gst movie
ಶಿವರಾಜಕುಮಾರ್ ಅಭಿನಯದ ‘ಘೋಸ್ಟ್’ ಚಿತ್ರದ ನಂತರ ಮೈಸೂರಿನ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಯಾವುದೇ ಹೊಸ ಚಿತ್ರ ಬಿಡುಗಡೆಯಾಗಿರಲಿಲ್ಲ. ಈಗ ಈ ಸಂಸ್ಥೆಯ ಹೊಸ ಚಿತ್ರ ‘GST’ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರದಲ್ಲಿ ಸೃಜನ್ ನಾಯಕನಾಗಿ ನಟಿಸುತ್ತಿರುವುದಷ್ಟೇ ಅಲ್ಲ, ಮೊದಲ ಬಾರಿಗೆ ನಿರ್ದೇಶನ ಸಹ ಮಾಡಿದ್ದಾರೆ.
ಎರಡು ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು ‘GST’. ಇದೀಗ ಚಿತ್ರ ಬಿಡುಗಡೆಗೆ ಸಿದ್ಧವಿದ್ದು, ಪ್ರಾದೇಶಿಕ ಸೆನ್ಸಾರ್ ಮಂಡಳಿಯಿಂದ ‘U/A’ ಪ್ರಮಾಣಪತ್ರವನ್ನು ಪಡೆದಿದ್ದು, ಸದ್ಯದಲ್ಲೇ ಬಿಡುಗಡೆ ಆಗಲಿದೆ. ಮನೋರಂಜನೆಯೇ ಪ್ರಧಾನವಾಗಿರುವ ‘GST’ ಚಿತ್ರಕ್ಕೆ ‘ಘೋಸ್ಟ್ ಇನ್ ಟ್ರಬಲ್’ ಎಂಬ ಅಡಿಬರಹವಿದೆ.
ವಿಶೇಷವೆಂದರೆ, ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಅವರ ಮಗ ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಮೂವರೂ ನಟಿಸಿದ್ದಾರೆ. ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ಈ ಚಿತ್ರದಲ್ಲಿ ನೋಡಬಹುದು. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಹಾಗೂ ಮಗನನ್ನು ನಿರ್ದೇಶಿಸಿದ್ದಾರೆ.
ಸೃಜನ್ ಲೋಕೇಶ್ ಅವರಿಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ. ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ಶೋಭರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಪ್ರಮುಖ ಪಾತ್ರದಲ್ಲಿ ನಟಸಿದ್ದಾರೆ. ಅವರ ಪಾತ್ರ ಏನೆಂಬುದ್ದನ್ನು ನಿರ್ದೇಶಕ ಸೃಜನ್ ಲೋಕೇಶ್ ಗುಪ್ತವಾಗಿಟ್ಟಿದ್ದಾರೆ.
ಈ ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ಹಾಗೂ ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣವಿದೆ.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…