಸಲಾಗಿತ್ತು. ಬಳಿಕ 46 ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸದ್ಯ ಈ ಸಂಬಂಧ ಪೊಲೀಸರು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ನೋಟಿಸ್ ನೀಡಿದ್ದಾರೆ.
ನಟಿ ಈಗಾಗಲೇ ದೂರಿನಲ್ಲಿ, ಅರವಿಂದ್ ರೆಡ್ಡಿ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಎಷ್ಟೇ ದೂರ ಸರಿದ್ರೂ, ಹಿಂದೆ ಬಿದ್ದು ನನ್ನ ಜೊತೆಗೆ ಸಲುಗೆಯಿಂದ ಇರುವಂತೆ ಒತ್ತಾಯ ಮಾಡ್ತಿದ್ದಾರೆ. ನನ್ನ ಕೆಲ ಫೋಟೋಗಳು ಮತ್ತು ನನ್ನ ಬಗ್ಗೆ ಸ್ನೇಹಿತರು ಕುಟುಂಬದವರ ಬಳಿ ಕೆಟ್ಟದಾಗಿ ಹೇಳ್ಕೊಂಡು ಬರ್ತಿದ್ದಾರೆ. ಅಷ್ಟೇ ಅಲ್ಲದೇ ಲೈಂಗಿಕವಾಗಿ ಕಿರುಕುಳ ನೀಡ್ತಿದ್ದಾರೆ ಎಂದು ಆರೋಪಿಸಿದ್ದರು.
ಇದನ್ನು ಓದಿ: ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕಿಗೆ ಉಪನ್ಯಾಸಕರಿಂದಲೇ ಲೈಂಗಿಕ ಕಿರುಕುಳ
ಇನ್ನೂ ಆರೋಪಿ ಅರವಿಂದ್ ರೆಡ್ಡಿ, ನಟಿ ಮತ್ತು ನಾನು ಎರಡು ವರ್ಷದಿಂದ ಲಿವಿ ಇನ್ ರಿಲೇಶನ್‌ಶಿಪ್‌ನಲ್ಲಿ ಇದ್ದೆವು. ಈ ವೇಳೆ ಆಕೆಗೆ ಐಷಾರಾಮಿ ಕಾರು, ಸೈಟ್, ಮನೆ ಸೇರಿದಂತೆ ಐದು ಕೋಟಿ ರೂ.ಯಷ್ಟು ಖರ್ಚು ಮಾಡಿದ್ದೀನಿ. ಲಿವಿಂಗ್‌ನಿಂದ ಮದುವೆ ಆಗೋಣ ಅಂದಿದ್ದಕ್ಕೆ ನನ್ನ ವಿರುದ್ಧ ಆರೋಪ ಮಾಡ್ತಿದ್ದಾಳೆ. ಆಕೆ ಬೇರೊಬ್ಬ ವ್ಯಕ್ತಿಯ ಜೊತೆಗೆ ಓಡಾಡ್ತಿದ್ದಾಳೆ ಎಂದು ತಿಳಿಸಿದ್ದರು. ಪೊಲೀಸರು ಆರೋಪಿ ಯಾವಾಗಿನಿಂದ ಪರಿಚಯ, ಯಾವ ರೀತಿ ಕಿರುಕುಳ ನೀಡಿದ್ದಾನೆ, ಅರವಿಂದ್ ರೆಡ್ಡಿ ಎಷ್ಟು ಹಣ ನೀಡಿದ್ದಾರೆ ಎನ್ನುವ ಕುರಿತು ವಿಚಾರಣೆ ನಡೆಸಲಿದ್ದಾರೆ. ಈವರೆಗೆ ನಟಿ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸೂಕ್ತ ದಾಖಲೆ ನೀಡಿಲ್ಲ. ಹೀಗಾಗಿ ಅದಕ್ಕೆ ಪೂರಕವಾದ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಏನಿದು ಪ್ರಕರಣ?
ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಅರವಿಂದ್ ರೆಡ್ಡಿ ಮಹಾರಾಜ ಬಳ್ಳಾರಿ ಟಸ್ಕರ್ಸ್ ಕ್ರಿಕೆಟ್ ತಂಡದ ಮಾಲೀಕನಾಗಿದ್ದ. ಜೊತೆಗೆ ಎವಿಆರ್ ಗ್ರೂಪ್ ಮಾಲೀಕನಾಗಿದ್ದ. ಅಲ್ಲದೇ ಚಲನಚಿತ್ರ ನಿರ್ಮಾಪಕ ಆಗಿರುವ ಅರವಿಂದ್ ರೆಡ್ಡಿ ಸಿನಿಮಾ ಇಂಡಸ್ಟ್ರಿಯಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದ. ಚಲನಚಿತ್ರ ನಟ, ನಟಿಯರಿಗಾಗಿಯೇ ಹಲವು ಕ್ರಿಕೆಟ್ ಪಂದ್ಯಾವಳಿ ಕೂಡ ಆಯೋಜಿಸಿದ್ದ. ಅರವಿಂದ್ ರೆಡ್ಡಿ ಒಡೆತನದ ಎವಿಆರ್ ಗ್ರೂಪ್ ದುಬೈ, ಶ್ರೀಲಂಕಾ ಸೇರಿದಂತೆ ಹಲವು ಕಡೆ ನಡೆದ ಟೂರ್ನಮೆಂಟ್‌ಗೆ ಸ್ಪಾನ್ಸರ್ ಮಾಡಿತ್ತು. 2021ರಲ್ಲಿ ನಟಿ ಹಾಗೂ ಅರವಿಂದ್ ಪರಿಚಯವಾಗಿತ್ತು. ಅದಾದ ಕೆಲವು ವರ್ಷಗಳ ಬಳಿಕ ಆತ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದ. ಈ ಕುರಿತು ನಟಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದರು.
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…