Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಪ್ರತಿ ಆರೋಪ ಮುಕ್ತವಾಗುವವರೆಗೂ ಹೋರಾಡುತ್ತೇನೆ ಎಂದ ಶ್ರೀದೇವಿ

ಡಾ. ರಾಜಕುಮಾರ್ ಮೊಮ್ಮಗ ಮತ್ತು ರಾಘವೇಂದ್ರ ರಾಜಕುಮಾರ್ ಅವರ ಕಿರಿಯ ಮಗ ಯುವ ರಾಜಕುಮಾರ್‍ ತಮ್ಮ ಪತ್ನಿ ಶ್ರೀದೇವಿ ಭೈರಪ್ಪ ವಿರುದ್ಧ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಕಳೆದೊಂದು ತಿಂಗಳನಿಂದ ಸಾಕಷ್ಟು ಚರ್ಚೆಯಾಗುತ್ತಲೇ ಇದೆ.

ಈ ಮಧ್ಯೆ, ಶ್ರೀದೇವಿ ತಾವು ಅಮೇರಿಕಾಗೆ ತೆರಳುತ್ತಿರುವುದಾಗಿ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಮ್ಮ ಕಷ್ಟದ ಸಮಯದಲ್ಲಿ ಜೊತೆಗೆ ನಿಂತ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಅಮೇರಿಕಾಗೆ ಉನ್ನತ ವ್ಯಾಸಂಗಕ್ಕಾಗಿ ಶ್ರೀದೇವಿ ಹೋಗಿದ್ದು, ಜೂನ್‍ ಮೊದಲ ವಾರದಲ್ಲಿ ಬೆಂಗಳೂರಿಗೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ, ಶ್ರೀದೇವಿ ಅವರು ಹೇಳಿರುವಂತೆ ಕಳೆದ 15 ದಿನಗಳಿಂದ ಅವರು ಬೆಂಗಳೂರಿನಲ್ಲಿದ್ದು, ಇದೀಗ ಅಮೇರಿಕಾಗೆ ವಾಪಸ್ಸಾಗುತ್ತಿದ್ದಾರಂತೆ.

ಈ ಕುರಿತು ಬರೆದುಕೊಂಡಿರುವ ಅವರು, ಕಳೆದ 15 ದಿನಗಳಿಂದ ಕರ್ನಾಟಕದಲ್ಲಿ ಕುಟುಂಬದ ಜೊತೆ ಇದ್ದಾಗ, ಖಾಸಗೀ ಬದುಕನ್ನು ಘರವಿಸಿ ಘನತೆ ಕಾಪಾಡುವಲ್ಲಿ, ಅತ್ಯಂತ ಸೂಕ್ಷ್ಮ ಮತ್ತು ಜವಾಬ್ದಾರಿಯುತ ನಡೆ ತೋರಿದ ಮಾಧ್ಯಮದವರಿಂದ ಧನ್ಯವಾದ ಹೇಳುವ ಮೂಲಕ ಈ ಪತ್ರ ಶುರು ಮಾಡಿದ್ದಾರೆ.

‘ಕಳೆದ ಏಳು ತಿಂಗಳುಗಳು ತೀವ್ರ ಒತ್ತಡ ಮತ್ತು ಆಘಾತದಿಮದ ಕೂಡಿದ್ದವು. ನನ್ನೊಂದಿಗೆ ಶಕ್ತಿಯಾಗಿ ನಿಂತ ನನ್ನ ಕುಟುಂಬ, ಸ್ನೇಹಿತರು, ಚಲನಚಿತ್ರರಂಗದ ಬಂಧುಗಳು, ಅನ್ಯಾಯದ ವಿರುದ್ಧ ದನಿಯೆತ್ತಿ ನನ್ನ ಪರ ನಿಂತ ಪ್ರತಿಯೊಬ್ಬರಿಗೂ, ವಿಶೇಷವಾಗಿ ನನ್ನೊಂದಿಗೆ ದುಃಖಿಸಿ ಸಾಂತ್ವಾನ ಹೇಳಿದ ನನ್ನ ವಿದ್ಯಾರ್ಥಿಗಳಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನನ್ನ ಶಕ್ತಿಯನ್ನು ಮರಳಿ ಪಡೆಯಲು ಮತ್ತು ನ್ಯಾಯದ ಪರ ಹೋರಾಡಲು ನೀವೆಲ್ಲರೂ ನನಗೆ ಸಹಾಯ ಮಾಡಿದ್ದೀರಿ. ನಿಮ್ಮ ಪ್‍ರೀತಿ, ದಯೆಯ ಋಣ ತೀರಿಸುವ ಅವಕಾಶ ನನಗೆ ಸಿಗಲಿ ಎಂದು ನಾನು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.
ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ ಹಾಗೂ ಅದಕ್‍ಕಾಗಿ ಹೋರಾಡುತ್ತೇನೆ ಎಂದು ನಾನು ಪುನರುಚ್ಛರಿಸುತ್ತೇನೆ. ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ಹೆದರುವುದಿಲ್ಲ.

