Mysore
20
overcast clouds
Light
Dark

ಆಗಸ್ಟ್ ತಿಂಗಳಲ್ಲಿ ಶಿವಣ್ಣ ಅಭಿನಯದ ಹೊಸ ಚಿತ್ರಕ್ಕೆ ಮುಹೂರ್ತ

ಇತ್ತೀಚೆಗೆಷ್ಟೇ, ಶಿವರಾಜಕುಮಾರ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಅಭಿನಯದ ಹಲವು ಚಿತ್ರಗಳು ಘೋಷಣೆಯಾಗಿವೆ. ಈ ಪೈಕಿ ಮೊದಲು ಯಾವುದು ಪ್ರಾರಂಭವಾಗುತ್ತವೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಈಗ ಆ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ.

ಶಿವರಾಜಕುಮಾರ್‍ ಅಭಿನಯದ ಶಿವಣ್ಣ 131 (ತಾತ್ಕಾಲಿಕ ಹೆಸರು) ಮೊದಲು ಪ್ರಾರಂಭವಾಗಲಿದೆ. ಆಗಸ್ಟ್ ತಿಂಗಳಲ್ಲಿ ಮುಹೂರ್ತ ನಡೆಯಲಿದ್ದು, ತಕ್ಷಣವೇ ಚಿತ್ರೀಕರಣ ಪ್ರಾರಂಭವಾಗಲಿದೆ. ಇನ್ನು, ಎಚ್‍.ಎಂ.ಟಿ ಸ್ಟುಡಿಯೋದಲ್ಲಿ ಈ ಚಿತ್ರಕ್ಕಾಗಿ ವಿಶೇಷ ಸೆಟ್‍ ನಿರ್ಮಾಣ ಮಾಡಲಾಗುತ್ತಿದ್ದು, ಅಲ್ಲೇ ಚಿತ್ರೀಕರಣ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಚಿತ್ರತಂಡದವರು ಭಾನುವಾರ ಬೆಳಿಗ್ಗೆ, ಶಿವಣ್ಣ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕ ಕಾರ್ತಿಕ್ ಅದ್ವೈತ್, ನಿರ್ಮಾಪಕರಾದ ಎನ್.ಎಸ್. ರೆಡ್ಡಿ ಹಾಗೂ ಸುಧೀರ್, ಛಾಯಾಗ್ರಹಕ ಎಜೆ ಶೆಟ್ಟಿ, ಸಂಕಲನಕಾರ ದೀಪು ಎಸ್. ಕುಮಾರ್ ಮುಂತಾದವರು ಭೇಟಿ ಮಾಡಿ ಚಿತ್ರದ ಕುರಿತು ಮಾತನಾಡಿದ್ದಾರೆ.

ಶಿವರಾಜಕುಮಾರ್‍ ಅವರನ್ನು ನಿರ್ದೇಶಿಸುವ ಮೂಲಕ ಕಾರ್ತಿಕ್ ಅದ್ವೈತ್, ಇದೇ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೆ, ಇದು ಇವರಿಗೆ ಇದು ನಿರ್ದೇಶಕನಾಗಿ ಎರಡನೇ ಸಿನಿಮಾ. ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ವಿಭಿನ್ನ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರಂತೆ. ಅವರ ಲುಕ್‍ ಸಹ ಈ ಚಿತ್ರದಲ್ಲಿ ಬದಲಾಗಲಿದೆ ಎಂದು ಹೇಳಲಾಗುತ್ತಿದೆ. ‘ಘೋಸ್ಟ್’ ಖ್ಯಾತಿಯ ವಿ.ಎಂ. ಪ್ರಸನ್ನ ಹಾಗೂ ‘ಸೀತಾರಾಮಂ’ ಖ್ಯಾತಿಯ ಜಯಕೃಷ್ಣ ಬರಹಗಾರರಾಗಿ ಈ ಚಿತ್ರದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ.

ಇನ್ನು, ‘ವಿಕ್ರಂ ವೇದ’, ‘ಆರ್ ಡಿ ಎಕ್ಸ್’, ‘ಖೈದಿ’ ಸಿನಿಮಾ ಖ್ಯಾತಿಯ ಸ್ಯಾಮ್ ಸಿ.ಎಸ್ ಸಂಗೀತ ಒದಗಿಸಲಿದ್ದಾರೆ. ಎ.ಜೆ ಶೆಟ್ಟಿ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ ಈ ಚಿತ್ರಕ್ಕಿದೆ.

ಭುವನೇಶ್ವರಿ ಪ್ರೊಡಕ್ಷನ್ ಬ್ಯಾನರ್‍ ಅಡಿ ಈ ಚಿತ್ರ ನಿರ್ಮಾಣವಾಗುತ್ತಿದೆ.