ಮನರಂಜನೆ

ಕಮ್ಯುನಿಸ್ಟ್ ನಾಯಕ ‘ಗುಮ್ಮಡಿ ನರಸಯ್ಯ’ನಾದ ಶಿವರಾಜಕುಮಾರ್

ಆಂಧ್ರ ಪ್ರದೇಶದ ಸರಳ, ಸಜ್ಜನ ರಾಜಕಾರಣಿ ಮತ್ತು ಕಮ್ಯುನಿಸ್ಟ್ ಪಕ್ಷದ ನಾಯಕ ಗುಮ್ಮಡಿ ನರಸಯ್ಯನವರ ಕುರಿತು ಒಂದು ಬಯೋಪಿಕ್‍ ಆಗುತ್ತಿದ್ದು, ಈ ಚಿತ್ರದಲ್ಲಿ ಶಿವರಾಜಕುಮಾರ್, ‘ಗುಮ್ಮಡಿ ನರಸಯ್ಯ’ನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಶಿವರಾಜಕುಮಾರ್ ಇದುವರೆಗೂ ಹಲವು ಚಿತ್ರಗಳಲ್ಲಿ ನಟಿಸಿದ್ದಾರಾದರೂ, ಬಯೋಪಿಕ್‍ನಲ್ಲಿ ನಟಿಸಿರಲಿಲ್ಲ. ಈಗ ಇದೇ ಮೊದಲ ಬಾರಿಗೆ ಅವರು ಆಂಧ್ರದ ಮಾಜಿ ಶಾಸಕ ಮತ್ತು ಹೋರಾಟಗಾರಿ ಗುಮ್ಮಡಿ ನರಸಯ್ಯ ಅವರ ಕುರಿತಾದ ‘ಗುಮ್ಮಡಿ ನರಸಯ್ಯ’ ಎಂಬ ಬಯೋಪಿಕ್‍ನಲ್ಲಿ ನಟಿಸುತ್ತಿದ್ದಾರೆ.

ಇದನ್ನು ಓದಿ: ಸಿನಿಮಾ ನಿರ್ಮಾಣದತ್ತ ಪ್ರಜ್ವಲ್: ಪುರಾತನ ಫಿಲಂಸ್‍ ಜೊತೆ ನಿರ್ಮಾಣ

ಗುಮ್ಮಡಿ ನರಸಯ್ಯ ಅವರು ಕಮ್ಯುನಿಸ್ಟ್ ನಾಯಕನಾಗಿ ಗುರುತಿಸಿಕೊಂಡವರು. ಆಂಧ್ರದ ಕಮ್‍ಮಮ್ ಜಿಲ್ಲೆಯ ಟೇಕುಲಪಲ್ಲಿ ಗ್ರಾಮದ ಆದಿವಾಸಿ ಸಮುದಾಯದವರು. ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಸೈಕಲ್‍ನಲ್ಲೇ ಓಡಾಡುತ್ತಿದ್ದರು. ರಸ್ತೆ ಬಬದಿಯಲ್ಲೇ ಊಟ ಮಾಡುತ್ತಿದ್ದರು. ತಮಿಳು ನಿರ್ದೇಶಕ ಸಮುದ್ರಕಣಿ, ಗುಮ್ಮಡಿ ನರಸಯ್ಯ ಅವರ ಕುರಿತು ಬಯೋಪಿಕ್‍ ಮಾಡುವುದಾಗಿ ಘೋಷಿಸಿದ್ದರು. ಅದಕ್ಕೂ ಮೊದಲೇ ಶಿವರಾಜಕುಮಾರ್ ಅಭಿನಯದಲ್ಲಿ ಚಿತ್ರ ಪ್ರಾರಂಭವಾಗುತ್ತಿದ್ದು, ಮೊದಲ ಹಂತವಾಗಿ ದೀಪಾವಳಿಗೆ ಪೋಸ್ಟರ್ ಸಹ ಬಿಡುಗಡೆಯಾಗಿದೆ.

ಈ ಚಿತ್ರಕ್ಕೆ ಪರಮೇಶ್ವರ್ ಹೈವ್ರಲೆ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿದರೆ, ಸುರೇಶ್‍ ರೆಡ್ಡಿ ನಿರ್ಮಾಣ ಮಾಡುತ್ತಿದ್ದಾರೆ. ಪರಮೇಶ್ವರ್ ಇದಕ್ಕ ಮೊದಲು ‘ಚಿರು ಗೋಡವಾಲು’, ‘ಲಾವಣ್ಯ ವಿತ್‍ ಲವ್‍ ಬಾಯ್ಸ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದು, ಇದೇ ಮೊದಲ ಬಾರಿಗೆ ಚಿತ್ರ ನಿರ್ದೇಶನಕ್ಕಿಳಿದಿದ್ದಾರೆ. ಸತೀಶ್‍ ಮುತ್ಯಾಲ ಛಾಯಾಗ್ರಹಣ ಮತ್ತು ಸುರೇಶ್‍ ಬೊಬ್ಬಿಲಿ ಅವರ ಸಂಗೀತ ಮತ್ತು ಸಂಕಲನ ಈ ಚಿತ್ರಕ್ಕಿದೆ. ಇದೊಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು, ತೆಲುಗು ಮತ್ತು ಕನ್ನಡದಲ್ಲಿ ತಯಾರಾಗಿ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಿಗೆ ಡಬ್‍ ಆಗಿ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

17 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

17 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

17 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago