ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್ ನಟರಿಗೆ ಕೊರಿಯೋಗ್ರಾಫರ್ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್ ವಿರುದ್ಧ ಲೈಂಗಿಕ ಆರೋಪದಡಿ ದೂರು ದಾಖಲಾಗಿದೆ.
ಹೌದು.. ಕೋರಿಯಾಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ 21 ವರ್ಷದ ಯುವತಿ ಅನೇಕ ಬಾರಿ ತನಗೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ ಸೈಬರಾಬಾದ್‌ನ ರಾಯದುರ್ಗ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಅಭಿನಯ ಚಕ್ರವರ್ತಿ ಸುದೀಪ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ತೆಲುಗು ನಟರಾದ ಅಲ್ಲು ಅರ್ಜುನ್, ರಾಮ ಚರಣ್ ತೇಜ, ಜ್ಯೂನಿಯರ್ ಎನ್‌ಟಿಆರ್ ಸೇರಿದಂತೆ ಅನೇಕ ದಕ್ಷಿಣ ಭಾರತದ ಸ್ಟಾರ್ ನಟರಿಗೆ ನೃತ್ಯ ನಿರ್ದೇಶನ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ದೂರಿನಲ್ಲೀರುವುದೇನು…
ಸಂತ್ರಸ್ಥ ಯುವತಿಯೂ, ಅನೇಕ ಸಿನಿಮಾಗಳಲ್ಲಿ ಜಾನಿ ಅವರೊಂದಿಗೆ ಕೆಲಸ ಮಾಡಿಕೊಂಡಿರುವುದಾಗಿ ಹೇಳಿದ್ದು, ಕಳೆದ ಕೆಲವು ತಿಂಗಳಿಂದ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಮುಂಬೈ, ಚೆನ್ನೈ ಹಾಗೂ ಹೈದರಾಬಾದ್ ಸೇರಿದಂತೆ ಇನ್ನಿತರ ವಿವಿಧ ಸ್ಥಳಗಳಲ್ಲಿ ಜೊತೆಯಾಗಿಯೇ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಹಲವು ಬಾರಿ ಹಲ್ಲೆ ನಡೆಸಿರುವುದಾಗಿ ದೂರಿದ್ದಾರೆ.
ಅಲ್ಲದೆ, ಸಂತ್ರಸ್ಥೆಯೂ ಹೈದರಾಬಾದ್‌ನ ನರಸಿಂಗ್‌ಯಲ್ಲಿರುವ ತನ್ನ ಸ್ವಂತ ಮನೆಯಲ್ಲಿ ಜಾನಿ ಹಲವು ಬಾರಿ ತನ್ನನ್ನು ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ರಾಯದುರ್ಗ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನಿ ಮಾಸ್ಟರ್ ವಿರುದ್ದ ಭಾರತೀಯ ದಂಡ ಸಂಹಿತೆ 376 ಪ್ರಕಾರ ಆತ್ಯಾಚಾರ, ಕ್ರಿಮಿನಲ್ ಬೆದರಿಕೆ(506) ಹಾಗೂ ಸ್ವಯಂ ಪ್ರೇತರಿತವಾಗಿ ಅಪಮಾನ ಉಂಟು ಮಾಡುವುದು (323)ರ ಕಲಂ (2) ಮತ್ತು (n) ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…