ಯೋಗಿ ಅಭಿನಯದ ‘ಸಿದ್ಲಿಂಗು 2’ ಚಿತ್ರದ ಚಿತ್ರೀಕರಣವು ಕೆಲವು ತಿಂಗಳುಗಳ ಹಿಂದೆಯೇ ಮುಗಿದಿತ್ತು. ಆದರೆ, ಚಿತ್ರದ ಬಿಡುಗಡೆ ಯಾವಾಗ ಎಂದು ಚಿತ್ರತಂಡ ಘೋಷಣೆಯಾಗಿರಲಿಲ್ಲ. ಇದೀಗ ಪ್ರೇಮಿಗಳ ದಿನದಂದು ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ.
ದಸರಾ ಹೊತ್ತಿಗೆ ಚಿತ್ರದ ಬಿಡುಗಡೆ ಮಾಡುವುದಾಗಿ ಹೇಳಿದ್ದರು ನಿರ್ದೇಶಕ ವಿಜಯಪ್ರಸಾದ್ ಮುಹೂರ್ತ ಸಮಾರಂಭದಲ್ಲೇ ಘೋಷಿಸಿದ್ದರು. ಆದರೆ, ಅವರು ಅಂದುಕೊಂಡಂತೆ ಆಗಲಿಲ್ಲ. ಇದೀಗ ಫೆಬ್ರವರಿ 14ರಂದು ʻಸಿದ್ಲಿಂಗು 2’ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.
2012ರಲ್ಲಿ ಯೋಗಿ ಅಭಿನಯದ ‘ಸಿದ್ಲಿಂಗು’ ಚಿತ್ರ ಬಿಡುಗಡೆಯಾಗಿತ್ತು. ಯೋಗಿ ಜೊತೆಗೆ ರಮ್ಯಾ, ಸುಮನ್ ರಂಗನಾಥ್, ಕೆ.ಎಸ್. ಶ್ರೀಧರ್, ಗಿರಿಜಾ ಲೋಕೇಶ್ ಮುಂತಾದವರು ಆ ಚಿತ್ರದಲ್ಲಿ ನಟಿಸಿದ್ದರು. ಇದೀಗ 13 ವರ್ಷಗಳ ನಂತರ ಚಿತ್ರದ ಮುಂದುವರೆದ ಭಾಗದೊಂದಿಗೆ ವಿಜಯಪ್ರಸಾದ್ ವಾಪಸ್ಸಾಗುತ್ತಿದ್ದಾರೆ. ಯೋಗಿ ಇಲ್ಲೂ ಮುಂದುವರೆಯಲಿದ್ದು, ಆ ಚಿತ್ರದ ಕೊನೆಯಲ್ಲಿ ರಮ್ಯಾ ಅವರ ಪಾತ್ರ ನಿಧನವಾಗುವುದರಿಂದ, ರಮ್ಯಾ ಪಾತ್ರ ಇಲ್ಲಿ ಮುಂದುವರೆಯುವುದಿಲ್ಲ. ಅದರ ಬದಲು ನಾಯಕಿಯಾಗಿ ಸೋನು ಕಾಣಿಸಿಕೊಂಡಿದ್ದಾರೆ. ಜೊತೆಗೆ ಆ ಚಿತ್ರದಲ್ಲಿ ಅಭಿನಯಿಸಿದ್ದ ಗಿರಿಜಾ ಲೋಕೇಶ್, ಸುಮನ್ ರಂಗನಾಥ್ ಮುಂತಾದವರು ಈ ಚಿತ್ರದಲ್ಲಿ ಮುಂದುವರೆಯಲಿದ್ದಾರೆ.
ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿರುವ ‘ಸಿದ್ಲಿಂಗು 2’ ಚಿತ್ರತಂಡ, ಡಬ್ಬಿಂಗ್ ಕಾರ್ಯವನ್ನೂ ಮುಗಿಸುವ ಹಂತಕ್ಕೆ ತಲುಪಿದ್ದು, ಮುಂದಿನ ವಾರದಲ್ಲಿ ನಾಯಕಿ ಸೋನುಗೌಡ ಅವರ ಮೊದಲನೋಟವನ್ನ ಅನಾವರಣಗೊಳಿಸಲು ಸಜ್ಜಾಗಿದೆ. ಇದರ ಜೊತೆಗೆ ಹಾಡಿನ ಲಿರೀಕಲ್ ವಿಡೀಯೋವನ್ನೂ ಬಿಡುಗಡೆ ಮಾಡಲು ತಯಾರಿ ನಡೆಸಿದೆ.
‘ಸಿದ್ಲಿಂಗು 2’ ಚಿತ್ರವನ್ನು ಶ್ರೀಹರಿ ಮತ್ತು ರಾಜು ಶೆರಿಗಾರ್ ಜೊತೆಯಾಗಿ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಅನೂಪ ಸೀಳಿನ್ ಸಂಗೀತ ಮತ್ತು ಪ್ರಸನ್ನ ಗುರಳಕೆರೆ ಛಾಯಾಗ್ರಹಣವಿದೆ.
ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…
ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…
ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…
ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ…
ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…
ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…