ನವದೆಹಲಿ: ತೆಲುಗಿನ ಬಹುನಿರೀಕ್ಷಿತ ಹಾಗೂ ಪ್ಯಾನ್ ಇಂಡಿಯಾ ಚಿತ್ರವಾಗಿರುವ ಪುಷ್ಪ-2 ದಿ ರೂಲ್ ಸಿನಿಮಾ ಟಿಕೆಟ್ ದರ ಏರಿಸಲು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅನುಮತಿ ನೀಡಿದ್ದು, ನಟ ಅಲ್ಲು ಅರ್ಜುನ್ ಧನ್ಯವಾದ ತಿಳಿಸಿದ್ದಾರೆ.
ತೆಲುಗು ಚಿತ್ರರಂಗದ ಸ್ಟೈಲಿಶ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ಅಲ್ಲು ಅರ್ಜುನ್ ನಟಿಸಿರುವ ಈ ಸಿನಿಮಾಗೆ ಮೂವಿ ಮೇಕರ್ಸ್ ಬಂಡವಾಳ ಹೂಡಿದ್ದು, ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈ ಸಿನಿಮಾವನ್ನು ಸುಕುಮಾರ್ ನಿರ್ದೇಶನ ಮಾಡಿದ್ದಾರೆ.
ಟಿಕೆಟ್ ದರ ಹೆಚ್ಚಿಸಲು ಸಿಎಂ ಒಪ್ಪಿಗೆ ಸೂಚಿಸಿರುವ ಕಾರಣ ನಟ ಅಲ್ಲು ಅರ್ಜುನ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸಿಎಂ ಚಂದ್ರಬಾಬು ನಾಯ್ಡುರಿಗೆ ಧನ್ಯವಾದ ತಿಳಿಸಿದ್ದಾರೆ.
ತೆಲುಗು ಚಿತ್ರರಂಗದ ಬೆಳವಣಿಗೆಗಾಗಿ ತೆಗೆದುಕೊಂಡಿರುವ ಈ ನಿರ್ಧಾರವು, ಸಿನಿಮಾದ ಮೇಲೆ ಇರುವ ನಿಮ್ಮ ಬದ್ದತೆಯನ್ನು ತೋರಿಸುತ್ತದೆ. ಚಲನಚಿತ್ರೋದ್ಯಮವನ್ನು ಸಶಕ್ತಗೊಳಿಸಲು ಹೀಗೆ ನಮಗೆ ಪ್ರೋತ್ಸಾಹ ನೀಡುತ್ತಾ ಇರಿ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್‌ರಿಗೆ ಧನ್ಯವಾದ ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…