ಬೆಂಗಳೂರು: ʼತುಂಬಿದ ಮನೆʼ, ʼಅವಳೇ ನನ್ನ ಹೆಂಡ್ತಿʼ ಹೀಗೆ ಹಲವಾರು ಉತ್ತಮ ಸಿನಿಮಾ ನಿರ್ದೇಶನ ಮಾಡಿದ್ದ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ಉಮೇಶ್ (68) ಕಿಡ್ನಿ ವೈಫಲ್ಯದಿಂದಾಗಿ ಶುಕ್ರವಾರ ನಿಧನರಾಗಿದ್ದಾರೆ.
ಉಮೇಶ್ ಅವರಿಗೆ ಪತ್ನಿ, ಮೂವರು ಮಕ್ಕಳು ಇದ್ದಾರೆ. ಸಂಜೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಿತು.
1973ರಲ್ಲಿ ಸಂಕಲನಕಾರರಾಗಿ ಚಿತ್ರರಂಗ ಪ್ರವೇಶಿಸಿದ ಉಮೇಶ್ ಅವರು, ಸುಮಾರು 33 ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.
ಕಾಶಿನಾಥ್ ನಟನೆಯ ʼಅವಳೇ ನನ್ನ ಹೆಂಡ್ತಿʼ ಚಿತ್ರದ ಕಥೆ ಬರೆದವರು ಉಮೇಶ್. ಈ ಚಲನಚಿತ್ರ ತಮಿಳಿಗೂ ರಿಮೇಕ್ ಆಗಿತ್ತು. ʼಅವನೇ ನನ್ನ ಗಂಡʼ, ʼನಂಬಿದರೆ ನಂಬಿ ಬಿಟ್ರೆ ಬಿಡಿʼ, ʼಸಿಡಿದೆದ್ದ ಗಂಡುʼ, ʼಪ್ರೇಮ ಪರೀಕ್ಷೆʼ, ʼರಾಜಾ ಕೆಂಪು ರಾಜಾʼ, ʼಎಲ್ಲರಂಥಲ್ಲ ನನ್ನ ಗಂಡʼ, ʼದಾಯಾದಿʼ, ʼಅವಳೇ ನನ್ನ ಹುಡುಗಿʼ, ʼಮದುವೆ ದಿಬ್ಬಣʼ, ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.
ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…
ಮೈಸೂರು: ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…
ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…