ಮನರಂಜನೆ

ಚಿತ್ರರಂಗದ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಶ್ರುತಿ

ಸಿನಿಮಾ ನಾಯಕರಂತೆ, ನಾಯಕಿಯರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ. ಅದರಲ್ಲೂ ಕಳೆದ ಮೂರು ವರ್ಷಗಳಿಂದ ಚಿತ್ರರಂಗದಲ್ಲಿರುವ ಮತ್ತು ಹಿರಿಯ ನಟಿಯಾಗಿರುವ ಶ್ರುತಿ, ಇತ್ತೀಚಿನ ವರ್ಷಗಳಲ್ಲಿ ಬಹಿರಂಗವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ.

ಹೀಗಿರುವಾಗಲೇ ಶ್ರುತಿ, ಗುರುವಾರ (ಸೆ.18) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದಕ್ಕೆ ಕಾರಣವೂ ಇದೆ. ತಮ್ಮ ನಿಜಜೀವನದಲ್ಲಿ 50 ವರ್ಷ ಪೂರೈಸಿರುವ ಶ್ರುತಿ, ವೃತ್ತಿ ಬದುಕಿನಲ್ಲಿ 35 ವರ್ಷಗಳನ್ನು ಪೂರೈಸಿದ್ದಾರೆ. ಅವರು ನಟಿಸಿದ ಮೊದಲ ಚಿತ್ರ ‘ಆಸೆಗೊಬ್ಬ ಮೀಸೆಗೊಬ್ಬ’ ಚಿತ್ರವು 1990ರಲ್ಲಿ ಬಿಡುಗಡೆಯಾಗಿ 35 ವರ್ಷಗಳನ್ನು ಪೂರೈಸಿದೆ. ಈ ಚಿತ್ರದಲ್ಲಿ ಅವರು ಪ್ರಿಯದರ್ಶಿನಿ ಎಂಬ ಹೆಸರಿನಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಈಗಾಗಲೇ ಮಾರ್ಚ್‍ ತಿಂಗಳಲ್ಲೇ ಈ ಚಿತ್ರ ಬಿಡುಗಡೆಯಾಗಿ 35 ವರ್ಷಗಳಾಗಿವೆ.

ಇದನ್ನೂ ಓದಿ: ಬಾಲಕಿ ಸೇರಿದಂತೆ 8 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ : ಬೆಂಗಳೂರಿನ ಯೋಗ ಗುರು ಬಂಧನ

ಈ ಡಬ್ಬಲ್‍ ಸಂಭ್ರಮವನ್ನು ಶ್ರುತಿ ಚಿತ್ರರಂಗದ ಬಾಂಧವರ ಜೊತೆಗೆ ಹಂಚಿಕೊಂಡಿದ್ದಾರೆ. ಇಸ್ಕಾನ್‍ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಶಿವರಾಜಕುಮಾರ್, ರವಿಚಂದ್ರನ್‍, ಮಾಲಾಶ್ರೀ, ಮಾಳವಿಕಾ ಅವಿನಾಶ್‍, ಡಾ. ಜಯಮಾಲಾ, ಅನು ಪ್ರಭಾಕರ್‍, ರವಿಶಂಕರ್,‍ ಬಿ.ಸಿ. ಪಾಟೀಲ್‍, ಶರಣ್‍, ಆರಾಧನಾ ರಾಮ್‍, ಉಮಾಶ್ರೀ ಸೇರಿದಂತೆ ಹಲವರು ಹಾಜರಿದ್ದರು. ಅವರೆಲ್ಲರ ಸಮ್ಮುಖದಲ್ಲಿ ಶ್ರುತಿ ತಮ್ಮ ಕೇಕ್‍ ಕತ್ತರಿಸಿ, ಹುಟ್ಟುಹಬ್ಬ ಆಚರಿಸಿಕೊಂಡರು.

ಈ ಕಾರ್ಯಕ್ರಮವನ್ನು ಶ್ರುತಿ ಅವರ ಮಗಳು ಗೌರಿ ಆಯೋಜಿಸಿದ್ದು ವಿಶೇಷವಾಗಿತ್ತು.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

54 mins ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

1 hour ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

2 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

2 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

3 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

3 hours ago