ಮನರಂಜನೆ

ಎಚ್‍.ಎಂ.ಟಿ ಫ್ಯಾಕ್ಟರಿಯಲ್ಲಿ ಶಿವಣ್ಣ-ಯಶ್‍ ಭೇಟಿ

ಶಿವರಾಜಕುಮಾರ್‍ ಅಭಿನಯದ ‘ಶಿವಣ್ಣ 131’ ಚಿತ್ರದ ಚಿತ್ರೀಕರಣ ಎಚ್‍.ಎಂ.ಟಿ. ಫ್ಯಾಕ್ಟರಿಯಲ್ಲಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಅವರನ್ನು ನಟ ಯಶ್‍ ಭೇಟಿ ಮಾಡಿ, ಉಭಯಕುಶಲೋಪರಿ ನಡೆಸಿದ್ದಾರೆ.

ಯಶ್‍ ಮತ್ತು ಶಿವಣ್ಣ ಭೇಟಿಯಾಗದೆ ಹಲವು ದಿನಗಳೇ ಆಗಿದ್ದವು. ಇತ್ತೀಚಿನ ವರ್ಷಗಳಲ್ಲಿ ಅವರಿಬ್ಬರೂ ಭೇಟಿ ಮಾಡಿದ್ದು, ವೇದಿಕೆ ಹಂಚಿಕೊಂಡಿರಲಿಲ್ಲ. ಸೋಮವಾರ ಅದಕ್ಕೆ ಮುಹೂರ್ತ ಕೂಡಿಬಂದಿದೆ.

ಶಿವಣ್ಣ ಅಭಿನಯದ ‘ಶಿವಣ್ಣ 131’ ಚಿತ್ರದ ಮೊದಲ ಹಂತದ ಚಿತ್ರೀಕರಣ ಇದೀಗ ಎಚ್‍.ಎಂ.ಟಿ. ಫ್ಯಾಕ್ಟರಿಯಲ್ಲಿ ನಡೆಯುತ್ತಿದೆ. ಅಲ್ಲಿ ಚಿತ್ರಕ್ಕೆಂದೇ ವಿಶೇಷವಾದ ಸೆಟ್‍ ನಿರ್ಮಿಸಲಾಗಿದೆ. ಇನ್ನು, ‘ಟಾಕ್ಸಿಕ್‍’ ಚಿತ್ರಕ್ಕೂ ಅಲ್ಲೇ ಪಕ್ಕದಲ್ಲಿ ಸೆಟ್‍ಗಳನ್ನು ಹಾಕಲಾಗಿದ್ದು, ಅಲ್ಲಿ ಕೆಲವು ದಿನಗಳಿಂದ ಯಶ್‍ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.

ಹೀಗೆ ಚಿತ್ರೀಕರಣದಲ್ಲಿ ಸ್ವಲ್ಪ ಸಮಯ ಬಿಡುವಿದ್ದಾಗ, ಶಿವರಾಜಕುಮಾರ್ ಅವರನ್ನು ಯಶ್‍ ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರೂ ತಮ್ಮ ಚಿತ್ರಗಳು ಮತ್ತು ಮುಂದಿನ ಯೋಜನೆಗಳ ಕುರಿತು ಮಾತನಾಡಿದ್ದಾರೆ ಎಂದು ಹೇಳಲಾಗಿದೆ.

‘ಶಿವಣ್ಣ 131’ ಚಿತ್ರವನ್ನು ಭುವನೇಶ್ವರಿ ಪ್ರೊಡಕ್ಷನ್ ಬ್ಯಾನರ್‍ನಡಿ ಎಸ್.ಎನ್. ರೆಡ್ಡಿ ಹಾಗೂ ಸುಧೀರ್ ಪಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಒಂದು ತಮಿಳು ಚಿತ್ರ ನಿರ್ದೇಶಿಸಿದ್ದ ಕಾರ್ತಿಕ್‍ ಅದ್ವೈತ್‍ ಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ.

‘ಟಾಕ್ಸಿಕ್‍’ ಚಿತ್ರವನ್ನು ಕೆವಿಎನ್‍ ಪ್ರೊಡಕ್ಷನ್ಸ್ ನಿರ್ಮಿಸುತ್ತಿದ್ದು, ಮಲಯಾಳಂ ನಿರ್ದೇಶಕಿ ಗೀತೂ ಮೋಹನ್‍ ದಾಸ್‍ ನಿರ್ದೇಶನ ಮಾಡುತ್ತಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲಿ ಬಿಡುಗಡೆ ಆಗುತ್ತಿದೆ.

ಭೂಮಿಕಾ

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

1 hour ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

1 hour ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

1 hour ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

1 hour ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

1 hour ago