Mysore
23
mist

Social Media

ಸೋಮವಾರ, 17 ನವೆಂಬರ್ 2025
Light
Dark

ಶ್ರೀಮುರಳಿ ಹೊಸ ಚಿತ್ರ ‘ಉಗ್ರಾಯುಧಮ್’ಗೆ ಚಾಲನೆ

ಶ್ರೀಮುರಳಿ ಅಭಿನಯದ ಮುಂದಿನ ಚಿತ್ರ ಯಾವುದು ಎಂಬ ಪ್ರಶ್ನೆ ಕಳೆದೊಂದು ವರ್ಷದಿಂದ ಕೇಳಿಬರುತ್ತಲೇ ಇತ್ತು. ಅದಕ್ಕೆ ಉತ್ತರ ಮಾತ್ರ ಸಿಕ್ಕಿರಲಿಲ್ಲ. ಇದೀಗ ಶ್ರೀಮುರಳಿ ಅಭಿನಯದ ಎರಡು ಚಿತ್ರಗಳು ಒಂದು ವಾರದ ಅಂತರದಲ್ಲಿ ಶುರುವಾಗಿವೆ. ಕಳೆದ ವಾರವಷ್ಟೇ ಶ್ರೀಮುರಳಿ ಅಭಿನಯದ ‘ಪರಾಕ್‍’, ಶ್ರೀ ಬಂದೆ ಮಹಾಂಕಾಳಿ ದೇವಸ್ಥಾನದಲ್ಲಿ ಪ್ರಾರಂಭವಾಗಿತ್ತು. ಈಗ ಅದೇ ಸ್ಥಳದಲ್ಲಿ ಹೊಸ ಚಿತ್ರ ‘ಉಗ್ರಾಯುಧಮ್‍’ ಪ್ರಾರಂಭವಾಗಿದೆ.

‘ಉಗ್ರಾಯುಧಮ್‍’ ಚಿತ್ರಕ್ಕೆ ಶ್ರೀಮುರಳಿ ಅವರ ತಂದೆ ಹಾಗೂ ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ ಅವರು ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಎಸ್ ಎ.‌ಚಿನ್ನೇಗೌಡ ಹಾಗೂ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಜೊತೆಗೂಡಿ ಶೀರ್ಷಿಕೆ ಅನಾವರಣ ಮಾಡಿದರು.

‘ನಿದ್ರಾದೇವಿ ನೆಕ್ಸ್ಟ್ ಡೋರ್’ ಚಿತ್ರವನ್ನು ನಿರ್ಮಿಸಿದ್ದ ಜಯರಾಮ್‍ ದೇವಸಮುದ್ರ ಈ ‘ಉಗ್ರಾಯುಧಮ್‍’ ಚಿತ್ರವನ್ನು ನಿರ್ಮಿಸಿದರೆ, ಪುನೀತ್‍ ರುದ್ರನಾಗ್‍ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ‘ಪರಾಕ್‍’ ಮೊದಲು ಪ್ರಾರಂಭವಾಗಿದ್ದರೂ, ‘ಉಗ್ರಾಯುಧಮ್‍’ ಚಿತ್ರೀಕರಣ ಮೊದಲು ಪ್ರಾರಂಭವಾಗಲಿದ್ದು, ಮೊದಲು ಬಿಡುಗಡೆಯಾಗಲಿದೆ.

ಇದನ್ನು ಓದಿ : ‘ಜೋಡೆತ್ತು’ ಜತೆ ಬಂದ ಚಿಕ್ಕಣ್ಣ: ಮೂರು ಭಾಷೆಗಳಲ್ಲಿ ಮಹೇಶ್‍ ಸಿನಿಮಾ

‘ಉಗ್ರಾಯುಧಮ್‍’ ಕುರಿತು ಮಾತನಾಡಿದ ಪುನೀತ್‍ ರುದ್ರನಾಗ್‍, ‘ಇದೊಂದು 700 ವರ್ಷಗಳ ಹಿಂದಿನ ಪಿರಿಯಾಡಿಕ್ ಡ್ರಾಮ ಕಥಾಹಂದರ ಹೊಂದಿರುವ ಚಿತ್ರ. ನವೆಂಬರ್ ನಿಂದ ಚಿತ್ರೀಕರಣ ಆರಂಭವಾಗುತ್ತಿದೆ. ಸಕಲೇಶಪುರದ ಬಳಿ 135 ಎಕರೆ ವಿಸ್ತೀರ್ಣದ ಭೂಮಿಯಲ್ಲಿ ಅದ್ದೂರಿ ಸೆಟ್ ಹಾಕಲಾಗುತ್ತಿದ್ದು, ಅಲ್ಲೇ ಹೆಚ್ಚಿನ ಚಿತ್ರೀಕರಣ ನಡೆಯಲಿದೆ. ನಾನು ಡಾ. ರಾಜಕುಮಾರ್ ಅವರ ಅಪ್ಪಟ ಅಭಿಮಾನಿ. ಅವರ ಅಭಿನಯದ ಸಾಕಷ್ಟು ಐತಿಹಾಸಿಕ ಚಿತ್ರಗಳನ್ನು ನೋಡಿದ್ದೇನೆ. ಅದೇ ನನಗೆ ಈ ಚಿತ್ರ ನಿರ್ದೇಶನ ಮಾಡಲು ಸ್ಪೂರ್ತಿ’ ಎಂದರು.

ನಾನು ‘ಬಘೀರ’ ಚಿತ್ರದ ನಂತರ ಸುಮಾರು 200 ಕಥೆ ಕೇಳಿದ್ದೇನೆ ಎಂದು ಮಾತು ಪ್ರಾರಂಭಿಸಿದ ಶ್ರೀಮುರಳಿ, ‘ಅದರಲ್ಲಿ ನನಗೆ ಇಷ್ಟ ಆಗಿದ್ದು ಮೂರು ಕಥೆಗಳು ಮಾತ್ರ. ಆ ಪೈಕಿ ಎರಡು ಚಿತ್ರಗಳ ಮುಹೂರ್ತ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಇತ್ತೀಚೆಗೆ ನೆರವೇರಿದೆ. ‘ಬಘೀರ’ ಚಿತ್ರದ ನಂತರ ಬಿಡುಗಡೆಯಾಗುತ್ತಿರುವ ಶ್ರೀಮುರಳಿ ಅವರ ಚಿತ್ರ ಯಾವುದು ಅಂತ ಕೇಳಿದರೆ, ಅದು ‘ಉಗ್ರಾಯುಧಮ್’ ಅಂತ ಹೇಳಬಹುದು. ನಿರ್ದೇಶಕ ಪುನೀತ್ ರುದ್ರನಾಗ್ 700 ವರ್ಷಗಳ ಹಿಂದಿನ ಕಥೆಯನ್ನು ತೆರೆಯ ಮೇಲೆ ತರಲು ಮುಂದಾಗಿದ್ದಾರೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಹಂತಹಂತವಾಗಿ ನೀಡುತ್ತೇವೆ’ ಎಂದರು.

ಚಿತ್ರಕ್ಕೆ ದುಡಿಯುತ್ತಿರುವ ಇತರೆ ಕಲಾವಿದರು ಮತ್ತು ತಂತ್ರಜ್ಞರ ಪಟ್ಟಿ ಇನ್ನಷ್ಟೇ ಹೊರಬೀಳಬೇಕಿದೆ.

Tags:
error: Content is protected !!