‘ಸಿಂಪಲ್’ ಸುನಿ ಅಭಿನಯದ ‘ಗತವವೈಭವ’ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಗಿದಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಸುನಿ ತಿಳಿಸಿದ್ದಾರೆ. ಈ ಮಧ್ಯೆ, ‘ಬಿಗ್ ಬಾಸ್’ನ ಕಾರ್ತಿಕ್ ಮಹೇಶ್ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ಪ್ರಾರಂಭಿಸುವುದಕ್ಕೆ ಸಜ್ಜಾಗಿದ್ದಾರೆ.
ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಸಿನಿಮಾಗಳನ್ನು ನಿರ್ಮಿಸುವ ಆಶಯದೊಂದಿಗೆ ಬೆಂಗಳೂರಿನ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ತಮ್ಮದೇ ಎ.ವಿ.ಆರ್ ಎಂಟರ್‍ಟೈನರ್ಸ್ ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದು, ಈ ಬ್ಯಾನರ್ ಅಡಿ ಏಕಕಾಲಕ್ಕೆ ಎರಡು ಸಿನಿಮಾಗಳನ್ನು ಘೋಷಣೆ ಮಾಡಿದ್ದಾರೆ.
ಈ ಪೈಕಿ ‘ಸಿಂಪಲ್’ ಸುನಿ ಮತ್ತು ಕಾರ್ತಿಕ್ ಮಹೇಶ್ ಚಿತರವೂ ಒಂದು. ಈ ಚಿತ್ರಕ್ಕೆ ‘ರಿಚಿ ರಿಚ್’ ಎಂಬ ಹೆಸರನ್ನು ಇಡಲಾಗಿದೆ. ಈ ಚಿತ್ರದಲ್ಲಿ ಕಾರ್ತಿಕ್, ರಿದ್ದೇಶ್ ಚಿನ್ನಯ್ಯ ಎಂಬ ಪಾತ್ರದಲ್ಲಿ ಕಾರ್ತಿಕ್ ನಟಿಸುತ್ತಿದ್ದಾರೆ. ಕೌಟಂಬಿಕ ಜೊತೆಗೆ ಎಮೋಷನಲ್ ಅಂಶಗಳನ್ನು ಸೇರಿಸಿ ಸುನಿ ಕಥೆ ಬರೆದಿದ್ದಾರೆ. ಈ ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತ ಮತ್ತು ಅಭಿಲಾಷ್ ಕಳತ್ತಿ ಛಾಯಾಗ್ರಹಣವಿರಲಿದೆ.
AVR Entertainers ಬ್ಯಾನರ್ ಅಡಿ ನಿರ್ಮಾಣವಾಗುತ್ತಿರುವ ಎರಡನೇ ಸಿನಿಮಾಗೆ ಸುಜಯ್ ಶಾಸ್ತ್ರಿ ನಿರ್ದೇಶಕರು. ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’, ‘ಎಲ್ರ ಕಾಲೆಳೆಯುತ್ತೆ ಕಾಲ’ ಚಿತ್ರಗಳನ್ನು ನಿರ್ದೇಶಿಸಿರುವ ಸುಜಯ್ ಈ ಬಾರಿ ಕ್ರೀಡಾ ಕಥೆಯನ್ನು ತೆರೆಯ ಮೇಲೆ ತರುವುದಕ್ಕೆ ಹೊರಟಿದ್ದಾರೆ. ಈ ಚಿತ್ರಕ್ಕೆ ಅವರೇ ಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ. ‘8’ ಹೆಸರಿನ ಈ ಚಿತ್ರಕ್ಕೆ ಪುಟ್ಭಲ್ ಹಿನ್ನೆಲೆಯ ಕಥೆ ಇದೆ. ಈ ಚಿತ್ರದ ನಾಯಕ ಯಾರು? ಅನ್ನೋದನ್ನು ಸದ್ಯಕ್ಕೆ ಸಸ್ಪೆನ್ಸ್ ಆಗಿ ಇಡಲಾಗಿದೆ. ಟೀಂ ರೆಡಿ ಇದೆ. ಕೋಚ್ ಯಾರು ಅನ್ನೋದನ್ನು ಸ್ಪಲ್ಪ ದಿನದಲ್ಲೇ ಹೇಳೋದಾಗಿ ಚಿತ್ರತಂಡ ತಿಳಿಸಿದೆ.
‘ರಿಚಿ ರಿಚ್’ ಮತ್ತು ‘8’ ಚಿತ್ರಗಳು ಸದ್ಯದಲ್ಲೇ ಪ್ರಾರಂಭವಾಗಲಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…