‘ಕೆಲವರು ಚಿಲ್ಲರೆ ಹೇಳಿಕೆಗಳನ್ನು ಕೊಡುವುದನ್ನು ಗಮನಿಸಿದ್ದೇನೆ. ರಿಟೈರ್ಡ್ ಆಗಿರುವವರೆಲ್ಲ ಮಾತನಾಡುವುದಕ್ಕೆ ಶುರು ಮಾಡಿದ್ದಾರೆ. ಮಾತಾಡುವವರು ಚಿತ್ರರಂಗವನ್ನು ಮೊದಲು ಉಳಿಸಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾನುವಾರ (ಏಪ್ರಿಲ್ 27), ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಕನ್ನಡ ಚಿತ್ರರಂಗದ ಸದಸ್ಯರು ಹಾಗೂ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್, ಶಿವರಾಜಕುಮಾರ್, ಧ್ರುವ ಸರ್ಜಾ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಹಲವು ವಿಷಯಗಳ ಕುರಿತು ಮಾತನಾಡಿದರು.
‘ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗಕ್ಕೆ ಗೌರವ ಬಂದಿದೆ. ಅದನ್ನು ಕಾಪಾಡಿಕೊಳ್ಳಬೇಕು. ಕೆಲವರು ಚಿಲ್ಲರೆ ಹೇಳಿಕೆಗಳನ್ನು ಕೊಡುವುದನ್ನು ಗಮನಿಸಿದ್ದೇನೆ. ರಿಟೈರ್ಡ್ ಆಗಿರುವವರೆಲ್ಲ ಮಾತನಾಡುವುದಕ್ಕೆ ಶುರು ಮಾಡಿದ್ದಾರೆ. ಮಾತಾಡುವವರು ಚಿತ್ರರಂಗವನ್ನು ಮೊದಲು ಉಳಿಸಿ. ಚಿತ್ರಮಂದಿರಗಳನ್ನು ಕಟ್ಟಿ. ಹೊಸ ಚಿತ್ರಗಳನ್ನು ನಿರ್ಮಾಣ ಮಾಡಿ. ಆಗ ಅದರ ಬೆಲೆ ಗೊತ್ತಾಗುತ್ತದೆ. ಹಿಂದಿನ ಕಾಲಕ್ಕೂ ಈಗಿನ ಕಾಲಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಸರ್ಕಾರ ಎಲ್ಲಾ ರೀತಿಯಲ್ಲೂ ಸಹಾಯ ಮಾಡುವುದಕ್ಕೆ ಬದ್ಧವಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವವನ್ನು ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ಮಾಡಬೇಕು ಎಂದು ಚರ್ಚೆ ಪ್ರಾರಂಭಿಸಿದ್ದೇನೆ. ಚಿತ್ರರಂಗಕ್ಕೆ ಹೊಸ ಕಿರೀಟ ಕೊಡುವ ಆಸೆ ಇದೆ. ಬ್ರ್ಯಾಂಡ್ ಬೆಂಗಳೂರು, ಬ್ರ್ಯಾಂಡ್ ಕರ್ನಾಟಕ ಕಟ್ಟುವುದಕ್ಕೆ ಎಲ್ಲರೂ ಒಟ್ಟಿಗೆ ಕೆಲಸ ಮಾಡೋಣ’ ಎಂದರು.
ಡಾ. ರಾಜಕುಮಾರ್ ಮತ್ತು ಅವರ ಕುಟುಂಬದವರು ಈ ರಾಜ್ಯಕ್ಕೆ ಕೊಟ್ಟ ಕೊಡುಗೆ ಅಪಾರ ಎಂದ ಅವರು, ‘ರಾಜ್ ಕುಟುಂಬದವರು ಯಾವತ್ತೂ ಈ ರಾಜ್ಯದ ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಗೆ ಅಪಾರವಾದ ತ್ಯಾಗವನ್ನು ನಾವು ಮರೆಯೋಕೆ ಸಾಧ್ಯವಿಲ್ಲ. ಸರಕಾರ ಸದಾ ಅವರ ಜೊತೆಗೆ ಇದೆ. ಡಾ. ರಾಜಕುಮಾರ್ ಅವರು ಕಿಡ್ನಾಪ್ ಆಗಿದ್ದಾಗ, ಎಸ್.ಎಂ. ಕೃಷ್ಣ ಅವರ ಸರ್ಕಾರವಿದ್ದ ಸಂದರ್ಭದಲ್ಲಿ, ಅವರನ್ನು ಬಿಡಿಸಿ ತಂದ ಪ್ರಯತ್ನ ಇದಕ್ಕೆ ಸಾಕ್ಷಿ. ಅವರ ಕೊಡುಗೆ, ಎಲ್ಲಾ ಚಿತ್ರರಂಗಗಳಿಗೂ ಮಾದರಿ’ ಎಂದರು.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…