ಈ ವರ್ಷ ಬಿಡುಗಡೆಯಾದ ವಿನಯ್ ರಾಜಕುಮಾರ್ ಅಭಿನಯದ ‘ಒಂದು ಸರಳ ಪ್ರೇಮಕಥೆ’ ಚಿತ್ರದ ನಂತರ ಒಂದಿಷ್ಟು ಹೊಸ ಚಿತ್ರದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ‘ಸಿಂಪಲ್’ ಸುನಿ, ಇದೀಗ ತಮ್ಮ ಹೊಸ ಚಿತ್ರವನ್ನು ಘೋಷಿಸಿದ್ದಾರೆ. ಈ ಬಾರಿ ಅವರು ಬೆಳ್ಳಿತೆರೆಗೆ ಹೊಸ ನಾಯಕನನ್ನು ಪರಿಚಯಿಸುತ್ತಿದ್ದು, ಚಿತ್ರಕ್ಕೆ ‘ದೇವರು ರುಜು ಮಾಡಿದನು’ ಎಂಬ ಹೆಸರನ್ನು ಇಡಲಾಗಿದೆ.
ಕುವೆಂಪುರ ‘ದೇವರು ರುಜು ಮಾಡಿದನು, ರಸವಶನಾಗುತ ಕವಿ ಅದ ನೋಡಿದನು …’ ಎಂಬ ಜನಪ್ರಿಯ ಕಾವ್ಯದಿಂದ ಪ್ರೇರಿತರಾಗಿ ಸುನಿ, ಈ ಚಿತ್ರಕ್ಕೆ ‘ದೇವರು ರುಜು ಮಾಡಿದನು’ ಎಂಬ ಚೆಂದದ ಹೆಸರನ್ನು ಇಟ್ಟಿದ್ದಾರೆ.
‘ದೇವರು ರುಜು ಮಾಡಿದನು’ ಚಿತ್ರದ ಮೂಲಕ ಬೆಳ್ಳಿಪರದೆಗೆ ನವ ನಾಯಕನ್ನು ಪರಿಚಯಿಸಿದ್ದಾರೆ. ರಂಗಭೂಮಿ ಹಿನ್ನೆಲೆಯ ವೀರಾಜ್ ಅವರು ಹೀರೋ ಆಗಿ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಕೈಯಲ್ಲಿ ಗಿಟಾರ್ ಹಿಡಿದು ರಕ್ತಸಿಕ್ತರಾಗಿ ಕಾಣಿಸಿಕೊಂಡಿರುವ ವೀರಾಜ್ ಅವರ ಮೊದಲ ಪೋಸ್ಟರ್ ಇತ್ತೀಚೆಗೆ ಬಿಡುಗಡೆ ಆಗಿದೆ.
ಇದೇ ತಿಂಗಳ 20ರಂದು ಸಿನಿಮಾದ ಮುಹೂರ್ತ ನಡೆಯಲಿದ್ದು, ಮುಹೂರ್ತದ ನಂತರ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ. ಸಿಂಪಲ್ ಸುನಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ರಚಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ.
ಗ್ರೀನ್ ಹೌಸ್ ಮೂವೀಸ್ ಬ್ಯಾನರ್ ನಡಿಯಲ್ಲಿ ‘ದೇವರು ರುಜು ಮಾಡಿದನು’ ಚಿತ್ರಕ್ಕೆ ಗೋವಿಂದರಾಜ್ ಸಿಟಿ ನಿರ್ಮಾಣ ಮಾಡುತ್ತಿದ್ದಾರೆ. ಜೆಜೆ ಮತ್ತು ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಸಂತೋಷ್ ರೈ ಪತಾಜೆ ಛಾಯಾಗ್ರಹಣ, ವಿನಯ್ ಸಂಕಲನ ಚಿತ್ರಕ್ಕಿದೆ. ಬೆಂಗಳೂರು, ಉತ್ತರ ಕನ್ನಡ, ಗೋವಾ ಸುತ್ತಮುತ್ತ ‘ದೇವರು ರುಜು ಮಾಡಿದನು’ ಚಿತ್ರದ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…