ಮನರಂಜನೆ

ಚಿಲ್ಲರೆ ಮಾತು ಬಿಟ್ಟು ಸಿನಿಮಾ ಮಾಡಿ: ಚಿತ್ರರಂಗದವರಿಗೆ ಡಿ.ಕೆ. ಶಿವಕುಮಾರ್ ಕಿವಿಮಾತು

‘ಕೆಲವರು ಚಿಲ್ಲರೆ ಹೇಳಿಕೆಗಳನ್ನು ಕೊಡುವುದನ್ನು ಗಮನಿಸಿದ್ದೇನೆ. ರಿಟೈರ್ಡ್ ಆಗಿರುವವರೆಲ್ಲ ಮಾತನಾಡುವುದಕ್ಕೆ ಶುರು ಮಾಡಿದ್ದಾರೆ. ಮಾತಾಡುವವರು ಚಿತ್ರರಂಗವನ್ನು ಮೊದಲು ಉಳಿಸಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‍ ಹೇಳಿದ್ದಾರೆ.

ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾನುವಾರ (ಏಪ್ರಿಲ್‍ 27), ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಕನ್ನಡ ಚಿತ್ರರಂಗದ ಸದಸ್ಯರು ಹಾಗೂ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್, ಶಿವರಾಜಕುಮಾರ್, ಧ್ರುವ ಸರ್ಜಾ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್‍ ಹಲವು ವಿಷಯಗಳ ಕುರಿತು ಮಾತನಾಡಿದರು.

‘ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗಕ್ಕೆ ಗೌರವ ಬಂದಿದೆ. ಅದನ್ನು ಕಾಪಾಡಿಕೊಳ್ಳಬೇಕು. ಕೆಲವರು ಚಿಲ್ಲರೆ ಹೇಳಿಕೆಗಳನ್ನು ಕೊಡುವುದನ್ನು ಗಮನಿಸಿದ್ದೇನೆ. ರಿಟೈರ್ಡ್ ಆಗಿರುವವರೆಲ್ಲ ಮಾತನಾಡುವುದಕ್ಕೆ ಶುರು ಮಾಡಿದ್ದಾರೆ. ಮಾತಾಡುವವರು ಚಿತ್ರರಂಗವನ್ನು ಮೊದಲು ಉಳಿಸಿ. ಚಿತ್ರಮಂದಿರಗಳನ್ನು ಕಟ್ಟಿ. ಹೊಸ ಚಿತ್ರಗಳನ್ನು ನಿರ್ಮಾಣ ಮಾಡಿ. ಆಗ ಅದರ ಬೆಲೆ ಗೊತ್ತಾಗುತ್ತದೆ. ಹಿಂದಿನ ಕಾಲಕ್ಕೂ ಈಗಿನ ಕಾಲಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಸರ್ಕಾರ ಎಲ್ಲಾ ರೀತಿಯಲ್ಲೂ ಸಹಾಯ ಮಾಡುವುದಕ್ಕೆ ಬದ್ಧವಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವವನ್ನು ಡಿಸೆಂಬರ್‍ ಅಥವಾ ಜನವರಿ ತಿಂಗಳಲ್ಲಿ ಮಾಡಬೇಕು ಎಂದು ಚರ್ಚೆ ಪ್ರಾರಂಭಿಸಿದ್ದೇನೆ. ಚಿತ್ರರಂಗಕ್ಕೆ ಹೊಸ ಕಿರೀಟ ಕೊಡುವ ಆಸೆ ಇದೆ. ಬ್ರ್ಯಾಂಡ್‍ ಬೆಂಗಳೂರು, ಬ್ರ್ಯಾಂಡ್‍ ಕರ್ನಾಟಕ ಕಟ್ಟುವುದಕ್ಕೆ ಎಲ್ಲರೂ ಒಟ್ಟಿಗೆ ಕೆಲಸ ಮಾಡೋಣ’ ಎಂದರು.

ಡಾ. ರಾಜಕುಮಾರ್‍ ಮತ್ತು ಅವರ ಕುಟುಂಬದವರು ಈ ರಾಜ್ಯಕ್ಕೆ ಕೊಟ್ಟ ಕೊಡುಗೆ ಅಪಾರ ಎಂದ ಅವರು, ‘ರಾಜ್‍ ಕುಟುಂಬದವರು ಯಾವತ್ತೂ ಈ ರಾಜ್ಯದ ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಗೆ ಅಪಾರವಾದ ತ್ಯಾಗವನ್ನು ನಾವು ಮರೆಯೋಕೆ ಸಾಧ್ಯವಿಲ್ಲ. ಸರಕಾರ ಸದಾ ಅವರ ಜೊತೆಗೆ ಇದೆ. ಡಾ. ರಾಜಕುಮಾರ್‍ ಅವರು ಕಿಡ್ನಾಪ್‍ ಆಗಿದ್ದಾಗ, ಎಸ್‍.ಎಂ. ಕೃಷ್ಣ ಅವರ ಸರ್ಕಾರವಿದ್ದ ಸಂದರ್ಭದಲ್ಲಿ, ಅವರನ್ನು ಬಿಡಿಸಿ ತಂದ ಪ್ರಯತ್ನ ಇದಕ್ಕೆ ಸಾಕ್ಷಿ. ಅವರ ಕೊಡುಗೆ, ಎಲ್ಲಾ ಚಿತ್ರರಂಗಗಳಿಗೂ ಮಾದರಿ’ ಎಂದರು.

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

4 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

5 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

6 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

6 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

12 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

12 hours ago