ಬೆಳಕಿನ ಹಬ್ಬ ದೀಪಾವಳಿಗೆ ಇನ್ನೇನು ಎರಡು ದಿನಗಳಷ್ಟೇ ಬಾಕಿ ಇದೆ. ಪ್ರತೀ ಬಾರಿ ದೀಪಾವಳಿಗೆ ಬೇರೆಬೇರೆ ಭಾಷೆಗಳಲ್ಲಿ ಒಂದಿಷ್ಟು ನಿರೀಕ್ಷೆಯ ಮತ್ತು ದೊಡ್ಡ ಬಜೆಟ್‍ನ ಚಿತ್ರಗಳು ಬಿಡುಗಡೆಯಾಗುತ್ತವೆ. ಅದಕ್ಕೆ ಈ ಬಾರಿ ಸಹ ಹೊರತಲ್ಲ. ಈ ಬಾರಿಯೂ ಒಂದಿಷ್ಟು ನಿರೀಕ್ಷಿತ ಚಿತ್ರಗಳು ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.
ಈ ಪೈಕಿ ಕನ್ನಡದಲ್ಲೊಂದಿಷ್ಟು ಚಿತ್ರಗಳಿವೆಯಾದರೂ, ಹೆಚ್ಚು ಚರ್ಚೆಯಲ್ಲಿರುವುದು ಶ್ರೀಮುರಳಿ ಅಭಿನಯದ ‘ಬಘೀರ’. ಕಳೆದ ಮೂರು ವರ್ಷಗಳಿಂದ ನಿರ್ಮಾಣದಲ್ಲಿರುವ ಈ ಚಿತ್ರ ಕೊನೆಗೂ ಈ ದೀಪಾವಳಿಗೆ ಬಿಡುಗಡೆಯಾಗುತ್ತಿದೆ. ಶ್ರೀಮುರಳಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಹೊಂಬಾಳೆ ಫಿಲಂಸ್ ಸಂಸ್ಥೆಯು ಈ ಚಿತ್ರವನ್ನು ನಿರ್ಮಿಸಿದೆ.
ಹಿಂದಿಯಲ್ಲಿ ಈ ವಾರ ಎರಡು ಪ್ರಮುಖ ಚಿತ್ರಗಳು ಬಿಡುಗಡೆಯಾಗುತ್ತಿವೆ. ಒಂದು ‘ಸಿಂಗಂ ಅಗೇನ್’, ಇನ್ನೊಂದು ‘ಭೂಲ್ ಬುಲಯ್ಯ’. ಎರಡೂ ಚಿತ್ರಗಳು ಜನಪ್ರಿಯ ಸರಣಿಯ ಚಿತ್ರಗಳಾಗಿರುವುದು ವಿಶೇಷ. ‘ಸಿಂಗಂ’ ಮತ್ತು ‘ಸಿಂಗಂ ರಿಟರ್ನ್ಸ್’ ನಂತರ ಸಿಂಗಂ ಪಾತ್ರದಲ್ಲಿ ಅಜಯ್ ದೇವಗನ್ ಕಾಣಿಸಿಕೊಳ್ಳುತ್ತಿದ್ದಾರೆ. ಅವರೊಂದಿಗೆ ಬಹುತಾರಗಣವೇ ಇದೆ. ಅಕ್ಷಯ್ ಕುಮಾರ್, ಕರೀನಾ ಕಪೂರ್, ದೀಪಿಕಾ ಪಡುಕೋಣೆ, ಟೈಗರ್ ಶ್ರಾಫ್, ರಣವೀರ್ ಸಿಂಗ್ ಮತ್ತು ಅರ್ಜುನ್ ಕಪೂರ್ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
‘ಭೂಲ್ ಬುಲಯ್ಯ 3’ ಸಹ ಜನಪ್ರಿಯ ಸರಣಿಯೊಂದರ ಚಿತ್ರ. ಮಲಯಾಳಂನ ‘ಮಣಿಚಿತ್ರತಾಳ್’ ಆಧರಿಸಿ ಕೆಲವು ವರ್ಷಗಳ ಹಿಂದೆ ‘ಭೂಲ್ ಬುಲಯ್ಯ’ ಚಿತ್ರವು ಬಿಡುಗಡೆಯಾಗಿತ್ತು. ಆ ಚಿತ್ರದಲ್ಲಿ ಅಕ್ಷಯ್ ಕುಮಾರ್ ನಾಯಕನಾಗಿ ಕಾಣಿಸಿಕೊಂಡರೆ, ಎರಡನೆಯ ಭಾಗದಲ್ಲಿ ಕಾರ್ತಿಕ್ ಆರ್ಯನ್ ನಟಿಸಿದ್ದರು. ಮೂರನೆಯ ಭಾಗದಲ್ಲೂ ಅವರೇ ಮುಂದುವರೆದಿದ್ದು, ಈ ಚಿತ್ರದಲ್ಲಿ ವಿದ್ಯಾ ಬಾಲನ್ ಮತ್ತು ಮಾಧುರಿ ದೀಕ್ಷಿತ್ ಅಂಜುಲಿಕಾ ಮತ್ತು ಮಂಜುಲಿಕಾ ಎಂಬ ದೆವ್ವಗಳಾಗಿ ಕಾಣಿಸಿಕೊಂಡಿದ್ದಾರೆ.
ಇದಲ್ಲದೆ ಶಿವಕಾರ್ತಿಕೇಯನ್ ಅಭಿನಯದ ತಮಿಳಿನ ‘ಅಮರನ್’, ಜಯಂ ರವಿ ಅಭಿನಯದ ‘ಬ್ರದರ್’, ಮಲಯಾಳಂ ನಟ ದುಲ್ಕರ್ ಸಲ್ಮಾನ್ ಅಭಿನಯದ ತೆಲುಗು ಚಿತ್ರ ‘ಲಕ್ಕಿ ಭಾಸ್ಕರ್’ ಚಿತ್ರಗಳು ಬಿಡುಗಡೆಯಾಗುತ್ತಿವೆ.
ಇವಲ್ಲದೆ, ಕನ್ನಡದ ನಟ ಧನಂಜಯ್ ಅಭಿನಯದ ತೆಲುಗು ಚಿತ್ರ ‘ಜೀಬ್ರಾ’ ಸಹ ಇದೇ ವಾರ ಬಿಡುಗಡೆಯಾಗಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಚಿತ್ರವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.
ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…
ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…
ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…
ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…
ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡುವಂತೆ…
ಮೈಸೂರು : ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧಿಸಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.…