ಅರ್ಜುನ್ ಜನ್ಯ ನಿರ್ದೇಶನದ ‘45’ ಚಿತ್ರದಲ್ಲಿ ಶಿವರಾಜಕುಮಾರ್, ಜೊತೆಗೆ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯಿಸುತ್ತಿದ್ದಾರೆ ಎಂಬ ವಿಷಯ ಗೊತ್ತೇ ಇದೆ. ಆದರೆ, ಚಿತ್ರದಲ್ಲಿ ಉಪೇಂದ್ರ ಅವರ ಪಾತ್ರವೇನು? ಅವರು ಹೇಗೆ ಕಾಣುತ್ತಾರೆ ಎಂಬ ವಿಷಯ ಬಹಿರಂಗಗೊಂಡಿರಲಿಲ್ಲ. ಈಗ ಅದು ಕೊನೆಗೂ ಬಹಿರಂಗಗೊಂಡಿದೆ.
ಬುಧವಾರ, ಉಪೇಂದ್ರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಪ್ರಯುಕ್ತ ಅವರ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದೆ. ಉಪೇಂದ್ರ ಅವರ ನಿವಾಸಕ್ಕೆ ‘45’ ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಮುಂತಾದವರು ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಚಿತ್ರದಲ್ಲಿ ಉಪೇಂದ್ರ ವಿಭಿನ್ನ ಪಾತ್ರದಲ್ಲಿ ಹಾಗೂ ಗೆಟಪ್‍ನಲ್ಲಿ ಕಾಣಿಸಿಕೊಂಡಿದ್ದು, ಅವರ ಪಾತ್ರದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಆದರೆ, ಪಾತ್ರವೇನು ಎಂಬ ಗುಟ್ಟನ್ನು ಉಪೇಂದ್ರ ಆಗಲೀ, ಚಿತ್ರತಂಡದವರಾಗಲೀ ಬಿಟ್ಟುಕೊಟ್ಟಿಲ್ಲ.
ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಉಮಾ ರಮೇಶ್ ರೆಡ್ಡಿ ನಿರ್ಮಿಸುತ್ತಿರುವ ‘45’ ಚಿತ್ರದ ಚಿತ್ರೀಕರಣ ಮುಕ್ತಾಯದ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಚಿತ್ರೀಕರಣ ಮುಗಿಯಲಿದೆ. ಚಿತ್ರದಲ್ಲಿ ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಜೊತೆಗೆ ಕೌಸ್ತುಭ ಮಣಿ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಮತ್ತು ಸತ್ಯ ಹೆಗಡೆ ಛಾಯಾಗ್ರಹಣವಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…