ಬೆಂಗಳೂರು: ಕನ್ನಡ ಬಿಗ್ ಬಾಸ್ 11ನೇ ಆವೃತ್ತಿ ಎರಡನೇ ವಾರ ಕಳೆದು ಮೂರನೇ ವಾರಕ್ಕೆ ಕಾಲಿಟ್ಟಿದೆ. ಈ ನಡುವೆ ಬಿಗ್‌ಬಾಸ್‌ನ ನಿರೂಪಕ ಕಿಚ್ಚ ಸುದೀಪ್ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದು, ಇದೇ ತಮ್ಮ ಕೊನೆಯ ಸೀಸನ್ ಎಂದು ಘೋಷಿಸಿದ್ದಾರೆ.
ಈ ಬಗ್ಗೆ ಸುದೀಪ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅಧಿಕೃತ ಘೋಷಣೆ ಮಾಡಿದ್ದು, ಈ 10ಪ್ಲಸ್ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನ ಹರಿಸುವ ಸಮಯ ಬಂದಿದೆ ಎಂದಿದ್ದಾರೆ.
ಬಿಗ್‌ಬಾಸ್ ಕನ್ನಡ 11 ರ ಶೋಗೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾದಗಳು. ಸಿಕ್ಕಿರುವ ಟಿಆರ್‌ಪಿ ನೋಡಿದರೆ ನನ್ನ ಬಗ್ಗೆ ಮತ್ತು ಶೋ ಬಗ್ಗೆ ನೀವು ತೋರಿಸಿದ ಪ್ರೀತಿ ತಿಳಿಯುತ್ತದೆ. ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್ ಬಾಸ್. ಇಷ್ಟು ವರ್ಷಗಳ ಕಾಲ ಬಿಗ್‌ಬಾಸ್ ಕಾರ್ಯಕ್ರಮವನ್ನು ನೋಡಿ ನೀವು ಮತು ಕಲರ್ಸ್‌ನವರು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇನೆ. ಈ ನಿರ್ಧಾರ ಅತ್ಯುತ್ತಮ ಆಗುವಂತೆ ಮಾಡೋಣ ಎಂದು ಬರೆದುಕೊಂಡಿದ್ದಾರೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…