ಮನರಂಜನೆ

ಸೈಕ್ ಸೈತಾನ್’ ಆದ ಸುದೀಪ್‍; ‘ಮಾರ್ಕ್’ ಚಿತ್ರದ ಮೊದಲ ಹಾಡು ಬಿಡುಗಡೆ ಸುದೀಪ್‍

‘ಮಾರ್ಕ್’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಚಿತ್ರವು ಡಿಸೆಂಬರ್.25ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಸರೆಗಮಪ ಕನ್ನಡ ಯೂಟ್ಯೂಬ್ ಚಾನೆಲ್ ನಲ್ಲಿ ‘ಸೈಕ್ ಸೈತಾನ್ …’ ಎಂಬ ಮಾಸ್ ಗೀತೆ ಬಿಡುಗಡೆಯಾಗಿದೆ.

ಅನೂಪ್ ಭಂಡಾರಿ ಹಾಡಿಗೆ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್, ಅಜನೀಶ್ ಲೋಕನಾಥ್ ಹಾಗೂ ಅನಿರುದ್ಧ ಶಾಸ್ತ್ರಿ ಧ್ವನಿಯಾಗಿದ್ದಾರೆ. ಅಜನೀಶ್ ಲೋಕನಾಥ್ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ. ಈ ‘ಸೈಕೋ ಸೈತಾನ್‌ …’ ಹಾಡು ಬಿಡುಗಡೆಯಾದ ಬೆನ್ನಲ್ಲೇ ಮಾರ್ಕ್‌ ಚಿತ್ರತಂಡ ಸಿನಿಮಾ ಪ್ರೇಮಿಗಳಿಗೆ ಹುಕ್‌ ಸ್ಟೆಪ್‌ ಡ್ಯಾನ್ಸ್‌ ಚಾಲೆಂಜ್‌ ನೀಡಿದೆ.

ಇದನ್ನು ಓದಿ: ಸುದೀಪ್‍ ಸೋದರಳಿಯ ಸಂಚಿತ್‍ ಅಭಿನಯದ ‘ಮ್ಯಾಂಗೋ ಪಚ್ಚ’ ಚಿತ್ರದ ಟೀಸರ್ ಬಂತು

ಈ ಹಾಡಿನಲ್ಲಿ ಸುದೀಪ್‌ ಹಾಕಿದ ಸ್ಟೆಪ್‌ಗಳಲ್ಲಿ ಯಾವುದಾದರೂ ಆಯ್ಕೆ ಮಾಡಿಕೊಂಡು ಡ್ಯಾನ್ಸ್‌ ಮಾಡಬೇಕು. ಬಳಿಕ ಅದನ್ನ ಇನ್‌ಸ್ಟಾಗ್ರಾಂ ಅಕೌಂಟ್‌ನಲ್ಲಿ ಪೋಸ್ಟ್‌ ಮಾಡಬೇಕು. ಹೀಗೆ ವಿಡಿಯೊ ಪೋಸ್ಟ್‌ ಮಾಡುವಾಗ @markthefilm ಇನ್‌ಸ್ಟಾ ಅಕೌಂಟ್‌ನ್ನ ಟ್ಯಾಗ್‌ ಮಾಡಿರಬೇಕು ಮತ್ತು #MARKHOOKSTEPCHALLENGE ಎಂದು ಹ್ಯಾಷ್‌ಟ್ಯಾಗ್‌ ಬಳಸಿರಬೇಕು. ಅತ್ಯುತ್ತಮ ರೀಲ್ಸ್‌ಗಳಿಗೆ @markthefilm ಇನ್‌ಸ್ಟಾ ಪೇಜ್‌ನಲ್ಲಿ ಶೇರ್‌ ಮಾಡಿಕೊಳ್ಳಲು ಮತ್ತು ಅವರಿಗೆ ಬಹುಮಾನ ನೀಡಲು ಚಿತ್ರತಂಡ ತೀರ್ಮಾನ ಮಾಡಿದೆ.

ಈ ಹಿಂದೆ ‘ಮ್ಯಾಕ್ಸ್’ ಚಿತ್ರವನ್ನು ನಿರ್ದೇಶಿಸಿದ್ದ ವಿಜಯ್‍ ಕಾರ್ತಿಕೇಯ, ‘ಮಾರ್ಕ್’ ಚಿತ್ರಕ್ಕೂ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸತ್ಯಜ್ಯೋತಿ ಫಿಲ್ಮ್ಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ಗಳು ಜೊತೆಯಾಗಿ ನಿರ್ಮಿಸುತ್ತಿವೆ. ಚಿತ್ರಕ್ಕೆ ಶೇಖರ್ ಚಂದ್ರ ಛಾಯಾಗ್ರಹಣ, ಗಣೇಶ್ ಬಾಬು ಸಂಕಲನವಿದೆ.

‘ಮಾರ್ಕ್’ ಚಿತ್ರದಲ್ಲಿ ಸುದೀಪ್‍, ಗೋಪಾಲಕೃಷ್ಣ ದೇಶಪಾಂಡೆ, ರಾಘು ರಾಮನಕೊಪ್ಪ, ರೋಶನಿ ಪ್ರಕಾಶ್‍, ಅರ್ಚನಾ ಕೊಟ್ಟಿಗೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

5 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

6 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

7 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

8 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

8 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

9 hours ago