Mysore
28
few clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ಉಪೇಂದ್ರ ಹುಟ್ಟುಹಬ್ಬಕ್ಕೆ ‘45’ ಚಿತ್ರದ ವಿಶೇಷ ಪೋಸ್ಟರ್

ಅರ್ಜುನ್‍ ಜನ್ಯ ನಿರ್ದೇಶನದ ‘45’ ಚಿತ್ರದಲ್ಲಿ ಶಿವರಾಜಕುಮಾರ್, ಜೊತೆಗೆ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯಿಸುತ್ತಿದ್ದಾರೆ ಎಂಬ ವಿಷಯ ಗೊತ್ತೇ ಇದೆ. ಆದರೆ, ಚಿತ್ರದಲ್ಲಿ ಉಪೇಂದ್ರ ಅವರ ಪಾತ್ರವೇನು? ಅವರು ಹೇಗೆ ಕಾಣುತ್ತಾರೆ ಎಂಬ ವಿಷಯ ಬಹಿರಂಗಗೊಂಡಿರಲಿಲ್ಲ. ಈಗ ಅದು ಕೊನೆಗೂ ಬಹಿರಂಗಗೊಂಡಿದೆ.

ಬುಧವಾರ, ಉಪೇಂದ್ರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಪ್ರಯುಕ್ತ ಅವರ ವಿಶೇಷ ಪೋಸ್ಟರ್‍ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದೆ. ಉಪೇಂದ್ರ ಅವರ ನಿವಾಸಕ್ಕೆ ‘45’ ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಮುಂತಾದವರು ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಚಿತ್ರದಲ್ಲಿ ಉಪೇಂದ್ರ ವಿಭಿನ್ನ ಪಾತ್ರದಲ್ಲಿ ಹಾಗೂ ಗೆಟಪ್‍ನಲ್ಲಿ ಕಾಣಿಸಿಕೊಂಡಿದ್ದು, ಅವರ ಪಾತ್ರದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಆದರೆ, ಪಾತ್ರವೇನು ಎಂಬ ಗುಟ್ಟನ್ನು ಉಪೇಂದ್ರ ಆಗಲೀ, ಚಿತ್ರತಂಡದವರಾಗಲೀ ಬಿಟ್ಟುಕೊಟ್ಟಿಲ್ಲ.

ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಉಮಾ ರಮೇಶ್ ರೆಡ್ಡಿ ನಿರ್ಮಿಸುತ್ತಿರುವ ‘45’ ಚಿತ್ರದ ಚಿತ್ರೀಕರಣ ಮುಕ್ತಾಯದ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಚಿತ್ರೀಕರಣ ಮುಗಿಯಲಿದೆ. ಚಿತ್ರದಲ್ಲಿ ಶಿವರಾಜಕುಮಾರ್, ಉಪೇಂದ್ರ, ರಾಜ್‍ ಬಿ ಶೆಟ್ಟಿ ಜೊತೆಗೆ ಕೌಸ್ತುಭ ಮಣಿ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅರ್ಜುನ್‍ ಜನ್ಯ ಸಂಗೀತ ಮತ್ತು ಸತ್ಯ ಹೆಗಡೆ ಛಾಯಾಗ್ರಹಣವಿದೆ.

Tags: