ಮನರಂಜನೆ

ಲೈಂಗಿಕ ಕಿರುಕುಳ ಪ್ರಕರಣ : ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ನೋಟಿಸ್‌

ಬೆಂಗಳೂರು : ಉದ್ಯಮಿಯೋರ್ವ ಸ್ಯಾಂಡಲ್‌ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣದಡಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಸಂತ್ರಸ್ತ ನಟಿ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಅರವಿಂದ್ ರೆಡ್ಡಿ ವಿರುದ್ಧ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಈ ಪ್ರಕರಣ ಗೋವಿಂದರಾಜನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿತ್ತು. ಅದರಂತೆ ಆರೋಪಿಯನ್ನು ಬಂಧಿಸಲಾಗಿತ್ತು. ಬಳಿಕ 46 ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸದ್ಯ ಈ ಸಂಬಂಧ ಪೊಲೀಸರು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ನೋಟಿಸ್ ನೀಡಿದ್ದಾರೆ.

ನಟಿ ಈಗಾಗಲೇ ದೂರಿನಲ್ಲಿ, ಅರವಿಂದ್ ರೆಡ್ಡಿ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಎಷ್ಟೇ ದೂರ ಸರಿದ್ರೂ, ಹಿಂದೆ ಬಿದ್ದು ನನ್ನ ಜೊತೆಗೆ ಸಲುಗೆಯಿಂದ ಇರುವಂತೆ ಒತ್ತಾಯ ಮಾಡ್ತಿದ್ದಾರೆ. ನನ್ನ ಕೆಲ ಫೋಟೋಗಳು ಮತ್ತು ನನ್ನ ಬಗ್ಗೆ ಸ್ನೇಹಿತರು ಕುಟುಂಬದವರ ಬಳಿ ಕೆಟ್ಟದಾಗಿ ಹೇಳ್ಕೊಂಡು ಬರ್ತಿದ್ದಾರೆ. ಅಷ್ಟೇ ಅಲ್ಲದೇ ಲೈಂಗಿಕವಾಗಿ ಕಿರುಕುಳ ನೀಡ್ತಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನು ಓದಿ: ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕಿಗೆ ಉಪನ್ಯಾಸಕರಿಂದಲೇ ಲೈಂಗಿಕ ಕಿರುಕುಳ

ಇನ್ನೂ ಆರೋಪಿ ಅರವಿಂದ್ ರೆಡ್ಡಿ, ನಟಿ ಮತ್ತು ನಾನು ಎರಡು ವರ್ಷದಿಂದ ಲಿವಿ ಇನ್ ರಿಲೇಶನ್‌ಶಿಪ್‌ನಲ್ಲಿ ಇದ್ದೆವು. ಈ ವೇಳೆ ಆಕೆಗೆ ಐಷಾರಾಮಿ ಕಾರು, ಸೈಟ್, ಮನೆ ಸೇರಿದಂತೆ ಐದು ಕೋಟಿ ರೂ.ಯಷ್ಟು ಖರ್ಚು ಮಾಡಿದ್ದೀನಿ. ಲಿವಿಂಗ್‌ನಿಂದ ಮದುವೆ ಆಗೋಣ ಅಂದಿದ್ದಕ್ಕೆ ನನ್ನ ವಿರುದ್ಧ ಆರೋಪ ಮಾಡ್ತಿದ್ದಾಳೆ. ಆಕೆ ಬೇರೊಬ್ಬ ವ್ಯಕ್ತಿಯ ಜೊತೆಗೆ ಓಡಾಡ್ತಿದ್ದಾಳೆ ಎಂದು ತಿಳಿಸಿದ್ದರು. ಪೊಲೀಸರು ಆರೋಪಿ ಯಾವಾಗಿನಿಂದ ಪರಿಚಯ, ಯಾವ ರೀತಿ ಕಿರುಕುಳ ನೀಡಿದ್ದಾನೆ, ಅರವಿಂದ್ ರೆಡ್ಡಿ ಎಷ್ಟು ಹಣ ನೀಡಿದ್ದಾರೆ ಎನ್ನುವ ಕುರಿತು ವಿಚಾರಣೆ ನಡೆಸಲಿದ್ದಾರೆ. ಈವರೆಗೆ ನಟಿ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸೂಕ್ತ ದಾಖಲೆ ನೀಡಿಲ್ಲ. ಹೀಗಾಗಿ ಅದಕ್ಕೆ ಪೂರಕವಾದ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ಏನಿದು ಪ್ರಕರಣ?
ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಅರವಿಂದ್ ರೆಡ್ಡಿ ಮಹಾರಾಜ ಬಳ್ಳಾರಿ ಟಸ್ಕರ್ಸ್ ಕ್ರಿಕೆಟ್ ತಂಡದ ಮಾಲೀಕನಾಗಿದ್ದ. ಜೊತೆಗೆ ಎವಿಆರ್ ಗ್ರೂಪ್ ಮಾಲೀಕನಾಗಿದ್ದ. ಅಲ್ಲದೇ ಚಲನಚಿತ್ರ ನಿರ್ಮಾಪಕ ಆಗಿರುವ ಅರವಿಂದ್ ರೆಡ್ಡಿ ಸಿನಿಮಾ ಇಂಡಸ್ಟ್ರಿಯಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದ. ಚಲನಚಿತ್ರ ನಟ, ನಟಿಯರಿಗಾಗಿಯೇ ಹಲವು ಕ್ರಿಕೆಟ್ ಪಂದ್ಯಾವಳಿ ಕೂಡ ಆಯೋಜಿಸಿದ್ದ. ಅರವಿಂದ್ ರೆಡ್ಡಿ ಒಡೆತನದ ಎವಿಆರ್ ಗ್ರೂಪ್ ದುಬೈ, ಶ್ರೀಲಂಕಾ ಸೇರಿದಂತೆ ಹಲವು ಕಡೆ ನಡೆದ ಟೂರ್ನಮೆಂಟ್‌ಗೆ ಸ್ಪಾನ್ಸರ್ ಮಾಡಿತ್ತು. 2021ರಲ್ಲಿ ನಟಿ ಹಾಗೂ ಅರವಿಂದ್‌ ಪರಿಚಯವಾಗಿತ್ತು. ಅದಾದ ಕೆಲವು ವರ್ಷಗಳ ಬಳಿಕ ಆತ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದ. ಈ ಕುರಿತು ನಟಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

37 mins ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

40 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

44 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

48 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

57 mins ago