ಹಾರ್ವರ್ಡ್‍ನಲ್ಲಿ ನಾನೊಂದು ಶೈಕ್ಷಣಿಕೆ ಯೋಜನೆಯನ್ನು ಶುರು ಮಾಡಿದ್ದು, ಆ ಕಾಯಕವನ್ನು ಮುಂದುವರೆಸಲು ನಾನು ಅಮೆರಿಕಾಗೆ ಹಿಂತಿರುತ್ತಿದ್ದೇನೆ. ಈ ಸಮಯವು, ನನಗೆ ಇನ್ನಷ್ಟು ಕಲಿಯಲು, ಬೆಳೆಯಲು ಮತ್ತು ಎಲ್ಲಾ ಆಘಾತಗಳಿಂದ ಗುಣಮುಖಳಾಗಲು ಸಹಾಯ ಮಾಡುತ್ತದೆ ಎಂದು ನಾನು ನಂಬಿದ್ದೇನೆ. ಸರಿಯಾದ ಸಮಯ ಬಂದಾಗ ನಾನು ಹಿಂದಿರುಗುತ್ತೇನೆ ಮತ್ತು ಇಲ್ಲಿನ ಕೆಲಸಗಳನ್ನು ಮುಂದುವರತೆಸುತ್ತೇನೆ’ ಎಂದು ಅವರು ಪತ್ರ ಮುಗಿಸಿದ್ದಾರೆ.

ಕೆಲವು ತಿಂಗಳುಗಳ ಹಿಂದೆ ಯುವ ರಾಜಕುಮಾರ್‍ ಅಭಿನಯದ ಮೊದಲ ಚಿತ್ರ ‘ಯುವ’ ಬಿಡುಗಡೆಯಾಯಿತು. ಆ ಸಂದರ್ಭದಲ್ಲೇ ಯುವ ಮತ್ತು ಶ್ರೀದೇವಿ ದೂರಾಗಿದ್ದಾರೆ ಎಂಬ ಸುದ್ದಿ ಇತ್ತು. ಆದರೆ, ಆ ಸಂದರ್ಭದಲ್ಲಿ ಶ್ರೀದೇವಿ, ಅಮೇರಿಕಾಗೆ ಉನ್ನತ ಶಿಕ್ಷಣಕ್ಕೆ ಹೋಗಿದ್ದರಿಂದ ಪ್ರಕರಣ ತಣ್ಣಗಾಗಿತ್ತು. ಆ ನಂತರ ಜೂನ್‍ 6ರಂದು ಯುವ ರಾಜಕುಮಾರ್‍ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ಶ್ರೀದೇವಿ ಅವರಿಗೆ ನೋಟೀಸ್‍ ಜಾರಿಯಾಗಿದ್ದು, ಜುಲೈ 4ರಂದು ಫ್ಯಾಮಿಲಿ ಕೋರ್ಟ್‍ನಲ್ಲಿ ಈ ಬಗ್ಗೆ ವಿಚಾರಣೆ ನಡೆಯಲಿದೆ ಎಂದು ಹೇಳಲಾಗಿತ್ತು.

ಶ್ರೀದೇವಿ ಅವರು ಅಮೇರಿಕಾದಲ್ಲಿದ್ದರಿಂದ ಜುಲೈ ನಾಲ್ಕರ ಹೊತ್ತಿಗೆ ಬರುವ ನಿರೀಕ್ಷೆ ಇತ್ತು. ಆದರೆ, ನಾಲ್ಕರಂದು ಅವರು ಅಮೇರಿಕಾಗೆ ಹೊರಟು ನಿಂತಿದ್ದಾರೆ. ಈ ಮಧ್ಯೆ, ಪ್ರಕರಣ ಯಾವ ತಿರುವು ಪಡೆಯುವುದು ಇನ್ನಷ್ಟೇ ಗೊತ್ತಾಗಬೇಕಿದೆ.

Tags: