ಮನರಂಜನೆ

ಜೋಗಪ್ಪ, ಜೋಗತಿಯಾಗಿ ಶ್ರೀನಗರ ಕಿಟ್ಟಿ ಹೊಸ ಅವತಾರ

ಶ್ರೀನಗರ ಕಿಟ್ಟಿ ಹೊಸ ಅವತಾರವೆತ್ತುವುದಕ್ಕೆ ತಯಾರಾಗುತ್ತಿದ್ದಾರೆ. ಈ ಬಾರಿ ಅವರು ‘ವೇಷಗಳು’ ಎಂಬ ಚಿತ್ರದಲ್ಲಿ ಜೋಗಪ್ಪ, ಜೋಗುತ್ತಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಬಸಪ್ಪ ಮತ್ತು ಬಸಪ್ಪ ಎಂಬ ಪಾತ್ರಗಳನ್ನು ನಿರ್ವಹಿಸುತ್ತಿದ್ದು, ಸೆಪ್ಟೆಂಬರ್‌ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಅದಕ್ಕೂ ಮೊದಲು ಇತ್ತೀಚೆಗೆ ಕಿಟ್ಟಿ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರದ ಶೀರ್ಷಿಕೆ ಟೀಸರ್‍ ಬಿಡುಗಡೆ ಮಾಡಲಾಗಿದೆ.

ಈ ಚಿತ್ರವು ಪತ್ರಕರ್ತ ರವಿ ಬೆಳಗೆರೆ ಅವರು ಜೋಗತಿಯರ ಜೀವನದ ಆಗು ಹೋಗುಗಳ ಬಗ್ಗೆ ಬರೆದಿರುವ ‘ವೇಷಗಳು’ ಎಂಬ ಸಣ್ಣ ಕಥೆಯನ್ನಾಧರಿಸಿದ ಚಿತ್ರವಾಗಿದೆ. ಈ ಚಿತ್ರವನ್ನು ಗ್ರೀನ್ ಟ್ರೀ ಸ್ಟುಡಿಯೋಸ್ ಅಡಿಯಲ್ಲಿ ಕಿಶನ್ ರಾವ್ ದಳವಿ ನಿರ್ಮಿಸುವುದರ ಜೊತೆಗೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಶ್ರೀನಗರ ಕಿಟ್ಟಿ, ‘ರವಿ ಬೆಳಗೆರೆ ಅವರ ಬರಹ, ಬರವಣಿಗೆ, ತಾಕತ್ತು, ಅದಕ್ಕಿದ್ದ ಉದ್ಧ, ಆಳ, ಅಳತೆಗೆ ಬೇರೆ ಆಯಾಮ ಇದೆ. ಅವರ ಕಥೆಗಳಲ್ಲಿರುವ ವೈವಿಧ್ಯತೆ ಅದ್ಭುತ. ‘ವೇಷಗಳು’ ನನ್ನನ್ನು ಬಹಳ ಕಾಡಿದ ಕಥೆ. ಅದನ್ನು ಆಧರಿಸಿ ಈ ಚಿತ್ರ ಮಾಡಲಾಗುತ್ತಿದೆ. ಸದ್ಯದಲ್ಲೇ ಮಂಜಮ್ಮ ಜೋಗತಿ ಅವರನ್ನು ಸಂಪರ್ಕಿಸಿ ಪಾತ್ರಕ್ಕಾಗಿ ಒಂದಿಷ್ಟು ಮಾಹಿತಿ ಪಡೆಯಲಿದ್ದೇನೆ. ಆ ನಂತರ ಸಿದ್ಧತೆ ಮಾಡಿಕೊಂಡು ಚಿತ್ರೀಕರಣದಲ್ಲಿ ಭಾಗವಹಿಸುತ್ತೇನೆ’ ಎಂದರು.

‘ವೇಷಗಳು’ ಚಿತ್ರದ ಚಿತ್ರೀಕರಣ ಮಧ್ಯಪ್ರದೇಶದ ಮಹಾಕಾಲೇಶ್ವರ, ಉತ್ತರ ಕರ್ನಾಟಕ, ಬೆಂಗಳೂರು ಹಾಗೂ ಮೈಸೂರಲ್ಲಿ ನಡೆಯಲಿದೆ. ಮುಂದಿನ ದಿನಗಳಲ್ಲಿ ಚಿತ್ರದ ಉಳಿದ ಕಲಾವಿದರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ನಿರ್ದೇಶಕ ಕಿಶನ್ ರಾವ್ ತಿಳಿಸಿದರು. ಚಿತ್ರಕ್ಕೆ ಕೌಶಿಕ್ ಹರ್ಷ ಸಂಗೀತ, ರಾಜ್ ಗುರು ದತ್ತರಾಜ್ ಸಂಭಾಷಣೆ, ಅಕ್ಷಯ್ ಪಿ.ರಾವ್ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

ನಾಳೆ ಶ್ರೀ ಅಯ್ಯಪ್ಪ ಕ್ಷೇತ್ರದ ಮುಖಮಂಟಪ ಲೋಕಾರ್ಪಣೆ

ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…

22 mins ago

‘ದೇಸಿ ಬೀಜಗಳನ್ನು ಉಳಿಸಿದರೆ ವಿಷಮುಕ್ತ ಆಹಾರ ನೀಡಲು ಸಾಧ್ಯ’

ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…

27 mins ago

ಕ್ರಿಸ್‌ಮಸ್ ಹಬ್ಬಕ್ಕೆ ಅರಮನೆ ನಗರಿ ಸಜ್ಜು

ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…

32 mins ago

ಡಿಎಚ್‌ಒ ವರ್ಗಾವಣೆಯಲ್ಲಿ ಎಡವಟ್ಟು

ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…

35 mins ago

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

12 hours ago